Sunday, November 22, 2026

ಪ್ರಾಯೋಗಿಕ ಆವೃತ್ತಿ

ಜ.7ಕ್ಕೆ ಪಿಇಎಸ್ ಇಂಜಿನಿಯರಿಂಗ್ ಕಾಲೇಜಿನ ಪದವಿ ಪ್ರದಾನ

ಮಂಡ್ಯದ ಪಿಇಎಸ್ ಇಂಜಿನಿಯರಿಂಗ್ ಕಾಲೇಜಿನ 13ನೇ ಪದವಿ ಪ್ರದಾನ ಸಮಾರಂಭವು ಜ.7ರಂದು ಬೆಳಿಗ್ಗೆ 10.30ಕ್ಕೆ ಕಾಲೇಜಿನ ಡಾ.ಹೆಚ್.ಡಿ.ಚೌಡಯ್ಯ ಸಭಾಂಗಣದಲ್ಲಿ ನಡೆಯಲಿದೆ ಎಂದು ಕಾಲೇಜಿನ ಪ್ರಾಂಶುಪಾಲ ಡಾ.ಆರ್.ಎಂ.ಮಹಾಲಿಂಗೇಗೌಡ ತಿಳಿಸಿದರು.

ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಷನ್ ಗ್ರೂಪ್ ಫಾರ್ ಸ್ಟಾರ್ಟ್ ಅಪ್ ಅಧ್ಯಕ್ಷ ಪ್ರಶಾಂತ್ ಪ್ರಕಾಶ್ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಪಿಇಟಿ ಅಧ್ಯಕ್ಷ ಕೆ.ಎಸ್.ವಿಜಯ್ ಆನಂದ್ ಅಧ್ಯಕ್ಷತೆ ವಹಿಸುವರು. ಪಿಇಟಿ ಕಾರ್ಯದರ್ಶಿ ಎಸ್.ಎಲ್.ಶಿವಪ್ರಸಾದ್ ಪದವಿ ಪ್ರಮಾಣ ಪತ್ರ ಪ್ರದಾನ ಮಾಡುವವರು ಎಂದರು.

862 ಮಂದಿಗೆ ಪದವಿ ಪ್ರದಾನ 

ಈ ಬಾರಿ ಒಟ್ಟು 862 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗುವುದು, 8 ಯುಜಿ ಮತ್ತು 6 ಪಿಜಿ ಪದವಿಗಳಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಚಿನ್ನದ ಪದಕ ನೀಡಲಾಗುವುದು ಎಂದು ನುಡಿದರು.

9 ಸ್ನಾತಕ ಕೋರ್ಸ್ ಗಳು 

ಪಿ.ಇ.ಎಸ್. ಇಂಜಿನಿಯರಿಂಗ್‌ ಕಾಲೇಜು, ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ 9 ಸ್ನಾತಕ (ಬಿ.ಇ.) ಹಾಗೂ 6 ಸ್ನಾತಕೋತ್ತರ (ಎಂ. ಟೆಕ್‌, ಎಂ.ಬಿ.ಎ, ಎಂ.ಸಿ.ಎ) ಕೋರ್ಸ್‌ಗಳನ್ನು ನಡೆಸುತ್ತಿದ್ದು, ಉತ್ತಮ ಶಿಕ್ಷಣ ನೀಡುವುದರ ಜೊತೆಗೆ ಉದ್ಯೋಗ ತರಬೇತಿ ಹಾಗೂ ಪರೀಕ್ಷೆಗಳನ್ನು ಯಶಸ್ವಿಯಾಗಿ ನಡೆಸುತ್ತಾ ಬಂದಿದೆ ಎಂದು ವಿವರಿಸಿದರು.

ಶಿಕ್ಷಣ ಕ್ಷೇತ್ರಕ್ಕೆ ಉತ್ತಮ ಕೊಡುಗೆ 

ಈ ಸಂಸ್ಥೆಯು ತಾಂತ್ರಿಕ ಮತ್ತು ಆಡಳಿತ ಅಧ್ಯಯನದಲ್ಲಿ, ಗ್ರಾಮೀಣ ಮತ್ತು ನಗರ ಪ್ರದೇಶದ ವಿದ್ಯಾರ್ಥಿಗಳಿಗೆ, ಶೈಕ್ಷಣಿಕ ತರಬೇತಿಯಿಂದ ಅತ್ಯುತ್ತಮ ಮಾನವ ಸಂಪನ್ಮೂಲವನ್ನು ನೀಡುವುದರ ಜೊತೆಗೆ ಜಾಗತಿಕ ಶಿಕ್ಷಣ ಕ್ಷೇತ್ರಕ್ಕೆ ಅತ್ಯುತ್ತಮ ವ್ಯಕ್ತಿಗಳನ್ನು ಕೊಡುಗೆಯಾಗಿ ನೀಡುತ್ತಿದೆ. ರಾಜ್ಯದಲ್ಲಿ ಒಂದು ಉತ್ತಮ ತಾಂತ್ರಿಕ ಶಿಕ್ಷಣ ಸಂಸ್ಥೆಯಾಗಿ ಹೊರಹೊಮ್ಮಿದೆ ಎಂದರು.

ಕರ್ನಾಟಕ ಸರ್ಕಾರದ 10 ಅನುದಾನಿತ ಇಂಜಿನಿಯರಿಂಗ್ ಶಿಕ್ಷಣ ಸಂಸ್ಥೆಗಳಲ್ಲಿ – ಪಿ.ಇ.ಎಸ್. ಇಂಜಿನಿಯರಿಂಗ್ ಕಾಲೇಜು ಒಂದು ಮಹಾವಿದ್ಯಾಲಯವಾಗಿ ಕಾರ್ಯ ನಿರ್ವಹಿಸುತ್ತಿದೆ. ಈ ವಿದ್ಯಾಲಯವು 2008 ರಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದಿಂದ ಸ್ವಾಯತ್ತತೆ ಪಡೆದು, MBA, UGC, NAAC ಮತ್ತು AICTE ಯಿಂದ ಮಾನ್ಯತೆ ಪಡೆದಿದೆ ಹಾಗೂ 2022 ರಲ್ಲಿ ಭಾರತೀಯ ಶ್ರೇಯಾಂಕದ NIRF ನಿಂದ 137ನೇ ಬ್ಯಾಂಕ್ ಪಡೆದಿರುತ್ತದೆ ಮತ್ತು ARIIA- 2021 (Atal Ranking of Institution on Innovation Achievements) ರಲ್ಲಿ ಸರ್ಕಾರಿ ಮತ್ತು ಅನುದಾನಿತ ಶಿಕ್ಷಣ ಸಂಸ್ಥೆಯ ವಿಭಾಗದಲ್ಲಿ Band ‘PERFORMER’ ಪಡೆದಿದೆ ಎಂದು ವಿವರಿಸಿದರು.

ಗೋಷ್ಠಿಯಲ್ಲಿ ಪಿಇಎಸ್ಸಿಇ ಡೀನ್ (ಶೈಕ್ಷಣಿಕ) ಡಾ.ಆರ್.ಗಿರೀಶ್, ಪರೀಕ್ಷಾ ನಿಯಂತ್ರಣಾಧಿಕಾರಿ ಡಾ.ಕೆ ಜೆ ಮಹೇಂದ್ರ ಬಾಬು, ತರಬೇತಿ ಮತ್ತು ಉದ್ಯೋಗ ಕೇಂದ್ರ ಡಾ. ವಿನಯ್, ಉಪ ಡೀನ್(ಶೈಕ್ಷಣಿಕ) ಡಾ. ಡಿ ಆರ್ ಉಮೇಶ್ ಹಾಗೂ ಉಪಪರೀಕ್ಷಾ ನಿಯಂತ್ರಣಾಧಿಕಾರಿ ಡಾ.ಚಂದ್ರಶೇಖರ್ ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ