ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಂಡು ಉತ್ತಮ ಪ್ರಜೆಯಾಗಬೇಕೆಂದು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಎನ್.ಯತೀಶ್ ಕರೆ ನೀಡಿದರು.
ಮಂಡ್ಯ ತಾಲ್ಲೂಕಿನ ಕೊಮ್ಮೇರಹಳ್ಳಿ ಗ್ರಾಮದ ವಿಶ್ವಮಾನವ ಕ್ಷೇತ್ರದ ಆವರಣದಲ್ಲಿ ಪರಮಪೂಜ್ಯ ಜಗದ್ಗುರುಗಳಾದ ಡಾ. ಶ್ರೀ ಬಾಲಗಂಗಾಧರನಾಥ ಮಹಾ ಸ್ವಾಮೀಜಿಗಳ 78ನೇ ವರ್ಷದ ಜಯಂತ್ಯೋತ್ಸವ ಹಾಗೂ ವಿಶ್ವಮಾನವ ಶಾಲೆಯ ವಾರ್ಷಿಕ ವೈಭವ 2023 ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಶ್ರೀ ಡಾ.ಬಾಲಗಂಗಾಧರನಾಥ ಮಹಾಸ್ವಾಮಿಯವರ 78 ಜಯಂತಿ ನಡೆಯುತ್ತಿರುವುದು ನಮ್ಮೆಲ್ಲರಿಗೂ ಖುಷಿಯ ವಿಚಾರ. ಈ ಟ್ರಸ್ಟ್ ನ ವಿದ್ಯಾರ್ಥಿಗಳು ಇಲ್ಲಿ ಶಿಕ್ಷಣ ಪಡೆಯುತ್ತಿರುವುದು ಅದೃಷ್ಟದ ವಿಷಯ. ದೇಶದ ಭವಿಷ್ಯ ರೂಪಿಸಬೇಕಾದ ಮಕ್ಕಳು ಪುಸ್ತಕದ ಜ್ಞಾನದ ಜೊತೆಗೆ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು ಎಂದರು.

ಶ್ರೀಮಠದ ವಿದ್ಯಾರ್ಥಿಗಳು ಇಂದು ದೇಶದಲ್ಲಿ ಮಾತ್ರವಲ್ಲದೆ ವಿದೇಶಗಳಲ್ಲಿ ಛಾಪು ಮೂಡಿಸಿರುವುದು ಹೆಮ್ಮೆಯ ವಿಷಯ. ನಮ್ಮ ದೇಶದ ಪ್ರಾಚೀನ ಸಂಸ್ಕೃತಿಯನ್ನು ಮುಂದುವರಿಸಿಕೊಂಡು ಹೋಗಬೇಕು. ವಿದ್ಯಾರ್ಥಿಗಳ ಶಿಕ್ಷಣಣ ಜೊತೆ ಆಟೋಟಗಳಲ್ಲಿ ಭಾಗವಹಿಸಬೇಕು, ಮನೆಯಲ್ಲಿ ತಂದೆ-ತಾಯಿಗಳಿಗೆ ನೆರವಾಗಬೇಕು. ಗ್ರಾಮೀಣ ಭಾಗದಲ್ಲಿ ಶಿಕ್ಷಣ ಸಂಸ್ಥೆ ಸ್ಥಾಪಿಸಿ ವಿದ್ಯಾರ್ಥಿಗಳ ಬಾಳು ಬೆಳಗಿಸುವ ಸಂಸ್ಥೆ ಮತ್ತಷ್ಟು ಪ್ರಜ್ವಲಿಸಲಿ ಎಂದು ಶುಭ ಹಾರೈಸಿದರು.
ಪದವಿ ಪೂರ್ವ ಶಿಕ್ಷಣ ಕಾಲೇಜಿನ ಉಪ ನಿರ್ದೇಶಕ ಉಮೇಶ್ ಮಾತನಾಡಿ, ಇಂದಿನ ದಿನಗಳಲ್ಲಿ ಸರ್ಕಾರಗಳು ಶಿಕ್ಷಣ ನೀಡುವುದರ ಜೊತೆಗೆ ಮಠಗಳು ಕೂಡ ಶಿಕ್ಷಣವನ್ನು ಎಲ್ಲರಿಗೂ ತಲುಪಿಸುವ ಕೆಲಸ ಮಾಡುತ್ತಿವೆ ಎಂದರು.
ಕಾರ್ಯಕ್ರಮವನ್ನು ಶಿಕ್ಷಣ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿಗಳಾದ ಶ್ರೀಪುರುಷೋತ್ತಮಾನಂದ ಸ್ವಾಮೀಜಿ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯ ಆಡಳಿತ ಅಧಿಕಾರಿ ಡಾ.ಎನ್ ಶಿವರಾಂ ರೆಡ್ಡಿ, ಡಾ. ಎ.ಟಿ.ಶಿವರಾಮು, ಪ್ರಾದೇಶಿಕ ಸಾರಿಗೆ ಇಲಾಖೆ ಅಧೀಕ್ಷಕ ಪ್ರಸಾದ್, ಸಾಹಿತಿ ಹಾಗೂ ವಿಚಾರವಾದಿ ಕೆ.ಮಾಯಿಗೌಡ ಸೇರಿದಂತೆ ಇನ್ನಿತರರು ಹಾಜರಿದ್ದರು.




