Thursday, November 19, 2026

ಪ್ರಾಯೋಗಿಕ ಆವೃತ್ತಿ

ನ್ಯಾ. ಸದಾಶಿವ ಆಯೋಗದ ವರದಿ ಜಾರಿಗೆ ಆಗ್ರಹಿಸಿ ಬೃಹತ್ ಸಮಾವೇಶ

ನ್ಯಾ.ಎ.ಜೆ. ಸದಾಶಿವ ಆಯೋಗದ ವರದಿಯನ್ನು ಅಂಗೀಕರಿಸಿ ಕೂಡಲೇ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಬೇಕು ಮತ್ತು ಕೇಂದ್ರ ಸರ್ಕಾರವು ಅನುಚ್ಛೇದ 341(3)ಕ್ಕೆ ಕೂಡಲೇ ತಿದ್ದುಪಡಿ ಮಾಡಬೇಕೆಂದು ಆಗ್ರಹಿಸಿ ಫೆ.14ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯಾಧ್ಯಕ್ಷ ವೆಂಕಟಗಿರಿಯಯ್ಯ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದುಳಿದ ವರ್ಗಗಳ ಕಾಂತರಾಜ ವರದಿಯನ್ನು ಬಹಿರಂಗ ಮಾಡಿ ಯಥಾವತ್ತಾಗಿ ಜಾರಿ ಮಾಡಬೇಕು. ಎಲ್ಲಾ ರಾಜಕೀಯ ಪಕ್ಷಗಳು ಪರಿಶಿಷ್ಟ ಜಾತಿಗಳಲ್ಲಿ ಬಹುಸಂಖ್ಯಾತರಾಗಿರುವ ಮಾದಿಗ ಮತ್ತು ಛಲವಾದಿಗಳ ಜನಸಂಖ್ಯೆಗೆ ತಕ್ಕಂತೆ ತಲಾ 15 ರಾಜಕೀಯ ಪ್ರಾತಿನಿಧ್ಯ ಕಲ್ಪಿಸಬೇಕೆಂದು ಒತ್ತಾಯಿಸಿದರು.

ಕರ್ನಾಟಕ ರಾಜ್ಯದಲ್ಲಿರುವ 43 ಸಾವಿರ ಪೌರ ಕಾರ್ಮಿಕರು ಮತ್ತು ವಾಹನ ಚಾಲಕರನ್ನು  ಖಾಯಂಗೊಳಿಸಬೇಕು. ನ್ಯಾ. ಎ.ಜೆ. ಸದಾಶಿವ ಆಯೋಗದ ಪರ ಹೋರಾಟಗಾರರ ಮೇಲೆ ಹೂಡಿದ ರೌಡಿಶೀಟರ್ ಪ್ರಕರಣಗಳನ್ನು ರದ್ದುಪಡಿಸಬೇಕು. ಮತ್ತು ದಲಿತ ಸಂಘಟಕರ ಮೇಲೆ ದಾಖಲಾದ ಎಲ್ಲಾ ಕ್ರಿಮಿನಲ್ ಪ್ರಕರಣಗಳನ್ನು ರದ್ದುಪಡಿಸಬೇಕು. ಪರಿಶಿಷ್ಠ ಜಾತಿಗಳ ಉಪ ಹಂಜಿಕೆ (SSA) ಅನುದಾನವನ್ನು ಒಳಮೀಸಲಾತಿ 6 +5+1+ 3 ಸೂತ್ರದಂತೆ ಹಂಚಿಕೆ ಮಾಡಬೇಕು. SA ಅನುದಾನ ದುರುಪಯೋಗಕ್ಕೆ ಕಾರಣವಾದ 7(D)ಯನ್ನು ತೆಗೆದು ಹಾಕಬೇಕು ಎಂದು ಒತ್ತಾಯಿಸಿದರು.

ಗೋಷ್ಠಿಯಲ್ಲಿ ದಲಿತ ಮುಖಂಡರಾದ ಎಂ.ವಿ.ಕೃಷ್ಣ, ನಂಜುಂಡ ಮೌರ್ಯ, ಬಿ.ಕೃಷ್ಣ ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ