Saturday, November 21, 2026

ಪ್ರಾಯೋಗಿಕ ಆವೃತ್ತಿ

ಪ್ರಸಿದ್ಧ ಹಿನ್ನೆಲೆ ಗಾಯಕಿ ವಾಣಿ ಜಯರಾಂ ನಿಧನ

ತಮಿಳು, ತೆಲುಗು, ಹಿಂದಿ, ಭೋಜ್‌ಪುರಿ ಮತ್ತು ಮರಾಠಿ ಸೇರಿದಂತೆ ಹಲವು ಭಾಷೆಗಳಲ್ಲಿ 10,000 ಕ್ಕೂ ಹೆಚ್ಚು ಹಾಡುಗಳನ್ನು ಹಾಡಿರುವ ಹಿರಿಯ ಹಿನ್ನೆಲೆ ಗಾಯಕಿ ವಾವಾಣಿ ಜಯರಾಂ ಅವರು ಶನಿವಾರ ಚೆನ್ನೈನ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ನಿಧನರಾಗಿದ್ದಾರೆ.

78 ವರ್ಷದ ಹಿರಿಯ ಗಾಯಕಿ ಚೆನ್ನೈನ ಹ್ಯಾಡೋಸ್ ರೋಡ್ ಅಪಾರ್ಟ್‌ಮೆಂಟ್‌ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಅವರಿಗೆ ಇತ್ತೀಚೆಗೆ ಭಾರತದ ಮೂರನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮಭೂಷಣ ಪ್ರಶಸ್ತಿಯನ್ನು ನೀಡಲಾಗಿತ್ತು.

ವಾಣಿ ಜಯರಾಮ್‌ ಅವರ ಹಾಡುಗಾರಿಕೆಗೆ ತಮಿಳುನಾಡು, ಗುಜರಾತ್, ಆಂಧ್ರಪ್ರದೇಶ ಮತ್ತು ಒಡಿಶಾ ಸೇರಿದಂತೆ ಹಲವು ರಾಜ್ಯಗಳ ಸರ್ಕಾರಗಳು ಪ್ರಶಸ್ತಿ ನೀಡಿ ಗೌರವಿಸಿವೆ. ವಾಣಿ ಅವರ ಅತ್ಯುತ್ತಮ ಗಾಯನಕ್ಕೆ 3 ಬಾರಿ ರಾಷ್ಟ್ರೀಯ ಪ್ರಶಸ್ತಿಯನ್ನು ನೀಡಲಾಗಿದೆ. 1973 ರಲ್ಲಿ ಬಿಡುಗಡೆಯಾದ ‘ತಾಯುಮ್ ಸೇಯುಮ್’ ಚಿತ್ರದ ಮೂಲಕ ತಮ್ಮ ಗಾಯನ ಲೋಕಕ್ಕೆ ಪ್ರವೇಶ ಮಾಡಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ