ಚಾಕುವಿನಿಂದ ಇರಿದು ವಿದ್ಯಾರ್ಥಿನಿಯನ್ನು ಹತ್ಯೆಗೈದಿರುವ ಅಮಾನವೀಯ ಘಟನೆ ಬೆಂಗಳೂರು ಹೊರವಲಯದ ರಾಜಾನುಕುಂಟೆ ಪ್ರೆಸಿಡೆನ್ಸಿ ಕಾಲೇಜಿನಲ್ಲಿ ನಡೆದಿದೆ.
ವಿದ್ಯಾರ್ಥಿನಿಗೆ ಚಾಕು ಇರಿದ ಬಳಿಕ ವಿದ್ಯಾರ್ಥಿಯೂ ಚಾಕುವಿನಿಂದ ಇರಿದುಕೊಂಡಿದ್ದಾನೆ. ವಿದ್ಯಾರ್ಥಿನಿ ಸ್ಥಳದಲ್ಲೇ ಮೃತಪಟ್ಟಿದ್ದರೆ, ಯುವಕನ ಸ್ಥಿತಿ ಗಂಭೀರವಾಗಿದೆ. ಗಾಯಾಳುವನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಪ್ರೀತಿಯ ವಿಚಾರವಾಗಿ ಈ ಕೃತ್ಯ ನಡೆದಿರುವ ಶಂಕೆ ವ್ಯಕ್ತವಾಗುತ್ತಿದೆ. ಸ್ಥಳಕ್ಕೆ ರಾಜಾನುಕುಂಟೆ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪವನ್ ಕಲ್ಯಾಣ್ ಎಂಬಾತ, ಸೋಮವಾರ ಮಧ್ಯಾಹ್ನ 12.30ರ ಸುಮಾರಿಗೆ ವಿದ್ಯಾರ್ಥಿನಿ ಜತೆ ಮಾತಾಡಲು ಕಾಲೇಜು ಬಳಿ ಬಂದಿದ್ದ. ಈ ವೇಳೆ ಆಕೆಗೆ ಇರಿದು, ಬಳಿಕ ತಾನೂ ಚಾಕುವಿನಿಂದ ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ.
ಯುವಕ ಮತ್ತು ಯುವತಿ ಇಬ್ಬರೂ ಕೋಲಾರ ಮೂಲದವರಾಗಿದ್ದು ಅನೇಕ ವರ್ಷಗಳಿಂದ ಯುವಕ ಮತ್ತು ಯುವತಿ ಇಬ್ಬರೂ ಕೋಲಾರ ಮೂಲದವರಾಗಿದ್ದು, ಅನೇಕ ವರ್ಷಗಳಿಂದ ಸ್ನೇಹಿತರಾಗಿದ್ದರು. ಇತ್ತೀಚೆಗೆ ಪವನ್ ಕಲ್ಯಾಣ್ ವಿದ್ಯಾರ್ಥಿನಿಯನ್ನು ಪ್ರೀತಿಸುವುದಾಗಿ ಹೇಳಿದ್ದು, ಆಕೆ ನಿರಾಕರಿಸಿದ್ದಳು ಎನ್ನಲಾಗಿದೆ. ಯುವತಿಯ ತಂದೆ ತೀರಿಕೊಂಡಿದ್ದು, ತಾಯಿ ಮತ್ತು ಇಬ್ಬರು ಸಹೋದರಿಯರಿದ್ದಾರೆ.
“ಪ್ರೆಸಿಡೆನ್ಸಿ ಕಾಲೇಜಿನಲ್ಲಿ ಬಿ.ಟೆಕ್ ಪ್ರಥಮ ವರ್ಷ ಓದುತ್ತಿದ್ದರೆ, ನೃಪತುಂಗ ಕಾಲೇಜಿನಲ್ಲಿ ಯುವಕ ಪವನ್ ಕಲ್ಯಾಣ್ ಬಿಸಿಎ ಓದುತ್ತಿದ್ದ. ಚಾಕು ಇರಿತಕ್ಕೆ ಒಳಗಾದ ಯುವತಿ ಸ್ಥಳದಲ್ಲೇ ಮೃತಪಟ್ಟಿದ್ದರೆ, ಯುವಕನ ಸ್ಥಿತಿ ಗಂಭೀರವಾಗಿದೆ. ಆತನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ’ ಎಂದು ಪೋಲಿಸರು ತಿಳಿಸಿದ್ದಾರೆ.




