Thursday, November 19, 2026

ಪ್ರಾಯೋಗಿಕ ಆವೃತ್ತಿ

ಆರಂಭದ ಹಂತದಲ್ಲಿ ಸೂಕ್ತ ಚಿಕಿತ್ಸೆ ಪಡೆದರೆ ಕ್ಯಾನ್ಸರ್ ಗುಣಪಡಿಸಬಹುದು

ನಿಯಮಿತ ಆರೋಗ್ಯ ತಪಾಸಣೆಯಿಂದ ಆರಂಭ ಹಂತದಲ್ಲಿಯೇ ರೋಗ ಪತ್ತೆ ಹಚ್ಚಿ ಸೂಕ್ತ ಚಿಕಿತ್ಸೆ ಪಡೆದರೆ ಕ್ಯಾನ್ಸರ್ ನಿಂದ ಗುಣ ಹೊಂದಬಹುದೆಂದು ಆಡಳಿತ ವೈದ್ಯಾಧಿಕಾರಿ ಡಾ.ನರೇಂದ್ರಬಾಬು ಹೇಳಿದರು.

ಶ್ರೀರಂಗಪಟ್ಟಣ ತಾಲ್ಲೂಕಿನ ಮಹದೇವಪುರ ಗ್ರಾಮದ ಸಿದ್ದಪ್ಪಾಜಿ ದೇವಸ್ಥಾನದ ಆವರಣದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಛೇರಿ ಹಾಗೂ ಮಹದೇವಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಆಯೋಜಿಸಿದ್ದ ವಿಶ್ವ ಕ್ಯಾನ್ಸರ್ ದಿನ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.

ಕ್ಯಾನ್ಸರ್ ರೋಗಕ್ಕೆ ಭಯ ಪಡಬೇಕಿಲ್ಲ.ಆತ್ಮಬಲವೇ ಕ್ಯಾನ್ಸರ್ ರೋಗಕ್ಕೆ ಮೊದಲ ಮದ್ದು.ರೋಗ ಲಕ್ಷಣಗಳು ಕಾಣಿಸಿಕೊಂಡ ಆರಂಭಿಕ ಹಂತದಲ್ಲಿಯೇ ವೈದ್ಯರ ಬಳಿ ತೆರಳಿ ತಪಾಸಣೆಗೆ ಒಳಗಾಗಬೇಕು.ಪ್ರಾರಂಭದ ಹಂತದಲ್ಲಿ ಕ್ಯಾನ್ಸರ್ ಇದ್ದರೆ ಗುಣಪಡಿಸಬಹುದು ಎಂದರು.

ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್. ಡಿ‌ ಬೆನ್ನೂರ ಮಾತನಾಡಿ, ಆಹಾರ ಬೆಳೆಯುವ ಕ್ರಮದಲ್ಲಿ ದೋಷ ಅಂದರೆ ಅಗತ್ಯಕ್ಕಿಂತ ಹೆಚ್ಚು ರಾಸಾಯನಿಕ ಬಳಕೆ, ಚಟುವಟಿಕೆ ರಹಿತ ಜೀವನ ಶೈಲಿ, ಜಂಕ್ ಫುಡ್ ಬಳಕೆ, ಕಲಬೆರಕೆ ಆಹಾರ, ಕೆಟ್ಟ ಪರಿಸರ ಮಾಲಿನ್ಯ ಸೇರಿದಂತೆ, ಒಟ್ಟಾರೆ ಆಧುನಿಕ ಜೀವನ ಶೈಲಿ ಬದಲಾವಣೆ ಯಿಂದಾಗಿ ಇತ್ತೀಚಿನ ದಿನಗಳಲ್ಲಿ ಕ್ಯಾನ್ಸರ್ ಕಾಯಿಲೆ ಹೆಚ್ಚಾಗುತ್ತಿದೆ ಎಂದರು‌.

ಜೀವನ ಶೈಲಿಯಲ್ಲಿ ಕೆಲವು ಸಕಾರಾತ್ಮಕ ಮತ್ತು ಒಳ್ಳೆಯ ಬದಲಾವಣೆಗಳನ್ನು ಮಾಡಿಕೊಂಡು,ಆರೋಗ್ಯಕರ ಆಹಾರ ಸೇವನೆ, ವ್ಯಾಯಾಮ, ದೇಹಕ್ಕೆ ಅಗತ್ಯವಾದಷ್ಟು ನಿದ್ರೆ ಮತ್ತು ವಿಶ್ರಾಂತಿ, ಕುಟುಂಬ ಮತ್ತು ಸ್ನೇಹಿತರೊಂದಿಗೆ ಅಮೂಲ್ಯ ಸೇವೆ ಕಳೆಯುವುದು ಜೊತೆಗೆ ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಂಡು ಅಗತ್ಯ ಮುನ್ನೆಚ್ಚರಿಕೆ ವಹಿಸುವುದರಿಂದ ಕ್ಯಾನ್ಸರನಿಂದ ದೂರವಿರಬಹುದೆಂದರು.

nudikarnataka.com

ಪ್ರಾಥಮಿಕ ಆರೋಗ್ಯ ಸುರಕ್ಷತಾಧಿಕಾರಿ ಮಂಗಳಾ ಮಾತನಾಡಿ,ಇತ್ತೀಚಿನ ದಿನಗಳಲ್ಲಿ ಸ್ತನ ಕ್ಯಾನ್ಸರ್ ಮತ್ತು ಗರ್ಭಕೋಶದ ಕ್ಯಾನ್ಸರ್ ಬಹಳಷ್ಟು ಪ್ರಮಾಣದಲ್ಲಿ ಕಂಡುಬರುತ್ತಿವೆ. ಕಾರಣ ಮಹಿಳೆಯರು ವಯಕ್ತಿಕ ಶುಚಿತ್ವದ ಗಮನ ಕೊಡಬೇಕು.ಇವುಗಳಿಗೆ ಆರಂಭಿಕ ಹಂತದಲ್ಲಿ ಚಿಕಿತ್ಸೆ ನೀಡಿದಲ್ಲಿ ಗುಣವಾಗುವ ಪ್ರಮಾಣ ಅಧಿಕ‌. ಹೀಗಾಗಿ ಕ್ಯಾನ್ಸರ್ ಎಂದರೆ ಭಯ ಬೇಡ, ಆದರೆ ಎಚ್ಚರಿಕೆ ಜೊತೆ ಜಾಗೃತಿ ಇರಲಿ ಎಂದರು.

ತೂಕ ಕಡಿಮೆ ಆಗುವುದು, ಆಯಾಸ ಆಗುವದು,ಪದೇ ಪದೇ ಜ್ವರ ಬರುವುದು, ವಿಪರೀತ ನೋವು, ಚರ್ಮದಲ್ಲಿ ಬದಲಾವಣೆ ಇಂತಹ ಲಕ್ಷಣಗಳು ಕಂಡು ಬಂದಲ್ಲಿ ವೈದ್ಯರನ್ನು ಕಾಣಿ ಎಂದರು.

ಕಾರ್ಯಕ್ರಮದಲ್ಲಿ ಕ್ಯಾನ್ಸರ್ ಗೆ ಸಂಬಂಧಿಸಿದ ಪ್ರದರ್ಶನ ಫಲಕಗಳನ್ನು ಪ್ರದರ್ಶಿಸಲಾಯಿತು . ಸದರಿ ಕಾರ್ಯಕ್ರಮದಲ್ಲಿ ಮಾಜಿ ತಾಲ್ಲೂಕು ಪಂಚಾಯಿತಿ ಸದಸ್ಯ ಕಾಳೆಗೌಡ್ರ, ತಾಲ್ಲೂಕು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಜಿ. ಮೋಹನ್, ಶಾಂತಾ ರಾಮು, ಆರೋಗ್ಯ ನಿರೀಕ್ಷಣಾಧಿಕಾರಿ ಕೃಷ್ಣೆಗೌಡ್ರ, ಜ್ಞಾನ ವಿಕಾಸ ಸಮಿತಿ ಸಂಯೋಜನಾಧಿಕಾರಿ ಶಕುಂತಲಾ , ವಲಯ ಅಧಿಕಾರಿ ಲೋಕೇಶ, ಸುರಕ್ಷಾಧಿಕಾರಿ ಶಶಿಕಲಾ, ಪಾತಿಮ, ಸಮುದಾಯ ಆರೋಗ್ಯ ಅಧಿಕಾರಿ ವಿಶ್ವನಾಥ, ಶರತ್ ಮತ್ತಿತರರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ