Sunday, November 22, 2026

ಪ್ರಾಯೋಗಿಕ ಆವೃತ್ತಿ

ಹಾಲು ಉತ್ಪಾದಕರಿಗೆ ಪ್ರೋತ್ಸಾಹಧನ ಬಿಡುಗಡೆ ಮಾಡಲು ಒತ್ತಾಯ

ಜಿಲ್ಲೆಯ ಹಾಲು ಉತ್ಪಾದಕರಿಗೆ 2022ರ ನವೆಂಬರ್ ಮಾಹೆಯಿಂದ ಪಾವತಿಸಲು ಬಾಕಿ ಉಳಿಸಿಕೊಳ್ಳಲಾಗಿರುವ ಪ್ರೋತ್ಸಾಹಧನವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಶಾಸಕ ಮಧು ಜಿ.ಮಾದೇಗೌಡ ಒತ್ತಾಯಿಸಿದರು.

ವಿಧಾನ ಪರಿಷತ್ತಿನಲ್ಲಿ ಗುರುವಾರ ಶಾಸಕರ ಪ್ರಶ್ನೆಗೆ ಲಿಖಿತ ಉತ್ತರ ನೀಡಿರುವ ಪಶುಸಂಗೋಪನೆ ಸಚಿವ ಪ್ರಭು ಬಿ.ಚವ್ಹಾಣ್, ಮಂಡ್ಯ ಜಿಲ್ಲೆಯಲ್ಲಿ 2022 ಡಿಸೆಂಬರ್ ಅಂತ್ಯದವರೆಗೆ ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಠ ಪಂಗಡಗಳ ಹಾಲು ಉತ್ಪಾದಕರಿಗೆ ಪ್ರೋತ್ಸಾಹಧನ ಪಾವತಿಯಾಗಿದ್ದು, ಸಾಮಾನ್ಯ ವರ್ಗದ ಹಾಲು ಉತ್ಪಾದಕರಿಗೆ 2022ರ ನವೆಂಬರ್, ಡಿಸೆಂಬರ್ ಮಾಹೆಯ ಒಟ್ಟು 24.77 ಕೋಟಿ ಪ್ರೋತ್ಸಾಹಧನ ಪಾವತಿ ಬಾಕಿ ಇರುತ್ತದೆ ಎಂದು ತಿಳಿಸಿದ್ದಾರೆ.

2023ರ ಜನವರಿ ಮಾಹೆಯ ಪ್ರೋತ್ಸಾಹಧನ ಪಾವತಿಗೆ ಸಂಬಂಧಿಸಿದಂತೆ ಡೇಟಾ ಎಂಟ್ರಿ ಪ್ರಕ್ರಿಯೆ ಪ್ರಗತಿಯಲ್ಲಿದೆ. ಶೀಘ್ರದಲ್ಲೇ ಬಾಕಿ ಇರುವ ಪ್ರೋತ್ಸಾಹಧನ ಹಣವನ್ನು ಹಾಲು ಉತ್ಪಾದಕರಿಗೆ ಪಾವತಿಸಲು ಕ್ರಮವಹಿಸಲಾಗುವುದು ಎಂದು ತಿಳಿಸಿದರು.

ರೂ.5.57 ಕೋಟಿ ಹಣ ದುರುಪಯೋಗ

ಮಂಡ್ಯ ಜಿಲ್ಲೆಯಲ್ಲಿನ 258 ಹಾಲು ಉತ್ಪಾದಕ ಸಹಕಾರ ಸಂಘಗಳಲ್ಲಿ ಒಟ್ಟು ರೂ.5,57,65,334 ಮೊತ್ತದ ಹಣ ದುರುಪಯೋಗವಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ