Thursday, September 19, 2024

ಪ್ರಾಯೋಗಿಕ ಆವೃತ್ತಿ

ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹದ ಜಾಗೃತಿ

ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹದ ಒಂಭತ್ತನೆಯ ದಿನವಾದ ಇಂದು ಸಹ ಜಾಗೃತಿ ಕಾರ್ಯಕ್ರಮ ನಡೆಸಲಾಯಿತು.

ಮಂಡ್ಯ ಸಂಚಾರಿ ಪೊಲೀಸ್‌ ಠಾಣೆಯ ಆರಕ್ಷಕ ನಿರೀಕ್ಷಕ ಕಮಲಾಕ್ಷಿ ಅವರು ಸಂಚಾರಿ ನಿಯಮಗಳ ಪಾಲನೆ ಹಾಗೂ ವಾಹನಗಳ ತಪಾಸಣಾ ಸಮಯದಲ್ಲಿ ವಾಹನ ಸವಾರರು ಅನುಸರಿಸಬೇಕಾದ ಕ್ರಮಗಳ ಬಗ್ಗೆ ತಿಳಿವಳಿಕೆ ನೀಡಿದರು.

ಕಚೇರಿಗೆ ಡ್ರೈವಿಂಗ್ ಲೈಸೆನ್ಸ್ ಗಾಗಿ ವಾಹನಗಳ ನೋಂದಣಿ ಮತ್ತು ಅರ್ಹತಾ ಪತ್ರ ನವೀಕರಣಕ್ಕಾಗಿ ಬಂದ ವಾಹನ ಮಾಲೀಕರೊಂದಿಗೆ ಸಂವಾದ ನಡೆಸಿ ಸಲಹೆಗಳನ್ನು ನೀಡಿದರು. ಪೋಲೀಸರಿಗೆ ಹೆದರಿ ಹೆಲ್ಮೆಟ್ ಹಾಕುವುದು. ಸೀಟ್ ಬೆಲ್ಟ್ ಹಾಕುವುದು ಬೇಡ. ನಿಮ್ಮ ಸುರಕ್ಷತೆಗಾಗಿ ನಿಮ್ಮನ್ನು ನಂಬಿರುವ ಕುಟುಂಬದ ರಕ್ಷಣೆಗಾಗಿ ಸಂಚಾರಿ ನಿಯಮಗಳನ್ನು ಪಾಲಿಸಿ ಎಂದು ಕಿವಿಮಾತು ಹೇಳಿದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!