Friday, November 20, 2026

ಪ್ರಾಯೋಗಿಕ ಆವೃತ್ತಿ

ರಾಷ್ಟ್ರಕವಿ ಕುವೆಂಪುರವರ 119ನೇ ಜನ್ಮ ದಿನಾಚರಣೆ

ಕೃಷಿಕ ಲಯನ್ ಸಂಸ್ಥೆ ಮತ್ತು ಪ್ರತಿಭಾಂಜಲಿ ಸುಗಮ ಸಂಗೀತ ಅಕಾಡೆಮಿ ವತಿಯಿಂದ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ವಿಶ್ವಮಾನವ ಹಾಗೂ ರಾಷ್ಟ್ರಕವಿ ಕುವೆಂಪುರವರ 119ನೇ ಜನ್ಮ ದಿನಾಚರಣೆ ಪ್ರಯುಕ್ತ ವಿಶ್ವಮಾನವನಾಗು ಎನ್ನುವ ಸಮಾರಂಭವನ್ನು 29.12.2022ನೇ ಗುರುವಾರ ಬೆಳಿಗ್ಗೆ 8 ಗಂಟೆಗೆ ಸರಿಯಾಗಿ ಮಂಡ್ಯದ ರೈತ ಸಭಾಂಗಣದಲ್ಲಿರುವ ಕುವೆಂಪು ಪ್ರತಿಮೆಯ ಹತ್ತಿರ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.

ಎಲ್ಲಾ ಆಸಕ್ತರು, ಸಾರ್ವಜನಿಕರು ಈ ಕಾರ್ಯಕ್ರಮಕ್ಕೆ ಆಗಮಿಸಿ ಯಶಸ್ವಿಗೊಳಿಸಬೇಕಾಗಿ ಪ್ರತಿಭಾಂಜಲಿ ಡೇವಿಡ್ ರವರು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಡಾಕ್ಟರ್ ಎನ್ ಎಸ್ ಶಂಕರೇಗೌಡ ಕನ್ನಡ ಪ್ರಾಧ್ಯಾಪಕರು ಇವರಿಗೆ ವಿಶ್ವಮಾನವ ಪ್ರಶಸ್ತಿಯನ್ನು ನಾವು ನೀಡುತ್ತಿದ್ದೇವೆ ದಯಮಾಡಿ ಎಲ್ಲಾ ಸಾಹಿತ್ಯ ಆಸಕ್ತರು ಹಾಗೂ ಗಾಯಕರು ಹಾಗೆ ಪ್ರತಿಯೊಬ್ಬರು ಈ ಕಾರ್ಯಕ್ರಮದಲ್ಲಿ ಆಗಮಿಸಬೇಕಾಗಿ ಕೋರಲಾಗಿದೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ