Friday, November 20, 2026

ಪ್ರಾಯೋಗಿಕ ಆವೃತ್ತಿ

ಹೆಚ್. ಹೊನ್ನಪ್ಪ ಶ್ರದ್ಧಾಂಜಲಿ ಸಭೆ ಫೆ.19ಕ್ಕೆ

ವಿಧಾನ ಪರಿಷತ್‌ ಮಾಜಿ ಸದಸ್ಯ ಹಾಗೂ ಜನತಾ ಶಿಕ್ಷಣ ಸಂಸ್ಥೆಯ ಮಾಜಿ ಅಧ್ಯಕ್ಷರೂ ಆಗಿದ್ದ ಹೆಚ್.ಹೊನ್ನಪ್ಪ ಅವರ ಶ್ರದ್ದಾಂಜಲಿ ಸಭೆಯು ಫೆ.19ರಂದು ಭಾನುವಾರ ಸಂಜೆ 4 ಗಂಟೆಗೆ ಮಂಡ್ಯ ನಗರದ ಕರ್ನಾಟಕ ಸಂಘದ ಆವರಣದಲ್ಲಿ ನಡೆಯಲಿದೆ.

ಶಾಸಕ ಎಂ.ಶ್ರೀನಿವಾಸ್, ಮಾಜಿ ಸಚಿವ ಎಂ.ಎಸ್.ಆತ್ಮಾನಂದ, ಮಾಜಿ ಶಾಸಕರಾದ ಜಿ.ಬಿ.ಶಿವಕುಮಾರ್, ಬಿ.ರಾಮಕೃಷ್ಣ, ಕೆ.ಟಿ.ಶ್ರೀಕಂಠೇಗೌಡ, ಪಿಇಟಿ ಅಧ್ಯಕ್ಷ ಕೆ.ಎಸ್‌.ವಿಜಯಾನಂದ, ಬಿಜೆಪಿ ಮುಖಂಡ ಡಾ.ಸಿದ್ದರಾಮಯ್ಯ, ಸಾಹಿತಿ ಡಾ.ಎಚ್.ಎಸ್‌.ಮುದ್ದೇಗೌಡ, ರೈತ ಮುಖಂಡ ಕೆ.ಬೋರಯ್ಯ, ಬಿಜೆಪಿ ಮುಖಂಡ ಚಂದಗಾಲು ಶಿವಣ್ಣ, ವಿಶ್ರಾಂತ ಪ್ರಾಧ್ಯಾಪಕ ಪ್ರೊ.ಹುಲ್ಕೆರೆ ಮಹದೇವು, ಕನ್ನಡ  ಅಧ್ಯಾಪಕರಾದ ಡಾ.ಎಂ.ಎಸ್.ಅನಿತಾ ಮುಂತಾದವರು ಭಾಗವಹಿಸುವರೆಂದು ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ.ಜಯಪ್ರಕಾಶ ಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ