ಸಕ್ಕರೆ ನಾಡಿನ ಪುನೀತೋತ್ಸವ ಕಾಯಕ್ರಮವನ್ನು ಫೆ.12ರಂದು ಸಂಜೆ 6 ಗಂಟೆಗೆ ಮಂಡ್ಯ ನಗರದ ಗುತ್ತಲಿನ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕರ್ನಾಟಕ ಪಬ್ಲಿಕ್ ಶಾಲೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಮಂಡ್ಯ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಡಾ.ಹೆಚ್.ಕೃಷ್ಣ ತಿಳಿಸಿದರು.
ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರಾದ ಎನ್.ಚಲುವರಾಯಸ್ವಾಮಿ, ಪಿ.ಎಂ.ನರೇಂದ್ರಸ್ವಾಮಿ, ಧೃವನಾರಾಯಣ್, ಚಂದ್ರಶೇಖರ್, ಎಐಸಿಸಿ ವೀಕ್ಷಕ ಜಟ್ಟಿ ಕುಸುಮಕುಮಾರ್ ಚೌಧರಿ, ಶಾಸಕರಾದ ದಿನೇಶ್ ಗೂಳಿಗೌಡ, ಮಧು ಮಾದೇಗೌಡ, ಮಾಜಿ ಶಾಸಕರಾದ ಎಂ.ಎಸ್.ಆತ್ಮಾನಂದ, ರಮೇಶ್ ಬಾಬು ಬಂಡಿಸಿದ್ದೇಗೌಡ, ಕೆ.ಬಿ.ಚಂದ್ರಶೇಖರ್ ಹಾಗೂ ಕಾಂಗ್ರೆಸ್ ಮುಖಂಡ ರವಿಕುಮಾರ್ ಗಣಿಗ ಭಾಗವಹಿಸುವರು ಎಂದರು.
ಈ ಕಾರ್ಯಕ್ರಮದಲ್ಲಿ ಗಾಯಕ ನವೀನ್ ಸಜ್ಜು ತಂಡದಿಂದ ಮ್ಯೂಸಿಕಲ್ ನೈಟ್ ನಡೆಯಲಿದ್ದು, ಅತಿಥಿಗಳಾಗಿ ಹರ್ಷಿಕಾ ಪೂಣಚ್ಚ, ಮೇಘಾಶೆಟ್ಟಿ, ಸಂಜನಾ ಆನಂದ್, ರಂಜಿನಿ ರಾಘವನ್ ಭಾಗಹಿಸುವರು. ಚೈತ್ರ ವಾಸುದೇವನ್ ನಿರೂಪಣೆ ಮಾಡಲಿದ್ದಾರೆ ಎಂದು ವಿವರಿಸಿದರು.
ಫೆ.12ರಂದು ಬೆಳಿಗ್ಗೆಯಿಂದ ಸಂಜೆಯವರೆಗೆ ರಂಗೋಲಿ, ಚಿತ್ರಕಲೆ, ವೇಷಭೂಷಣ ಹಾಗೂ ಸಮೂಹ ನೃತ್ಯ ಸ್ಪರ್ಧೆಗಳನ್ನು ಆಯೋಜಿಸಲಾಗಿದ್ದು, ಆಸಕ್ತರು ಮೊ.8904414407 ಇಲ್ಲಿಗೆ ಕರೆ ಮಾಡಿ ನೋಂದಾಯಿಸಿ ಕೊಂಡು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು. ಎಲ್ಲಾ ವಿಭಾಗದಲ್ಲಿ ವಿಜೇತರಿಗೆ ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನಗಳನ್ನು ನೀಡಲಾಗುವುದು ಎಂದರು.
ಗೋಷ್ಠಿಯಲ್ಲಿ ನಗರಸಭಾ ಸದಸ್ಯರಾದ ನಯಿಂ, ರಾಮಲಿಂಗಯ್ಯ, ಕಾಂಗ್ರೆಸ್ ಮುಖಂಡರಾದ ಹೆಚ್.ಅಪ್ಪಾಜಿ, ಅಮ್ಜದ್ ಪಾಷಾ, ಅನಿಲ್ ಕುಮಾರ್, ಚಂದ್ರು ಉಪಸ್ಥಿತರಿದ್ದರು.




