Friday, September 20, 2024

ಪ್ರಾಯೋಗಿಕ ಆವೃತ್ತಿ

ಸಿದ್ದರಾಮಯ್ಯ – ಡಿ.ಕೆ.ಶಿವಕುಮಾರ್ ಗೆ ಅವಹೇಳನ : ಜ.10ರಂದು ಮೈಸೂರು ರಂಗಾಯಣಕ್ಕೆ ಮುತ್ತಿಗೆ

ಕಳೆದ ಡಿ.31 ರಂದು ರಂಗಾಯಣ ನಾಟಕೋತ್ಸವದಲ್ಲಿ ನಡೆದ ‘ಸಾಂಬಶಿವ ಪ್ರಹಸನ’ ಎಂಬ ನಾಟಕದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ವೈಯಕ್ತಿಕವಾಗಿ ನಿಂದಿಸಿರುವುದನ್ನು ಖಂಡಿಸಿ ವಿವಿಧ ಪ್ರಗತಿಪರ ಸಂಘಟನೆಗಳು, ಜಾತ್ಯಾತೀತ ಒಕ್ಕೂಟಗಳು, ವಿವಿಧ ರಾಜಕೀಯ ಪಕ್ಷಗಳ ನಾಯಕರೆಲ್ಲ ಸೇರಿ ಜ.10ರಂದು ಮೈಸೂರು ರಂಗಾಯಣಕ್ಕೆ ಮುತ್ತಿಗೆ ಹಾಕಲಿದ್ದೇವೆಂದು ಮಂಡ್ಯ ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಸುರೇಶ್ ತಿಳಿಸಿದರು.

ಡಿ.31 ರಂದು ರಂಗಾಯಣದಲ್ಲಿ ನಡೆದ ಜ್ಞಾನಪೀಠ ಪುರಸ್ಕೃತ ಸಾಹಿತಿ ಚಂದ್ರಶೇಖರ ಕಂಬಾರ ಅವರ ‘ಸಾಂಬಶಿವ ಪ್ರಹಸನ’ ನಾಟಕವನ್ನು ತಿರುಚಿ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಅನ್ನಭಾಗ್ಯ ಯೋಜನೆ ಹಾಗೂ ಡಿ.ಕೆ‌.ಶಿವಕುಮಾರ್ ಅವರ ಬಗ್ಗೆ ಅವಹೇಳನಕಾರಿ ಸಂಭಾಷಣೆ ಸೇರಿಸಲಾಗಿತ್ತು. ಹಸಿದವರಿಗೆ ಅನ್ನ ನೀಡುವ ಸಿದ್ದರಾಮಯ್ಯ ಅವರ ಅನ್ನಭಾಗ್ಯ ಯೋಜನೆಯನ್ನು ಇಡೀ ರಾಷ್ಟ್ರವೇ ಕೊಂಡಾಡಿದೆ. ಆದರೆ ಇವರಿಬ್ಬರನ್ನು ಬೇಕೆಂದೇ ವೈಯಕ್ತಿಕವಾಗಿ ನಿಂದಿಸಿರುವುದರ ಹಿಂದೆ ಬಿಜೆಪಿ ಸರ್ಕಾರದ ಕುಮ್ಮಕ್ಕಿದೆ ಎಂದು ಆರೋಪಿಸಿದರು.

ನಾಟಕ ಪ್ರದರ್ಶನ ಸಂದರ್ಭದಲ್ಲಿ ವೇದಿಕೆ ಮೇಲೆ ಮೋಹನ್ ಎಂಬುವರು ವಿರೋಧ ವ್ಯಕ್ತಪಡಿಸಿದ್ದಾರೆ. ಅಲ್ಲದೆ ನಾಟಕದ ಕತೃ ಚಂದ್ರಶೇಖರ ಕಂಬಾರ ಅವರು ಕೂಡ ಈ ವಿಚಾರ ಗೊತ್ತಾದ ಮೇಲೆ ಆಕ್ರೋಶ ವ್ಯಕ್ತಪಡಿಸಿ, ದೂರು ದಾಖಲಿಸಿದ್ದಾರೆ. ಉದ್ದೇಶಪೂರ್ವಕವಾಗಿ ಸಿದ್ದರಾಮಯ್ಯ ಹಾಗೂ ಡಿ‌.ಕೆ.ಶಿವಕುಮಾರ್ ಅವರ ವರ್ಚಸ್ಸು ಕುಂದಿಸಲು ಹೊರಟಿರುವ ರಂಗಾಯಣ ಹಾಗೂ ಸರ್ಕಾರದ ವಿರುದ್ಧ ಈ ನಾಡಿನ ಪ್ರಗತಿಪರ ಸಂಘಟನೆಗಳು, ರಾಜಕೀಯ ಮುಖಂಡರು ಖಂಡಿಸಿ ಜ.10 ರಂದು ಮೈಸೂರಿನ ರಂಗಾಯಣಕ್ಕೆ ಮುತ್ತಿಗೆ ಹಾಕಲಾಗುತ್ತಿದೆ . ಈ ಪ್ರತಿಭಟನೆಗೆ ಮಂಡ್ಯ ಜಿಲ್ಲೆಯ ಪ್ರಗತಿಪರ ಸಂಘಟನೆಗಳು, ಮುಖಂಡರು ಸಹಸ್ರಾರು ಸಂಖ್ಯೆಯಲ್ಲಿ ಬರಬೇಕೆಂದು ಮನವಿ ಮಾಡಿದರು.

ಗೋಷ್ಠಿಯಲ್ಲಿ ಹಿಂದುಳಿದ ವರ್ಗಗಳ ಒಕ್ಕೂಟದ ಅಧ್ಯಕ್ಷ ನಾಗರಾಜು, ಜಿಲ್ಲಾ ಕುರುಬರ ಸಂಘದ ಉಪಾಧ್ಯಕ್ಷ ಶ್ರೀನಿವಾಸ್, ಯುವ ಕಾಂಗ್ರೆಸ್ ಅಧ್ಯಕ್ಷ ವಿಜಯ್ ಕುಮಾರ್, ಮಡಿವಾಳ ಸಂಘದ ಅಧ್ಯಕ್ಷ ವೆಂಕಟೇಶ್, ನಗರಸಭೆ ಮಾಜಿ ಸದಸ್ಯ ಮಹೇಶ್, ವೀಣಾ ಶಂಕರ್ ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!