Thursday, September 19, 2024

ಪ್ರಾಯೋಗಿಕ ಆವೃತ್ತಿ

106 ಫಲಾನುಭವಿಗಳಿಗೆ ತಲಾ 20 ನಾಟಿಕೋಳಿ ಮರಿಗಳ ವಿತರಣೆ

ಮಂಡ್ಯ ನಗರದ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ, ಸಹಾಯಕ ನಿರ್ದೇಶಕ ಕಚೇರಿ ಆವರಣದಲ್ಲಿ ಕುಕ್ಕುಟ ಮಹಾಮಂಡಳಿ ವತಿಯಿಂದ 2022–23ನೇ ಗ್ರಾಮೀಣ ಭಾಗದ ರೈತ ಮಹಿಳೆಯರಿಗೆ ಉಚಿತವಾಗಿ ಐದು ವಾರದ ತಲಾ 20 ನಾಟಿ ಕೋಳಿ ಮರಿಗಳನ್ನು 106 ಫಲಾನುಭವಿಗಳಿಗೆ ನೀಡಲಾಯಿತು.

ಮುಖ್ಯ ಪಶುವೈದ್ಯಾಧಿಕಾರಿ ಡಾ.ಎಚ್‌.ಡಿ.ರಮೇಶ್‌ರಾಜ್‌, ಉಚಿತವಾಗಿ ಗ್ರಾಮೀಣ ಭಾಗದ ಮಹಿಳೆಯರಿಗೆ ಅನುಕೂಲವಾಗಲಿ ಎನ್ನುವ ಸದುದ್ದೇಶದಿಂದ ನಾಟಿಕೋಳಿ ಮರಿಗಳನ್ನು ನೀಡಲಾಗುತ್ತಿದೆ. ಕುಟುಂಬದ ನಿರ್ವಹಣೆಗೆ ಇದರಿಂದ ಅನುಕೂಲವಾಗಲಿದೆ ಎಂದರು.

ಮುಖ್ಯವಾಗಿ ಆರ್ಥಿಕ ಕುಲ ಕಸುಬಾಗಿರುವ ಕೋಳಿ ಮರಿ ಸಾಕಾಣಿಕೆಗೆ ಹೆಚ್ಚು ಒತ್ತು ನೀಡಲು ಸಹಕರಿಸಲಾಗುತ್ತಿದೆ. ಪರಿಶಿಷ್ಟ ಜಾತಿಯವರಿಗೆ 18, ಪರಿಶಿಷ್ಟ ಪಂಗಡಕ್ಕೆ 7, ಅಲ್ಪಸಂಖ್ಯಾತರಿಗೆ 15, ಅಂಗವಿಕಲರಿಗೆ 3, ಒಬಿಸಿಯವರಿಗೆ 35, ಸಾಮಾನ್ಯ ವರ್ಗದವರಿಗೆ 28 ಒಟ್ಟು 106 ಫಲಾನುಭವಿಗಳಿಗೆ ವಿತರಣೆ ಮಾಡಲಾಗುತ್ತಿದೆ ಎಂದು ವಿವರಿಸಿದರು.

ಈ ಸಂದರ್ಭದಲ್ಲಿ ಪಾಲಿಕ್ಲಿನಿಕ್‌ ಉಪನಿರ್ದೇಶಕ ಡಾ.ನಟರಾಜ್, ಪಶುವೈದ್ಯಾಧಿಕಾರಿ ಡಾ.ಯೋಗೇಶ್‌ಗೌಡ, ಜಾನುವಾರು ಅಭಿವೃದ್ಧಿ ಅಧಿಕಾರಿ ಬಿ.ಕೆ.ಮರಿಸ್ವಾಮಿ ಸೇರಿದಂತೆ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!