Thursday, September 19, 2024

ಪ್ರಾಯೋಗಿಕ ಆವೃತ್ತಿ

ಸಕಾಲ:ಸೇವೆ ಒದಗಿಸದಿದ್ದರೆ ದಂಡ – ವಿ.ಆರ್ ಶೈಲಜ

ಜಿಲ್ಲೆಯಲ್ಲಿ ಸಕಾಲದ ಅನುಷ್ಠಾನ ಬಹಳ ವ್ಯವಸ್ಥಿತವಾಗಿ ನಡೆಯುತ್ತಿದೆ. ಎಲ್ಲಾ ಅಧಿಕಾರಿಗಳು ಸಕಾಲ ಕಾಯ್ದೆ ನಿಗದಿ ಪಡಿಸಿರುವ ಕಾಲಮಿತಿಯೊಳಗೆ ಸೇವೆಯನ್ನು ನೀಡದಿದ್ದರೆ ದಂಡ ವಿಧಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ವಿ.ಆರ್ ಶೈಲಜ ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಿಂದ ಆಯೋಜಿಸಲಾಗಿದ್ದ ಸಕಾಲ ಜಾಥಾಗೆ ಚಾಲನೆ ನೀಡಿ ಅವರು ಮಾತನಾಡಿದರು.

ಸಕಾಲ ಯೋಜನೆ ದಶಮಾನೋತ್ಸವ ಆಚರಿಸುತ್ತಿರುವ ಸಂಭ್ರಮದ ಅಂಗವಾಗಿ ಸಕಾಲದ ಸೇವೆಯ ಬಗ್ಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲು ಜಾಥಾ ಆಯೋಜಿಸಲಾಗಿದ್ದು, ನಾಗರೀಕರು ಸಕಾಲ ಯೋಜನೆಯ ಬಗ್ಗೆ ಸಮರ್ಪಕ ಮಾಹಿತಿ ತಿಳಿದುಕೊಂಡು ಸದುಪಯೋಗ ಮಾಡಿಕೊಳ್ಳಬೇಕು ಎಂದರು.

ಕಂದಾಯ ಇಲಾಖೆಯಲ್ಲಿ ಆಟಲ್ ಜನಸ್ನೇಹಿ ಕೇಂದ್ರದ 48 ಸೇವೆಗಳು, ಭೂಮಿ ಮತ್ತು ಇತರೆ ಕಂದಾಯ ಇಲಾಖೆಯ ಒಟ್ಟು 52 ಸೇವೆಗಳು ಸೇರಿದಂತೆ ಎಲ್ಲಾ ಇಲಾಖೆಗಳ ಒಟ್ಟು 1115 ಸೇವೆಗಳನ್ನು
ಸಕಾಲದಡಿಯಲ್ಲಿ ನೀಡಲಾಗುತ್ತಿದೆ ಎಂದರು.


ರಾಜ್ಯ ಸರ್ಕಾರವು ಸಕಾಲ ಕಾಯ್ದೆಯನ್ನು ಜಾರಿಗೆ ತಂದು ಕಾಲಮಿತಿಯೊಳಗೆ ಸಾರ್ವಜನಿಕರಿಗೆ ಸೇವೆಯನ್ನು ಒದಗಿಸುತ್ತಿದೆ. ಜಿಲ್ಲೆಯಲ್ಲಿ ಸಕಾಲ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಲಾಗುತ್ತಿದೆ ಎಂದರು.

ಸಕಾಲದಲ್ಲಿ ಕಳೆದ ಎರಡು ವರ್ಷಗಳಲ್ಲಿ ಮಂಡ್ಯ ಜಿಲ್ಲೆ ಇಡೀ ರಾಜ್ಯದಲ್ಲಿ ಏಳು ಬಾರಿ ಮೊದಲ ಸ್ಥಾನ ಪಡೆದುಕೊಂಡಿದೆ. ಕಳೆದ ತಿಂಗಳು 8 ನೇ ಸ್ಥಾನದಲ್ಲಿದ್ದು ಮೊದಲ ಸ್ಥಾನ ಪಡೆದುಕೊಳ್ಳಲು ಪ್ರಯತ್ನಿಸಲಾಗುತ್ತಿದೆ ಎಂದರು.

ಕಂದಾಯ ಇಲಾಖೆ, ಪಂಚಾಯತ್ ರಾಜ್, ಹಿಂದುಳಿದ ವರ್ಗಗಳು, ಕೆ.ಎಸ್.ಆರ್.ಟಿ. ಸಿ, ಪ್ರಾದೇಶಿಕ ಸಾರಿಗೆ, ಲೋಕೋಪಯೋಗಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸೇರಿದಂತೆ ಎಲ್ಲಾ ನಿಗಮ ಮಂಡಳಿಗಳು ನೀಡುವ ಸೇವೆಯನ್ನು ಸಕಾಲದಡಿ ತರಲಾಗಿದೆ ಎಂದರು.

ಎಲ್ಲಾ ಸರ್ಕಾರಿ ಕಚೇರಿಯ ಸಿಬ್ಬಂದಿ ಮತ್ತು ಅಧಿಕಾರಿಗಳು ಸಹ ಜಾಗೃತರಾಗಿ, ಸಕಾಲ ಸೇವೆಯನ್ನು ಕೊಡುವಲ್ಲಿ ಗುಣಾತ್ಮಕ ಕೆಲಸವನ್ನು ಮಾಡಬೇಕು ಎಂದರು.

ಜಾಥಾ ಜಿಲ್ಲಾಧಿಕಾರಿಗಳ ಕಚೇರಿಯಿಂದ ಹೊರಟು ಎಂ.ಸಿ ರಸ್ತೆಯ ಮೂಲಕ ತಹಶೀಲ್ದಾರ್ ಕಚೇರಿಗೆ ತಲುಪಿತು.

ಕಾರ್ಯಕ್ರಮದಲ್ಲಿ ಮಂಡ್ಯ ಉಪವಿಭಾಗಾಧಿಕಾರಿ ಐಶ್ವರ್ಯ, ತಹಶೀಲ್ದಾರ್ ಸೌಮ್ಯ ಹಾಗೂ
ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!