Thursday, September 19, 2024

ಪ್ರಾಯೋಗಿಕ ಆವೃತ್ತಿ

ಸುಮಲತಾ ಅಂಬರೀಶ್ ರಾಜ್ಯ ರಾಜಕಾರಣಕ್ಕೆ ಬರಲು ಆಗ್ರಹ : ಬೆಂಬಲಿಗರ ಸಭೆಯ ನಿರ್ಣಯ

ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರು ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಮೂಲಕ ರಾಜ್ಯ ರಾಜಕಾರಣಕ್ಕೆ ಬರಬೇಕೆಂದು ಸುಮಲತಾ ಅಂಬರೀಶ್ ಅವರ ಬೆಂಬಲಿಗರು ಒತ್ತಾಯಿಸಿದ್ದಾರೆ.

ಮಂಡ್ಯ ನಗರದ ಕರ್ನಾಟಕ ಸಂಘದ ಆವರಣದ ಶಂಕರಗೌಡ ಸಭಾಂಗಣದಲ್ಲಿ ನಡೆದ ಸುಮಲತಾ ಬೆಂಬಲರ ಸಭೆಯಲ್ಲಿ ಒಟ್ಟು ಮೂರು ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಯಿತು.

1. ಸುಮಲತಾ ಅಂಬರೀಶ್ ಅವರು ರಾಜ್ಯ ರಾಜಕಾರಣವನ್ನು ಪ್ರವೇಶ ಮಾಡಬೇಕು.

2.ಸುಮಲತಾ ಅಂಬರೀಶ್ ಅವರು ಯಾವುದೇ ನಿರ್ಣಯ ಕೈಗೊಂಡರೂ ನಾವು ಅವರ ಬೆಂಬಲಕ್ಕೀರುತ್ತೇವೆ

3.ಶಾಸಕ ಸಿ.ಎಸ್.ಪುಟ್ಟರಾಜು ಸಂಸದೆ ಸುಮಲತಾ ಅವರ ವಿರುದ್ಧ ಏಕವಚನದಲ್ಲಿ ಅವಹೇಳನಕಾರಿಯಾಗಿ ಮಾತನಾಡಿದ್ದು, ಅವರ ವಿರುದ್ಧ  ಪ್ರತಿಭಟನೆ ಮಾಡುವುದು ಎಂಬ ನಿರ್ಣಯಗಳನ್ನು ಕೈಗೊಳ್ಳಲಾಯಿತು.

nudikarnataka.com

2 ಗಂಟೆಗೂ ಹೆಚ್ಚು ಕಾಲ ನಡೆದ ಬೆಂಬಲಿಗರ ಸಭೆಯಲ್ಲಿ 100 ಕ್ಕೂ ಹೆಚ್ಚು ಮಹಿಳೆಯರು ಭಾಗವಹಿಸಿದ್ದರು. ಸುಮಲತಾ ಅವರು ಚುನಾವಣೆಗೆ ಸ್ಪರ್ಧಿಸಬೇಕೆಂಬ ಒತ್ತಾಯ ಕೇಳಿ ಬಂದಿತು, ಆದರೆ ಯಾವ ಪಕ್ಷದಿಂದ ಸ್ಪರ್ಧಿಸಬೇಕೆಂದು ನಿರ್ಧಾರವಾಗಲಿಲ್ಲ. ಕೆಲವರ ಕಾಂಗ್ರೆಸ್ ನಿಂದ ಸ್ಪರ್ಧಿಸುವಂತೆ, ಮತ್ತೆ ಕೆಲವರು ಬಿಜೆಪಿಯಿಂದ ಸ್ಪರ್ಧಿಸುವಂತೆ ಅವರು ಯಾವುದೇ ಪಕ್ಷದಿಂದ ಸ್ಪರ್ಧಿಸಿದರೂ ನಾವು ಬೆಂಬಲಿಸುತ್ತೇವೆಂದು ಬೆಂಬಲಿಗರು ತೀರ್ಮಾನಕ್ಕೆ ಬಂದರು.

ಮೂರುವರೆ ವರ್ಷಗಳಿಂದ ಸಂಸದರಾಗಿರುವ ಸುಮಲತಾ ಅಂಬರೀಶ್ ಅವರು ವಿಧಾನಸಭೆ ಚುನಾವಣೆಯ ಹೊಸ್ತಿಲಿಗೆ ಬಂದು ನಿಂತಿದ್ದರೂ ಇನ್ನೂ ಯಾವ ಪಕ್ಷದಿಂದ ಸ್ಪರ್ಧಿಸುತ್ತೇನೆಂಬ ಗೌಪ್ಯತೆಯನ್ನು ಬಿಟ್ಟು ಕೊಟ್ಟಿಲ್ಲ.

ಸಭೆಯಲ್ಲಿ ಸುಮಲತಾ ಅಂಬರೀಶ್ ಬೆಂಬಲಿಗರಾದ ವಿವೇಕಾನಂದ, ಬೇಲೂರು ಸೋಮಶೇಖರ್, ಹನಕೆರೆ ಶಶಿಕುಮಾರ್, ಲಿಂಗರಾಜು, ಆನಂದ್ ಮತ್ತಿತರರು ಭಾಗವಹಿಸಿದ್ದರು.

ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸದಂತೆ ತಾಕೀತು 

ಸುಮಲತಾ ಅಂಬರೀಶ್ ಬೆಂಬಲಿಗರು ನಡೆಸುವ ಸಭೆಯಲ್ಲಿ ಭಾಗವಹಿಸದಂತೆ ಕಾಂಗ್ರೆಸ್‌ ಕಾರ್ಯಕರ್ತರಿಗೆ ಕೆಪಿಸಿಸಿ ಉಪಾಧ್ಯಕ್ಷ ಎನ್.ಚಲುವರಾಯಸ್ವಾಮಿ ಕಟ್ಟುನಿಟ್ಟಿನ ಸೂಚನೆ ನೀಡಿ, ತಾಕೀತು ಮಾಡಲಾಗಿತ್ತು ಎನ್ನಲಾಗಿದೆ.

ಕಳೆದ ಲೋಕಸಭೆ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಸುಮಲತಾ ಭರ್ಜರಿ ಗೆಲುವು ಸಾಧಿಸಿದ್ದರು. ಅವರಿಗೆ ಕಾಂಗ್ರೆಸ್‌ ಮತ್ತು ಬಿಜೆಪಿ ಕಾರ್ಯಕರ್ತರು ಬೆಂಬಲ ನೀಡಿದ್ದರು. ಇದೀಗ, ಅವರು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರೆ. ಬಿಜೆಪಿ ಸೇರುತ್ತಾರೆಂಬ ಮಾತುಗಳು ಕೇಳಿ ಬಂದಿವೆ.

ತಾವು ಯಾವ ಪಕ್ಷಕ್ಕೆ ಸೇರಬೇಕೆನ್ನುವ ಬಗ್ಗೆ ಸದಾ ಗೊಂದಲ ಹೇಳಿಕೆ ನೀಡುತ್ತಿರುವ ಸುಮಲತಾ ಬಿಜೆಪಿಗೆ ಸೇರುವ ಎಲ್ಲ ಲಕ್ಷಣಗಳು ಕಾಣುತ್ತಿವೆ. ಈ ಬಗ್ಗೆ ಬಿಜೆಪಿಯ ಹಲವು ನಾಯಕರು ಬಹಿರಂಗ ಹೇಳಿಕೆ ನೀಡಿದ್ದಾರೆ. ‘ಸುಮಲತಾ ಮನಸ್ಸಲ್ಲಿ ಏನಿದೆಯೋ ಗೊತ್ತಿಲ್ಲ, ಆದರೆ ಅವರ ಬೆಂಬಲಿಗರು ಬಿಜೆಪಿ ಸೇರುತ್ತಾರೆ’ , ಹೀಗಿರುವಾಗ ಸುಮಲತಾ ಅವರು ಯಾವ ಪಕ್ಷದಲ್ಲಿರುತ್ತಾರೆಂಬುದನ್ನು ನೀವೇ ಅರ್ಥ ಮಾಡಿಕೊಳ್ಳಿ ಎಂದು ಸ್ವತಃ ಮಾಜಿ ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!