Friday, November 20, 2026

ಪ್ರಾಯೋಗಿಕ ಆವೃತ್ತಿ

ಹಂಪಾಪುರದಲ್ಲಿ ಅರಳಿಕಟ್ಟೆ ನಿರ್ಮಾಣಕ್ಕೆ ಭೂಮಿ ಪೂಜೆ

ಮಂಡ್ಯ ತಾಲ್ಲೂಕಿನ ಕೆರಗೋಡು ಹೋಬಳಿಯ ಹಂಪಾಪುರ ಗ್ರಾಮದಲ್ಲಿ ಮನ್ ಮುಲ್ ಅಧ್ಯಕ್ಷ ಬಿ.ಆರ್. ರಾಮಚಂದ್ರು ಅರಳಿಕಟ್ಟೆ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು,ದೇವಾಲಯಗಳು ನಮ್ಮ ಸಂಸ್ಕೃತಿಯ ಭಾಗ.ಇಂದು ಮನುಷ್ಯ ಶಾಂತಿ, ನೆಮ್ಮದಿಗಾಗಿ ದೇವಸ್ಥಾನಕ್ಕೆ ಹೋಗುತ್ತಾನೆ.ದೇವಸ್ಥಾನಕ್ಕೆ ಹೋಗಿ ಬಂದರೆ ಮನಸ್ಸಿಗೆ ಸಮಾಧಾನ ಸಿಗುತ್ತದೆ ಎಂದರು.

ಅರಳಿಕಟ್ಟೆ, ದೇವಸ್ಥಾನ ನಿರ್ಮಾಣಕ್ಕೆ ಅಗತ್ಯವಾದ ಹಣಕಾಸಿನ ನೆರವು ನೀಡುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಉಪ್ಪರಕನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಭಾಗ್ಯಲಕ್ಷ್ಮಿ, ಸದಸ್ಯರುಗಳಾದ ಶಿವಕುಮಾರ್, ಜಯಶಂಕರ್, ಸತೀಶ್, ದೊಡ್ಡಮ್ಮ, ರಾಜ್ಯ ಗಂಗಾಮತಸ್ಥರ ಸಂಘದ ಉಪಾಧ್ಯಕ್ಷ ತಮ್ಮಣ್ಣ, ಪುಟ್ಟರಾಜು, ರವಿ, ಸಿದ್ದಲಿಂಗಣ್ಣ, ಪ್ರಕಾಶ್ ಮತ್ತಿತ್ತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ