Saturday, November 21, 2026

ಪ್ರಾಯೋಗಿಕ ಆವೃತ್ತಿ

ಕಾಂಗ್ರೆಸ್ ಪಕ್ಷ ಅಧಿಕಾರ ತರಲು ಶ್ರಮಿಸಿ : ಚಲುವರಾಯಸ್ವಾಮಿ

ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವ ಮೂಲಕ ಮತದಾರರು ನಾಗಮಂಗಲದಲ್ಲಿ ಕ್ಷೇತ್ರದಲ್ಲಿ ಹೊಸ ಮುನ್ನುಡಿ ಬರೆಯಬೇಕೆಂದು ಕಾಂಗ್ರೆಸ್ ನಾಯಕ ಎನ್.ಚಲುವರಾಯಸ್ವಾಮಿ ಮನವಿ ಮಾಡಿದರು.

ನಾಗಮಂಗಲ ತಾಲೂಕಿನ ದೇವಲಾಪುರ ಹೋಬಳಿಯ ವಿವಿಧ ಪಂಚಾಯಿತಿಗಳಲ್ಲಿ ಪ್ರವಾಸ ನಡೆಸಿ ಮಾತನಾಡಿದ ಅವರು, ನನ್ನ ಅಧಿಕಾರ ಅವಧಿಯಲ್ಲಿ ನಾಗಮಂಗಲ ತಾಲೂಕಿನಲ್ಲಿ ಆಗಿರುವ ಅಭಿವೃದ್ಧಿ ಯೋಜನೆಗಳ ಪರ್ವ ಇಂದಿಗೂ ತಾಲೂಕಿನ ಜನತೆಯ ಮನೆ ಮಾತಾಗಿದ್ದು ಹೋಬಳಿಯ ಎಲ್ಲಾ ನನ್ನ ಅಭಿಮಾನಿಗಳು, ಈ ಬಾರಿ ನನ್ನನ್ನು ಗೆಲ್ಲಿಸುವ ಮುಖಾಂತರ  ಜನಸಾಮಾನ್ಯರ  ಸೇವೆ ಮಾಡಲು ಅವಕಾಶ ಮಾಡಿಕೊಡಬೇಕೆಂದು ಮನವಿ ಮಾಡಿದರು.

ನಾಗಮಂಗಲ ತಾಲೂಕಿನ ಅಭಿವೃದ್ಧಿ ಹರಿಕಾರನಾಗಿ  ಜನಮಾನಸದಲ್ಲಿ ಉಳಿದಿರುವ ಜನನಾಯಕ ಚಲುವರಾಯಸ್ವಾಮಿ ಅವರನ್ನು ಬೆಂಬಲಿಸುವಂತೆ ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಜೇಶ್ ಮಾತನಾಡಿದರು. ಗ್ರಾಮಗಳಿಗೆ ಆಗಮಿಸಿದ ಅವರನ್ನು ಗ್ರಾಮಸ್ಥರು ಸ್ವಾಗತಿಸಿ ಪ್ರಮುಖ ಬೀದಿಗಳಲ್ಲಿ ಮೆರವಣಿಗೆಯೊಂದಿಗೆ ಕರೆ ತರಲಾಯಿತು.

ಇದೇ ಸಂದರ್ಭದಲ್ಲಿ ಮಾಜಿ ಜಿ.ಪಂ. ಸದಸ್ಯ ಹುಚ್ಚೇಗೌಡ, ಗ್ರಾಮ ಮಾಜಿ ಸದಸ್ಯ ಸುರೇಶ್, ಸಚಿನ್ ಹಾಗೂ ಅನೇಕ ಗಣ್ಯರು ಹಾಜರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ