Thursday, September 19, 2024

ಪ್ರಾಯೋಗಿಕ ಆವೃತ್ತಿ

ಸಾತನೂರು ದೇವರಾಜ್ ಅವರ ವಿಜ್ಞಾನ ಪುಸ್ತಕಗಳ ಲೋಕಾರ್ಪಣೆ

ಮೈಸೂರಿನ ಸ್ಪಂದನ ಸಾಂಸ್ಕೃತಿಕ ಪರಿಷತ್ತು ಹಾಗೂ ಅಖಿಲ ಕರ್ನಾಟಕ ಲೇಖಕರ ಮತ್ತು ಪ್ರಕಾಶಕರ ಸಂಘದ ಸಂಯುಕ್ತಾಶ್ರಯದಲ್ಲಿ ಜ.27 ರಂದು ಸಂಜೆ 5 ಗಂಟೆಗೆ ಮೈಸೂರು ನಗರದ ಜೆ.ಎಲ್.ಬಿ. ರಸ್ತೆಯಲ್ಲಿರುವ ದಿ ಇನ್‌ಸ್ಟಿಟ್ಯೂಟ್ ಆಫ್ ಇಂಜಿನಿರ್‍ಸ್ ಸಭಾಂಗಣದಲ್ಲಿ ವಿಶ್ರಾಂತ ಪ್ರಾಂಶುಪಾಲ ಹಾಗೂ ವಿಜ್ಞಾನ ಲೇಖಕ ಸಾತನೂರು ದೇವರಾಜ್ ಅವರ ಎರಡು ವಿಜ್ಞಾನ ಪುಸ್ತಕಗಳ ಲೋಕಾರ್ಪಣೆ ಸಮಾರಂಭ ನಡೆಯಲಿದೆ.

ಜಾನಪದ ವಿದ್ವಾಂಸ ಡಾ. ರಾಮೇಗೌಡ (ರಾಗೌ) ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಮಾರಂಭದಲ್ಲಿ, ಮೈಸೂರು ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಪ್ರೊ. ಕೆ.ಎಸ್.ರಂಗಪ್ಪ ಪುಸ್ತಕಗಳ ಲೋಕಾರ್ಪಣೆ ಮಾಡುವರು. ಸ್ಪಂದನ ಸಾಂಸ್ಕೃತಿಕ ಪರಿಷತ್ತಿನ ಅಧ್ಯಕ್ಷ ಟಿ.ಸತೀಶ್ ಜವರೇಗೌಡ ಪ್ರಾಸ್ತಾವಿಕ ನುಡಿಗಳನ್ನಾಡುವರು.

ಜೆ.ಎಸ್.ಎಸ್. ವೈದ್ಯಕೀಯ ಮಹಾವಿದ್ಯಾಲಯದ ಪ್ರಾಧ್ಯಾಪಕ ಡಾ.ಪ್ರಸನ್ನ ಸಂತೆಕಡೂರು ‘ಜೀನ್ ವೃತ್ತಾಂತ’ ಪುಸ್ತಕ ಕುರಿತು ಹಾಗೂ ಮಹಾರಾಜ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಜೀವ ವಿಜ್ಞಾನ ಉಪನ್ಯಾಸಕ ಡಾ. ಎ.ಎನ್.ಸಂತೋಷ್ ಕನ್ನಡ ‘ಜೀನ್ ಥೆರಪಿ’ ಪುಸ್ತಕ ಕುರಿತು ಮಾತನಾಡುವರು.

ಮೈಸೂರು ವಿ.ವಿ. ಸಿಂಡಿಕೇಟ್ ಮಾಜಿ ಸದಸ್ಯ ಡಾ. ಈ.ಸಿ.ನಿಂಗರಾಜ್ ಗೌಡ, ಕೃತಿಕಾರ ಸಾತನೂರು ದೇವರಾಜ್, ಅಖಿಲ ಕರ್ನಾಟಕ ಲೇಖಕರ ಮತ್ತು ಪ್ರಕಾಶಕರ ಸಂಘದ ಅಧ್ಯಕ್ಷ ಡಿ.ಎನ್.ಲೋಕಪ್ಪ, ಮಹಿಮಾ ಪ್ರಕಾಶನದ ಪ್ರಕಾಶಕ ಕೆ.ವಿ. ಶ್ರೀನಿವಾಸ್ ಉಪಸ್ಥಿತರಿರುವರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!