ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖಾ ವತಿಯಿಂದ 1 ಜನವರಿ 2022 ರಿಂದ 31 ಡಿಸೆಂಬರ್ 2022 ರವರೆಗೆ ಅಂತರಾಷ್ಟ್ರೀಯ, ರಾಷ್ಟ್ರೀಯ, ರಾಜ್ಯ ಮಟ್ಟದಲ್ಲಿ ಸಾಧನೆ ಮಾಡಿದ ಸಾಮಾನ್ಯ ವರ್ಗದ, ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡ ಹಾಗೂ ವಿಕಲಚೇತನ ಯುವ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ನೀಡಲಾಗುತ್ತದೆ.
ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿರುವ, ರಾಷ್ಟ್ರ ಮಟ್ಟದಲ್ಲಿ ಪದಕ ಗಳಿಸಿರುವ, ರಾಷ್ಟ್ರ ಮಟ್ಟದಲ್ಲಿ ಭಾಗವಹಿಸಿರುವ ಮತ್ತು ರಾಜ್ಯ ಮಟ್ಟದಲ್ಲಿ ಪ್ರಥಮ ಬಹುಮಾನಗಳಿಸಿರುವ ಯುವ ಕ್ರೀಡಾಪಟುಗಳು ವಿಭಾಗದಲ್ಲಿ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ಅರ್ಹ ಯುವ, ಕ್ರೀಡಾಪಟುಗಳು ಕ್ರೀಡಾ ಪ್ರಮಾಣ ಪತ್ರ, ಆಧಾರ್ ಕಾರ್ಡ್ ಜೆರಾಕ್ಸ್ ಪ್ರತಿ, ರಾಷ್ಟ್ರೀಕೃತ ಬ್ಯಾಂಕ್ನ ಅಕೌಂಟ್ ಸಂಖ್ಯೆ, ಬ್ಯಾಂಕಿನ ಶಾಖೆ, ಐ.ಎಫ್.ಸಿ ಕೋಡ್ಗಳೊಂದಿಗೆ ಸ್ವಯಂ ಲಿಖಿತ ಅರ್ಜಿಯನ್ನು ಜ.25 ರೊಳಗಾಗಿ ಕಚೇರಿಗೆ ಸಲ್ಲಿಸಲು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರ ಪ್ರಕಟಣೆ ತಿಳಿಸಿದೆ.