Tuesday, November 24, 2026

ಪ್ರಾಯೋಗಿಕ ಆವೃತ್ತಿ

ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ, ಅರೆಅಲೆಮಾರಿ ವಿದ್ಯಾರ್ಥಿಗಳಿಂದ  2022-23ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ ಶುಲ್ಕ ವಿನಾಯಿತಿ ವಿದ್ಯಾಸಿರಿ – ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಜನವರಿ 31 ಅನ್ನು ಅರ್ಜಿ ಸಲ್ಲಿಸುವ ಅಂತಿಮ ದಿನಾಂಕವನ್ನು ನಿಗದಿಪಡಿಸಲಾಗಿತ್ತು. ಅರ್ಜಿ ಸಲ್ಲಿಸುವ ದಿನಾಂಕವನ್ನು ವಿಸ್ತರಿಸುವಂತೆ ಪೋಷಕರು, ವಿದ್ಯಾರ್ಥಿಗಳು, ಶಿಕ್ಷಣ ಸಂಸ್ಥೆಗಳು ಮನವಿ ಸಲ್ಲಿಸಿದ್ದು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಅರ್ಜಿ ಸಲ್ಲಿಸಲು ಫೆ.28 ರವರೆಗೆ ವಿಸ್ತರಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ದೂ.ಸಂ: 8050770005 ಅಥವಾ ಆನ್‍ಲೈನ್  ವೆಬ್‍ಸೈಟ್:  https://ssp.postmetric.karnataka.gov.in  ಅನ್ನು ಸಂಪರ್ಕಿಸಬಹುದು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ