Thursday, September 19, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯದಲ್ಲಿ ಟ್ರಾಮಾ ಕೇರ್ ಆಸ್ಪತ್ರೆ ಸ್ಥಾಪನೆಗೆ ದಿನೇಶ್ ಗೂಳಿಗೌಡ ಮನವಿ


  • ಮುಂಬರುವ ಬಜೆಟ್‌ನಲ್ಲಿ ಸೇರ್ಪಡೆಗೆ ಶಿಫಾರಸ್ಸು ಮಾಡಲು ಮನವಿ 

  • ಎಸ್.ಎಂ.ಕೃಷ್ಣ ಅವರಿಗೆ ಮನವಿ ಸಲ್ಲಿಸಿದ ಶಾಸಕ ದಿನೇಶ್ ಗೂಳಿಗೌಡ ನೇತೃತ್ವದ ನಿಯೋಗ

ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ-275 ಈಗ ಸೂಪರ್ ಫಾಸ್ಟ್ ಮಾರ್ಗವಾಗಿದ್ದು, ಅಪಘಾತಗಳು ಸಂಭವಿಸುವ ಸಾಧ್ಯತೆ ಹೆಚ್ಚೇ ಇರುತ್ತದೆ. ಇದರ ಹಿನ್ನೆಲೆಯಲ್ಲಿ ಈ ಎರಡೂ ನಗರಗಳ ಮಧ್ಯ ಭಾಗದಲ್ಲಿರುವ ಮಂಡ್ಯ ನಗರದಲ್ಲಿ 100 ಬೆಡ್‍ಗಳ ಹೊಸ ಟ್ರಾಮಾ ಕೇರ್ ಆಸ್ಪತ್ರೆಯ ಅವಶ್ಯಕತೆ ಇದೆ. ಈ ನಿಟ್ಟಿನಲ್ಲಿ ಪ್ರಸಕ್ತ ಸಾಲಿನ ಆಯವ್ಯಯದಲ್ಲಿ ಈ ಯೋಜನೆಯನ್ನು ಸೇರಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಶಿಫಾರಸು ಮಾಡುವಂತೆ ಸ್ಥಳೀಯ ಸಂಸ್ಥೆಗಳ ಮಂಡ್ಯ ಕ್ಷೇತ್ರದ ಶಾಸಕರಾದ ದಿನೇಶ್ ಗೂಳಿಗೌಡ ಅವರ ನೇತೃತ್ವದ ನಿಯೋಗವು ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರಿಗೆ ಮನವಿ ಮಾಡಿದೆ.

ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯು ಈಗ ಸೂಪರ್ ಫಾಸ್ಟ್ ಮಾರ್ಗವಾಗಿದೆ. ಇಲ್ಲಿ ವಾಹನಗಳು ಹೆಚ್ಚಾಗಿ ಓಡಾಡುವುದರಿಂದ ಅಫಘಾತಗಳು ಸಂಭವಿಸಿದರೆ ಮೈಸೂರು ಅಥವಾ ಬೆಂಗಳೂರಿಗೆ ಗಾಯಾಳುಗಳನ್ನು ದಾಖಲಿಸಬೇಕಾದ ಪರಿಸ್ಥಿತಿ ಇದೆ. ಇದು ಬಹಳವೇ ದೂರವಾಗುತ್ತದೆ. ಇಂತಹ ಸಂದರ್ಭದಲ್ಲಿ ಪ್ರಾಥಮಿಕ ಚಿಕಿತ್ಸೆ ಸೇರಿದಂತೆ ಕೆಲವು ಅಗತ್ಯ ತ್ವರಿತ ಚಿಕಿತ್ಸೆಯ ಅಗತ್ಯತೆ ಇರುತ್ತದೆ. ಆದರೆ, ಬೆಂಗಳೂರು ಇಲ್ಲವೇ ಮೈಸೂರಿಗೆ ಕರೆದುಕೊಂಡು ಹೋಗುವಷ್ಟರಲ್ಲಿ ಪ್ರಾಣ ಹಾನಿಯಾಗುವ ಸಂಭವವೂ ಹೆಚ್ಚಿರುತ್ತದೆ. ಪ್ರತಿಯೊಬ್ಬರ ಜೀವವೂ ಅಮೂಲ್ಯವಾಗಿದೆ. ಇದಕ್ಕಾಗಿ ಮಂಡ್ಯ ನಗರದಲ್ಲಿ 100 ಬೆಡ್‍ಗಳ ಹೊಸ ಟ್ರಾಮಾ ಕೇರ್ ಆಸ್ಪತ್ರೆಯನ್ನು ತೆರೆಯಬೇಕು ಎಂದು ಅವಶ್ಯಕತೆಯ ತೀವ್ರತೆ ಬಗ್ಗೆ ಮನವರಿಕೆ ಮಾಡಿದರು.

ಮೈಸೂರು-ಬೆಂಗಳೂರು ನಗರಗಳ ಮಧ್ಯದಲ್ಲಿ ಇರುವ ಮಂಡ್ಯ ನಗರದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಇದ್ದು, ಸುಮಾರು 150 ವೈದ್ಯಕೀಯ ವಿದ್ಯಾರ್ಥಿಗಳು ಹಾಗೂ ಸ್ನಾತ್ತಕೋತ್ತರ ವೈದ್ಯಕೀಯ ವಿದ್ಯಾರ್ಥಿಗಳು ಸದಾ ಲಭ್ಯವಿರುತ್ತಾರೆ. ಮಂಡ್ಯ ಜಿಲ್ಲಾಸ್ಪತ್ರೆಗೆ ಹೊಂದಿಕೊಂಡಂತೆ ಇರುವ 5 ಎಕರೆ ಪ್ರದೇಶದಲ್ಲಿ ವಾಸವಾಗಿರುವ ಜನರನ್ನು ಬೇರೆ ಕಡೆಗೆ ಸ್ಥಳಾಂತರಿಸುತ್ತಿರುವುದರಿಂದ ಸದರಿ ಜಾಗದಲ್ಲಿ 100 ಬೆಡ್‍ಗಳ ಟ್ರಾಮಾ ಕೇರ್ ಆಸ್ಪತ್ರೆಯನ್ನು ಸಾರ್ವಜನಿಕ ಹಿತದೃಷ್ಟಿಯಿಂದ ತ್ವರಿತವಾಗಿ ಹೊಸದಾಗಿ ಪ್ರಾರಂಭಿಸಬಹುದಾಗಿದೆ ಎಂದು ಈಗ ಇರುವ ಅವಕಾಶಗಳ ಬಗ್ಗೆ ದಿನೇಶ್ ಗೂಳಿಗೌಡ ಅವರು ಎಸ್.ಎಂ. ಕೃಷ್ಣ ಅವರಿಗೆ ಮನವರಿಕೆ ಮಾಡಿಕೊಟ್ಟರು.

ಈ ಎಲ್ಲ ಅಗತ್ಯತೆ ಹಾಗೂ ಅವಕಾಶಗಳ ಬಗ್ಗೆ ಮುಖ್ಯಮಂತ್ರಿಯವರಿಗೆ ಮನವರಿಕೆ ಮಾಡಿ ಈ ಸಾಲಿನ ಆಯವ್ಯಯದಲ್ಲಿ ಸೇರ್ಪಡೆಗೊಳಿಸಬೇಕೆಂದು ಶಿಫಾರಸು ಮಾಡಬೇಕೆಂದು ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಪಕ್ಷದ ಮುಖಂಡ ಎಸ್. ಗುರುಚರಣ್, ಮದ್ದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗಣ್ಣ, ಮಾಜಿ ಮದ್ದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕದ್ಲೂರು ರಾಮಕೃಷ್ಣ, ಮುಖಂಡರಾದ ಜೋಗಿಗೌಡ, ಸಂದರ್ಶ್, ರಾಘು ಹಾಗೂ ಪ್ರಶಾಂತ್ ಹಾಜರಿದ್ದರು.

ಇದೇ ವೇಳೆ ಆರೋಗ್ಯ ಸಚಿವರಾದ ಡಾ.ಕೆ. ಸುಧಾಕರ್ ಅವರಿಗೆ ಮನವಿ ಮಾಡಿ ಆಸ್ಪತ್ರೆಯ ಅವಶ್ಯಕತೆ ಬಗ್ಗೆ ಶಾಸಕ ದಿನೇಶ್ ಗೂಳಿಗೌಡ ಮನವಿ ಮಾಡಿದ್ದಾರೆ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!