Tuesday, November 24, 2026

ಪ್ರಾಯೋಗಿಕ ಆವೃತ್ತಿ

ಜಿಲ್ಲೆಯ 4ನೇ ತಂಬಾಕು ಮುಕ್ತ ಗ್ರಾಮ ಮೇಲುಕೋಟೆ

ಪಾಂಡವಪುರ ತಾಲ್ಲೂಕಿನ ಮೇಲುಕೋಟೆಯನ್ನು ಎಲ್ಲ ಚುನಾಯಿತ ಸದಸ್ಯರು ಹಾಗೂ ಗ್ರಾಮಸ್ಥರು ಒಟ್ಟಾಗಿ ಸೇರಿ ಅಧಿಕೃತವಾಗಿ ತಂಬಾಕು ಮುಕ್ತ ಗ್ರಾಮ ಎಂದು ಘೋಷಿಸಿದ್ದಾರೆ. ಈ ಮೂಲಕ ಮಂಡ್ಯ ಜಿಲ್ಲೆಯಲ್ಲಿ ನಾಲ್ಕನೇ ತಂಬಾಕು ಮುಕ್ತ ಗ್ರಾಮ ಎಂಬ ಹೆಗ್ಗಳಿಕೆಗೆ ಮೇಲುಕೋಟೆ ಪಾತ್ರವಾಗಿದೆ.

ಈಗಾಗಲೇ ಶ್ರೀರಂಗಪಟ್ಟಣ ತಾಲ್ಲೂಕಿನ ನಗುವಿನಹಳ್ಳಿ, ಪಾಂಡವಪುರ ತಾಲ್ಲೂಕಿನ ಚಾಗಶೆಟ್ಟಳ್ಳಿ, ಮದ್ದೂರು ತಾಲ್ಲೂಕಿನ ಚಿಕ್ಕರಸಿನಕೆರೆ ಗ್ರಾಮಗಳು ತಂಬಾಕು ಮುಕ್ತ ಗ್ರಾಮಗಳಾಗಿ ಅಧಿಕೃತವಾಗಿ ಘೋಷಣೆಯಾಗಿದ್ದು, ಈ ಪಟ್ಟಿಗೆ ಮೇಲುಕೋಟೆ ಸಹ ಸೇರ್ಪಡೆಯಾಗಿದೆ.

ಇನ್ನು ಮುಂದೆ ಮೇಲುಕೋಟೆ ಗ್ರಾಮದ ವ್ಯಾಪ್ತಿಯಲ್ಲಿ ಸಿಗರೇಟು, ಬೀಡಿ, ತಂಬಾಕು ಉತ್ಪನ್ನಗಳ ಮಾರಾಟ ಹಾಗೂ ಸೇವನೆ ಸಂಪೂರ್ಣ ನಿಷೇಧಿಸಲಾಗಿದ್ದು ಉಲ್ಲಂಘಿಸಿದರೆ ಸ್ಥಳೀಯ ಕಾವಲು ಸಮಿತಿ ಕಾನೂನು ಪ್ರಕಾರ ಕ್ರಮ ಕೈಗೊಳ್ಳುವ ಸಂಪೂರ್ಣ ಅಧಿಕಾರವನ್ನು ಹೊಂದಿದೆ.

ಈ ಕಾರ್ಯಕ್ರಮದಲ್ಲಿ ಸ್ಥಳೀಯ ಪಂಚಾಯಿತಿ ಅಧ್ಯಕ್ಷ ಸೋಮಶೇಖರ್, ಉಪಾಧ್ಯಕ್ಷ ತಿರುಮಲೈ, ಸದಸ್ಯರಾದ ಕುಮಾರ್, ಪಿಡಿಓ ರಾಜೇಶ್ವರ, ಜಿಲ್ಲಾ ಸರ್ವೆಕ್ಷಣಾಧಿಕಾರಿ ಡಾ.ಎಂ.ಡಿ.ಸಂಜಯ್, ತಾಲೂಕು ಆರೋಗ್ಯಾಧಿಕಾರಿ ಡಾ.ಅರವಿಂದ್, ಜಿಲ್ಲಾ ಸಲಹೆಗಾರ ತಿಮ್ಮರಾಜು ಮತ್ತಿತರರು ಭಾಗವಹಿಸಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ