Thursday, November 19, 2026

ಪ್ರಾಯೋಗಿಕ ಆವೃತ್ತಿ

ಪಾಂಡವಪುರ| ಮೇಲುಕೋಟೆ ಈಗ ತಂಬಾಕು ಮುಕ್ತ ಗ್ರಾಮ

ಮಂಡ್ಯ ಜಿಲ್ಲೆ, ಪಾಂಡವಪುರ ತಾಲ್ಲೂಕಿನ ಮೇಲುಕೋಟೆ ಯನ್ನು ಅಮೃತ ಗ್ರಾಮ ಪಂಚಾಯಿತಿ, ಮೇಲುಕೋಟೆಯ ಎಲ್ಲ ಚುನಾಯಿತ ಸದಸ್ಯರು ಹಾಗೂ ಗ್ರಾಮಸ್ಥರು ಒಟ್ಟಾಗಿ ಸೇರಿ ಅಧಿಕೃತವಾಗಿ ತಂಬಾಕು ಮುಕ್ತ ಗ್ರಾಮ ಎಂದು ಘೋಷಿಸುವ ಮೂಲಕ ಹೊಸ ಶೆಕೆ ಆರಂಭಿಸಲಾಯಿತು.

ಈ ಮೂಲಕ ಮಂಡ್ಯ ಜಿಲ್ಲೆಯಲ್ಲಿ ನಾಲ್ಕನೇ ತಂಬಾಕು ಮುಕ್ತ ಗ್ರಾಮ ಎಂಬ ಹೆಗ್ಗಳಿಕೆಗೆ ಮೇಲುಕೋಟೆಗೆ ಪಾತ್ರವಾಗಿದೆ. ಈಗಾಗಲೇ ಶ್ರೀರಂಗಪಟ್ಟಣ ತಾಲ್ಲೂಕಿನ ನಗುವಿನಹಳ್ಳಿ, ಪಾಂಡವಪುರ ತಾಲ್ಲೂಕಿನ ಚಾಗಶೆಟ್ಟಳ್ಳಿ, ಮದ್ದೂರು ತಾಲ್ಲೂಕಿನ ಚಿಕ್ಕರಸಿನಕೆರೆ ಗ್ರಾಮಗಳು ತಂಬಾಕು ಮುಕ್ತ ಗ್ರಾಮಗಳಾಗಿ ಅಧಿಕೃತವಾಗಿ ಘೋಷಣೆಯಾಗಿದ್ದು ಈ ಪಟ್ಟಿಗೆ ಮೇಲುಕೋಟೆ ಸಹ ಸೇರ್ಪಡೆಯಾಗಿದ್ದು ನಿಜಕ್ಕೂ ಸಂತಸದ ಸಂಗತಿಯಾಗಿದೆ.

ಇನ್ನು ಮುಂದೆ ಮೇಲುಕೋಟೆ ಗ್ರಾಮದ ವ್ಯಾಪ್ತಿಯಲ್ಲಿ ಸಿಗರೇಟು, ಬೀಡಿ, ತಂಬಾಕು ಉತ್ಪನ್ನಗಳ ಮಾರಾಟ ಹಾಗೂ ಸೇವನೆ ಸಂಪೂರ್ಣ ನಿಷೇಧಿಸಲಾಗಿದ್ದು ಉಲ್ಲಂಘಿಸಿದರೆ ಸ್ಥಳೀಯ ಕಾವಲು ಸಮಿತಿ ಕಾನೂನು ಪ್ರಕಾರ ಕ್ರಮ ಕೈಗೊಳ್ಳುವ ಸಂಪೂರ್ಣ ಅಧಿಕಾರವನ್ನು ಹೊಂದಿದೆ.

ಈ ಆರೋಗ್ಯ ಪೂರಕ ಕಾರ್ಯಕ್ರಮದಲ್ಲಿ ಸ್ಥಳೀಯ ಪಂಚಾಯಿತಿ ಅಧ್ಯಕ್ಷರಾದ ಶ್ರೀ ಸೋಮಶೇಖರ್, ಉಪಾಧ್ಯಕ್ಷರಾದ ಶ್ರೀ ತಿರುಮಲೈ, ಸದಸ್ಯರುಗಳಾದ ಕುಮಾರ್ ಹಾಗೂ ಇನ್ನಿತರರು, ಪಿಡಿಓ ಶ್ರೀ ರಾಜೇಶ್ವರ, ವಿಶೇಷ ಆಹ್ವಾನಿತರಾಗಿ ಆಗಮಿಸಿದ್ದ ಜಿಲ್ಲಾ ಸರ್ವೆಕ್ಷಣಾಧಿಕಾರಿಗಳಾದ ಡಾ.ಎಂ.ಡಿ.ಸಂಜಯ್, ತಾಲೂಕು ಆರೋಗ್ಯಾಧಿಕಾರಿಗಳಾದ ಡಾ.ಅರವಿಂದ್, ಜಿಲ್ಲಾ ಸಲಹೆಗಾರರಾದ ತಿಮ್ಮರಾಜು ಎಸ್ ಎನ್, ಸಾಮಾಜಿಕ ಕಾರ್ಯಕರ್ತ ಮೋಹನ್ ಕುಮಾರ್ ವೈಕೆ, ಪ್ರಯೋಗ ಶಾಲಾ ತಂತ್ರಜ್ಞಾನಧಿಕಾರಿಗಳಾದ ಗಿರೀಶ್, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ನಟರಾಜ್, ಹಿರಿಯ ಆರೋಗ್ಯ ಸುರಕ್ಷತಾಧಿಕಾರಿಗಳಾದ ಪ್ರಭಾ , ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಸಂತೋಷ, ಆರೋಗ್ಯ ಸುರಕ್ಷತಾಧಿಕಾರಿಗಳಾದ ಉಮಾದೇವಮ್ಮ, ಆಶಾ ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಹಾಜರಿದ್ದು ಕಾರ್ಯಕ್ರಮವನ್ನು ಯಶಸ್ವೀ ಗೊಳಿಸಿ ತಂಬಾಕು ಮುಕ್ತ ಮೇಲುಕೋಟೆ ಬಗೆಗೆ ಪ್ರತಿಜ್ಞಾ ವಿಧಿ ಸ್ವೀಕಾರದೊಡನೆ ಕಾರ್ಯಕ್ರಮವನ್ನು ಮುಕ್ತಾಯಗೊಳಿಸಲಾಯಿತು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ