Friday, November 20, 2026

ಪ್ರಾಯೋಗಿಕ ಆವೃತ್ತಿ

ಚಿತ್ರದುರ್ಗದಲ್ಲಿ ಪರಿಶಿಷ್ಟ ಜಾತಿ- ಪಂಗಡದ ಐಕ್ಯತಾ ಸಮಾವೇಶ

ಬಿಜೆಪಿ ಸರ್ಕಾರ ಎಲ್ಲಾ ಕ್ಷೇತ್ರಗಳನ್ನು ಖಾಸಗೀಕರಣ ಮಾಡುವುದರ ಮೂಲಕ ಮೀಸಲಾತಿಯನ್ನು ತೆಗೆದುಹಾಕಲು ಹುನ್ನಾರ ನಡೆಸುತ್ತಿರುವ ಹಿನ್ನೆಲೆಯಲ್ಲಿ ದಲಿತ ಸಮುದಾಯವನ್ನು ಜಾಗೃತಗೊಳಿಸಲು ಜ.8ರಂದು ಚಿತ್ರದುರ್ಗದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಐಕ್ಯತಾ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಕಾಂಗ್ರೆಸ್ ಪರಿಶಿಷ್ಟಜಾತಿ ಮತ್ತು ಪರಿಶಿಷ್ಟ ಪಂಗಡದ ಜಿಲ್ಲಾಧ್ಯಕ್ಷ ಸುರೇಶ್‌ಕಂಠಿ ಮನವಿ ಮಾಡಿದರು.

ಮಳವಳ್ಳಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಚಿತ್ರದುರ್ಗದಲ್ಲಿ ನಡೆಯಲಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಐಕ್ಯತಾ ಸಮಾವೇಶದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಐಕ್ಯತಾ ಸಮಾವೇಶಕ್ಕೆ ಮಾಜಿ ಉಪಮುಖ್ಯಮಂತ್ರಿ ಪರಮೇಶ್ವರ್, ಮಾಜಿ ಕೇಂದ್ರ ಸಚಿವ ಮುನಿಯಪ್ಪ, ಮಾಜಿ ಸಚಿವರಾದ ಸತೀಶ್ ಜಾರಕಿಹೊಳಿ, ಆಂಜನೇಯ, ಮಹದೇವಪ್ಪ ಸೇರಿದಂತೆ ಅನೇಕ ನಾಯಕರು ಭಾಗವಹಿಸಲಿದ್ದು, ದೇಶದ ದಲಿತರ ಪರಿಸ್ಥಿತಿಯ ಬಗ್ಗೆ ಸಮಗ್ರ ಚಿಂತನೆ ನಡೆಸಲಾಗುತ್ತದೆ ಎಂದರು.

ಬಿಜೆಪಿ ಸರ್ಕಾರ 60 ಲಕ್ಷ ವಿದ್ಯಾರ್ಥಿಗಳ ವೇತನವನ್ನು ಕಡಿತ ಮಾಡಿದೆ, ಕೇಂದ್ರ ಸರ್ಕಾರ ಮೀಸಲಾತಿಯ ಹೆಚ್ಚಳ ನಾಟಕವಾಡಿ, ಮತ್ತೊಂದು ಕಡೆ ಸರ್ಕಾರಿ ಸ್ವಾಮ್ಯ ಎಲ್ಲಾ ಕ್ಷೇತ್ರಗಳನ್ನು ಖಾಸಗೀಕರಣ ಮಾಡುವುದರ ಮೂಲಕ ಮೀಸಲಾತಿಯನ್ನು ಹತ್ತಿಕ್ಕುವ ಜನ ವಿರೋಧಿ ನೀತಿಯನ್ನು ಜಾರಿಗೆ ತರುತ್ತಿದೆ ಎಂದು ಕಿಡಿಕಾರಿದರು.

ಕೋಮುವಾದಿ ಬಿಜೆಪಿ ಸರ್ಕಾರ ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ಕಗ್ಗೊಲೆ ಮಾಡುತ್ತಿದೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯದ ಜನರು ಎಚ್ಚೆತ್ತುಕೊಂಡು ಸಂವಿಧಾನವನ್ನು ರಕ್ಷಣೆ ಮಾಡದಿದ್ದರೇ ಮುಂದಿನ ಪೀಳಿಗೆಗೆ ದೊಡ್ಡ ಅಪಾಯವನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಸ್ವಾಭಿಮಾನದ ನಾಯಕರಾಗಿರುವ ಕೆಪಿಸಿಸಿ ಉಪಾಧ್ಯಕ್ಷ ಪಿ.ಎಂ ನರೇಂದ್ರಸ್ವಾಮಿ ಅವರನ್ನು ಕೈ ಬಲ ಪಡಿಸುವ ನಿಟ್ಟಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಎಲ್ಲಾ ಮುಖಂಡರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಒಗ್ಗಟ್ಟಿನಿಂದ ಕಾಂಗ್ರೆಸ್ ಪಕ್ಷ ಸಂಘಟನೆಗೆ ಮುಂದಾಗಬೇಕು ಹಾಗೂ ಐಕ್ಯತಾ ಸಮಾವೇಶಕ್ಕೆ ಮಳವಳ್ಳಿ ತಾಲ್ಲೂಕಿನಿಂದ ಅತಿ ಹೆಚ್ಚು ಮಂದಿ ಭಾಗವಹಿಸುವುದರ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿಕೊಡಬೇಕು ಕೋರಿದರು.

ಸಭೆಯಲ್ಲಿ ಪರಿಶಿಷ್ಟ ವಿಭಾಗದ ಜಿಲ್ಲಾ ಉಪಾಧ್ಯಕ್ಷ ಬಸವರಾಜು, ಹಿರಿಯ ಮುಖಂಡರಾದ ಪ್ರಭುಲಿಂಗು, ಮಾರ್ಕಾಲು ಮಾಧು, ಜಿಲ್ಲಾ ಮುಖಂಡರಾದ ಲವ, ಆನಂದ್, ದೀಪಕ್, ವಿಜಯ ಕುಮಾರ್,ಗಂಗರಾಜ್, ತಾಲ್ಲೂಕು ಅಧ್ಯಕ್ಷ ಶಾಂತರಾಜು, ಯುವ ಮುಖಂಡರಾದ ಚಿಕ್ಕಬಾಗಿಲು ವೇದಮೂರ್ತಿ, ರವಿ, ಕಿರಣ್‌ಶಂಕರ್ ಸೇರಿದಂತೆ ಇತರರು ಇದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ