Tuesday, November 24, 2026

ಪ್ರಾಯೋಗಿಕ ಆವೃತ್ತಿ

ಕೆ.ಎಂ.ದೊಡ್ಡಿಯಲ್ಲಿ ನಕಲಿ ಪೊಲೀಸ್ ಬಂಧನ

ವರದಿ : ಧರಣೇಶ್

ಪೋಲಿಸ್ ವೇಷ ಧರಿಸಿ ಸಾರ್ವಜನಿಕರಿಗೆ ವಂಚಿಸುತ್ತಿದ್ದ ವ್ಯಕ್ತಿಯನ್ನು ಮದ್ದೂರು ತಾಲ್ಲೂಕಿನ ಕೆ.ಎಂ ದೊಡ್ಡಿ ಪೋಲಿಸರು ಬಂಧಿಸಿದ್ದಾರೆ.

ಬೆಂಗಳೂರು ಗೊಟ್ಟಿಗೆರೆ ಮೂಲದ ಸಂಜಯ್ ಬಂಧಿತ ವ್ಯಕ್ತಿ.

ಈತ ಕೆ ಎಂ ದೊಡ್ಡಿ ವ್ಯಾಪ್ತಿಯಲ್ಲಿ ಪೋಲಿಸ್ ಸಮವಸ್ತ್ರ ಧರಿಸಿ ಪೊಲೀಸ್ ಅಧಿಕಾರಿ ಎಂದು ಸಾರ್ವಜನಿಕರನ್ನು ಹೆದರಿಸಿ, ಬೆದರಿಸಿ ಹಣ ವಸೂಲಿ ಮಾಡುತ್ತಿದ್ದನು. ಈ ಬಗ್ಗೆ ಸಾರ್ವಜನಿಕರಿಗೆ ಅನುಮಾನ ಬಂದು ಕೆ ಎಂ ದೊಡ್ಡಿ ಪೊಲೀಸ್ ಠಾಣೆಗೆ ತಿಳಿಸಿದ್ದಾರೆ.

ತಕ್ಷಣ ಕೆ.ಎಂ ದೊಡ್ಡಿ ಪೊಲೀಸರು ಠಾಣೆಯ ಇನ್ಸ್ಪೆಕ್ಟರ್ ಆನಂದ್ ಅವರು ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ಬಂದು ಪೊಲೀಸ್ ವೇಷಧಾರಿ ನಕಲಿ ಪೊಲೀಸನನ್ನು ವಶಕ್ಕೆ ಪಡೆದು ಪೊಲೀಸ್ ಠಾಣೆಗೆ ಕರೆದೊಯ್ದು ವಿಚಾರಣೆಗೆ ಒಳಪಡಿಸಿದ್ದಾಗ ಆರೋಪಿಯು ನಕಲಿ ಪೊಲೀಸ್ ಎಂಬುದು ತಿಳಿದು ಬಂದು ಆತನನ್ನು ಬಂಧಿಸಿದ್ದಾರೆ. ನಂತರ ಕೆ.ಎಂ ದೊಡ್ಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ