ಕಾಂಗ್ರೆಸ್ ಪಕ್ಷವನ್ನು ಬಲಪಡಿಸುವ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ‘ಪ್ರಜಾಧ್ವನಿ’ ಯಾತ್ರೆಯೂ ಫೆ.11ರಂದು ಮಳವಳ್ಳಿ ತಾಲ್ಲೂಕಿಗೆ ಆಗಮಿಸಲಿದ್ದು, ಕಾಂಗ್ರೆಸ್ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಕಾಂಗ್ರೆಸ್ ಮುಖಂಡ ಡಾ. ಮೂರ್ತಿ ತಿಳಿಸಿದರು.
ಮಳವಳ್ಳಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವುದರಿಂದ ಪಕ್ಷ ಸಂಘಟನೆಗಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯಾದ್ಯಾಂತ’ ಪ್ರಜಾಧ್ವನಿ’ ಯಾತ್ರೆಯನ್ನು ಆರಂಭಿಸಿ ಕಾಂಗ್ರೆಸ್ ಪಕ್ಷವನ್ನು ಸಂಘಟಿಸುತ್ತಿದ್ದಾರೆ ಎಂದರು.
ಕಾರ್ಯಕ್ರಮದ ಯಶಸ್ವಿಗೆ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಸಭೆ ನಡೆಸಿ ಗ್ರಾ ಪಂ ಮಟ್ಟದಲ್ಲಿ ಪ್ರಚಾರ ಕೈಗೊಂಡು ಹೆಚ್ಚು ಜನರು ಸೇರುವಂತೆ ಪ್ರಚಾರ ನಡೆಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದರು.
ಸಭೆಯಲ್ಲಿ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಚೊಟ್ಟನಹಳ್ಳ ರಮೇಶ್, ಪುಟ್ಟರಾಮು, ಚೌಡೇಶ್ ಸೇರಿದಂತೆ ಇತರರು ಇದ್ದರು.