ಶ್ರೀರಂಗಪಟ್ಟಣ ಪುರಸಭಾ ವ್ಯಾಪ್ತಿಯ ಗಂಜಾಂನಲ್ಲಿ ಮಂಗಳವಾರ ಬಿಜೆಪಿ ಯುವ ಮುಖಂಡ ಎಸ್.ಸಚ್ಚಿದಾನಂದ ನೇತೃತ್ವದಲ್ಲಿ ವಿವಿಧ ಪಕ್ಷಗಳ ನೂರಾರು ಸಂಖ್ಯೆಯ ಮುಖಂಡರು, ಕಾರ್ಯಕರ್ತರು,ಯುವಕ ಮಿತ್ರರು ಮತ್ತು ಮಹಿಳೆಯರು ಸೇರ್ಪಡೆಯಾದರು.
ಯುವ ನಾಯಕ ಸಚ್ಚಿದಾನಂದ ಗಂಜಾಂ ಗ್ರಾಮಕ್ಕೆ ಬಂದ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ಪುಷ್ಪಹಾರ ಹಾಕಿ,ಹೂಗಳನ್ನು ಎರಚುವ ಮೂಲಕ ಅದ್ದೂರಿ ಸ್ವಾಗತ ನೀಡಿದರು.

ನೂರಾರು ಸಂಖ್ಯೆಯಲ್ಲಿದ್ದ ವಿವಿಧ ಪಕ್ಷಗಳ ಮುಖಂಡರು ಬಿಜೆಪಿ ಪಕ್ಷದ ತತ್ವ, ಸಿದ್ದಾಂತ ಮತ್ತು ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಯವರ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿರವರ ಜನಪರ ಯೋಜನೆಗಳನ್ನು ಮೆಚ್ಚಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು.

ಇದೇ ಸಂದರ್ಭದಲ್ಲಿ ಕಾರ್ಯಕರ್ತರೊಂದಿಗೆ ಮನೆ ಮನೆಗಳಿಗೆ ತೆರಳಿದ ಸಚ್ಚಿದಾನಂದ ಬಿಜೆಪಿ ಸಾಧನೆಗಳನ್ನು ಒಳಗೊಂಡಿರುವ ಕರಪತ್ರಗಳನ್ನು ಜನರಿಗೆ ವಿತರಿಸಿ, ಗೋಡೆಗಳ ಮೇಲೆ ಬಿಜೆಪಿ ಪಕ್ಷದ ಸ್ಟಿಕ್ಕರ್ ಗಳನ್ನು ಅಂಟಿಸಿ ಪ್ರಚಾರ ನಡೆಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ರಮೇಶ್, ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಸಿದ್ದರಾಮಯ್ಯ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಲಿಂಗರಾಜು ಸೇರಿದಂತೆ ಹಲವು ಬಿಜೆಪಿ ಮುಖಂಡರು ಭಾಗಿಯಾಗಿದ್ದರು.




