Tuesday, November 24, 2026

ಪ್ರಾಯೋಗಿಕ ಆವೃತ್ತಿ

ಬಿಜೆಪಿ ಪಕ್ಷದ ಸಾಧನೆ ಜನರಿಗೆ ಮುಟ್ಟಿಸಿ : ಬಿ. ಸೋಮಶೇಖರ್

ಬಿಜೆಪಿ ಪಕ್ಷ ಮಾಡಿರುವ ಸಾಧನೆಗಳನ್ನು ಜನರಿಗೆ ಮುಟ್ಟಿಸಬೇಕೆಂದು ಮಾಜಿ ಸಚಿವ ಬಿ.ಸೋಮಶೇಖರ್ ಕಾರ್ಯಕರ್ತರಿಗೆ ಮನವಿ ಮಾಡಿದರು.

ಮಳವಳ್ಳಿ ತಾಲ್ಲೂಕಿನ ಕ್ಯಾತೇಗೌಡನದೊಡ್ಡಿ ಗ್ರಾಮದಲ್ಲಿ ಬಿಜೆಪಿ ಪಕ್ಷದ ವತಿಯಿಂದ ನಡೆದ ವಿಜಯ ಸಂಕಲ್ಪ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಬಿಜೆಪಿ ಸರ್ಕಾರ ಮಾಡಿರುವ ಅಭಿವೃದ್ಧಿ ಕಾರ್ಯಗಳನ್ನು ಕಾರ್ಯಕರ್ತರು ಮನೆ ಮನೆಗೂ ಮುಟ್ಟಿಸಿ ಜನರಿಗೆ ಮನವರಿಕೆ ಮಾಡಿಕೊಡಬೇಕು.ಈ ಬಾರಿಯೂ ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಯಾಗಲು ಕಾರ್ಯಕರ್ತರ ಪಣ ತೊಟ್ಟು ಸಂಘಟನೆ ಮಾಡಬೇಕೆಂದರು. ಮಾಟ, ಮಂತ್ರ ಮಾಡಿ ಜೆಡಿಎಸ್ ನವರು ಓಟು ಹಾಕಿಸಿಕೊಳ್ಳುತ್ತಿದ್ದಾರೆ. ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷದ ವೈಫಲ್ಯ ಹಾಗೂ ಬಿಜೆಪಿ ಪಕ್ಷದ ಸಾಧನೆಗಳ ಬಗ್ಗೆ ಜನರಿಗೆ ಅರಿವು ಮೂಡಿಸಿ ಎಂದರು.

ಕಾರ್ಯಕ್ರಮದಲ್ಲಿ ರೈತ ಮೋರ್ಚಾ ಜಿಲ್ಲಾ ಉಪಾಧ್ಯಕ್ಷ ಡಾ.ಯಮದೂರು ಸಿದ್ದರಾಜು, ಕುಮಾರಸ್ವಾಮಿ, ತಾಲ್ಲೂಕು ಅಧ್ಯಕ್ಷ ಕೃಷ್ಣ, ಕೆ.ಸಿ ನಾಗೇಗೌಡ, ಜಯರಾಮು ಸೇರಿದಂತೆ ಹಲವರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ