ವಿಧಾನಸಭಾ ಚುನಾವಣೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನಾಯಕತ್ವದಲ್ಲಿ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ಕೆಪಿಸಿಸಿ ಉಪಾಧ್ಯಕ್ಷ ಕೆಪಿಸಿಸಿ ಉಪಾಧ್ಯಕ್ಷ ಪಿ.ಎಂ.ನರೇಂದ್ರಸ್ವಾಮಿ ತಿಳಿಸಿದರು.
ಮಳವಳ್ಳಿ ಪಟ್ಟಣದ ಅನಂತ್‌ರಾಂ ವೃತ್ತದಲ್ಲಿ ಫೆ.11ರಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಆಗಮಿಸಲಿರುವ ‘ಪ್ರಜಾಧ್ವನಿ’ ಯಾತ್ರೆಯ ಭಾಗವಾಗಿ ನಡೆಯುವ ಬಹಿರಂಗ ಬಹಿರಂಗ ಸಮಾವೇಶದ ಸ್ಥಳವನ್ನು ಪರಿಶೀಲನೆ ನಡೆಸಿ ಮಾತನಾಡಿದ ಅವರು, ಬಿಜೆಪಿ ನೇತೃತ್ವದ ಕೇಂದ್ರ ಮತ್ತು ರಾಜ್ಯ ಸರ್ಕಾರದ ಜನ ವಿರೋಧಿ ನೀತಿಗಳಿಂದ ರೋಸಿ ಹೋಗಿರುವ ಜನರು ಕಾಂಗ್ರೆಸ್‌ನತ್ತ ಒಲವು ಹೊಂದಿದ್ದಾರೆಂದು ಹೇಳಿದರು.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಆರಂಭವಾಗಿರುವ ಪ್ರಜಾಧ್ವನಿ ಯಾತ್ರೆಯಿಂದ ಕಾಂಗ್ರೆಸ್ ಗೆ ಹೊಸ ಶಕ್ತಿ ಬಂದಿದೆ, ಕಾರ್ಯಕ್ರಮಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಪ್ರಣಾಳಿಕೆ ಸಮಿತಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ಕೇಂದ್ರದ ಮಾಜಿ ಸಚಿವರಾದ ಕೆ.ಎಚ್.ಮುನಿಯಪ್ಪ, ರಾಜ್ಯಸಭಾ ಸದಸ್ಯ ಬಿ.ಸಿ.ಚಂದ್ರಶೇಖರ್, ಕೆಪಿಸಿಸಿ ಉಪಾಧ್ಯಕ್ಷ ಎನ್.ಚಲುವರಾಯಸ್ವಾಮಿ, ವಿಧಾನ ಪರಿಷತ್ ಸದಸ್ಯರಾದ ನಜೀರ್ ಅಹಮದ್, ದಿನೇಶ್ ಗೂಳಿಗೌಡ, ಮಧು ಜಿ.ಮಾದೇಗೌಡ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎಂದರು.
ಇದೇ ಸಂದರ್ಭದಲ್ಲಿ ಟಿಎಪಿಸಿಎಂಎಸ್ ಅಧ್ಯಕ್ಷ ಕೆ.ಎಸ್.ದ್ಯಾಪೇಗೌಡ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಜೆ.ದೇವರಾಜು, ಪುರಸಭೆ ಸದಸ್ಯ ಎಂ.ಆರ್.ರಾಜಶೇಖರ್, ತಾಲ್ಲೂಕು ಯುವ ಕಾಂಗ್ರೆಸ್ ಅಧ್ಯಕ್ಷ ಎಚ್.ಕೆ.ಕೃಷ್ಣಮೂರ್ತಿ, ಟಿಎಪಿಸಿಎಂಎಸ್ ನಿರ್ಧೆಶಕರಾದ ಎಂ.ಲಿಂಗರಾಜು, ಎಚ್.ಬಿ.ಬಸವೇಶ್, ಪ್ರಕಾಶ್, ಬಸವರಾಜು, ತಾ.ಪಂ.ಮಾಜಿ ಉಪಾಧ್ಯಕ್ಷ ಸಿ.ಮಾಧು, ಮುಖಂಡರಾದ ಬಸವರಾಜು, ಶಿವಕುಮಾರ್, ಬಿ.ಎಸ್.ಶಿವಣ್ಣ, ದಿಲೀಪ್ ಕುಮಾರ್(ವಿಶ್ವ), ರೋಹಿತ್ ಗೌಡ, ರವಿ ಸೇರಿದಂತೆ ಇತರರು ಇದ್ದರು.




