Thursday, November 19, 2026

ಪ್ರಾಯೋಗಿಕ ಆವೃತ್ತಿ

ಅಭಿವೃದ್ಧಿ ಕಾರ್ಯಗಳೇ ತಮಗೆ ಶ್ರೀರಕ್ಷೆ : ಸುರೇಶ್ ಗೌಡ

ವರದಿ : ಪ್ರಭು ವಿ ಎಸ್

ಕ್ಷೇತ್ರದಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳೇ ತಮಗೆ ಶ್ರೀರಕ್ಷೆಯಾಗಲಿದ್ದು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕ್ಷೇತ್ರದ ಮತದಾರರು ತಮ್ಮ ಕೈ ಹಿಡಿಯಲಿದ್ದಾರೆ ಎಂದು ನಾಗಮಂಗಲ ವಿಧಾನಸಭಾ ಕ್ಷೇತ್ರದ ಶಾಸಕ ಸುರೇಶ್ ಗೌಡ ತಿಳಿಸಿದರು.

ಮದ್ದೂರು ತಾಲೂಕಿನ ಕೊಪ್ಪ ಹೋಬಳಿಯ ದೊಡ್ಡ ಹೊಸಗಾವಿ ಗ್ರಾಮದಲ್ಲಿ ಆಯೋಜಿಸಿದ ಜೆಡಿಎಸ್ ಕಾರ್ಯಕರ್ತರ ಸಭೆ ಹಾಗೂ ಮನೆ ಮನೆ ಪ್ರವಾಸ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಮಾಜಿ ಸಚಿವ ಎನ್ ಚಲುವರಾಯಸ್ವಾಮಿ ಅವರು ಸುಖ ಸುಮ್ಮನೆ ತಮ್ಮ ಮೇಲೆ ಆರೋಪ ಮಾಡುತ್ತಿದ್ದು ಅವರಿಂದ ಯಾವದೇ ಸರ್ಟಿಫಿಕೇಟ್ ತಾವು ಪಡೆಯುವ ಅವಶ್ಯಕತೆ ಇಲ್ಲ, ಹಳ್ಳಿಯ ಜನರೇ ತೀರ್ಮಾನ ಮಾಡಲಿದ್ದು, ತಾವು ಪ್ರತಿ ಗ್ರಾಮಕ್ಕೂ ಭೇಟಿ ನೀಡಿ ಹಲವರು ಶಾಶ್ವತ ಯೋಜನೆಗಳನ್ನು ಅನುಷ್ಠಾನಗೊಳಿಸಿರುವುದು ಅವರಿಗೆ ಕಾಣುವುದಿಲ್ಲವೇ ಎಂದು ಪ್ರಶ್ನಿಸಿದರು.

ಕಳೆದ 15 ವರ್ಷಗಳಿಂದಲೂ ಸಚಿವ, ಶಾಸಕ, ಸಂಸದರಾಗಿ ಚಲುವರಾಯಸ್ವಾಮಿ ಅವರ ಅವಧಿಯಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ಜರುಗಿಲ್ಲ, ಅವರು ಕುಡಿಯುವ ನೀರು ರಸ್ತೆ ಮೂಲಭೂತ ಸೌಕರ್ಯ ಕರೆಕಟ್ಟೆಗಳಿಗೆ ನೀರು ಯಾವುದೇ ಯೋಜನೆಗಳನ್ನು ಅನುಷ್ಠಾನಗೊಳಿಸದೆ ಈಗ ಜನರ ಬಳಿ ತೆರಳಿ ತಮಗೊಂದು ಅವಕಾಶ ಕೊಡಿ ಎಂದು ಮನವಿ ಮಾಡುತ್ತಿದ್ದಾರೆ ಎಂದು ದೂರಿದರು.

ಕೊಪ್ಪ ಹೋಬಳಿಯ ವ್ಯಾಪ್ತಿಯಲ್ಲಿ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡು ಈ ಭಾಗದ ಜನರಿಗೆ ಅನುಕೂಲ ಕಲ್ಪಿಸಿದ್ದು 2023ರ ಚುನಾವಣೆಯಲ್ಲಿ ತಮ್ಮನ್ನು ಅತ್ಯಧಿಕ ಮತಗಳಿಂದ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದರು. ಮತ್ತೊಮ್ಮೆ ಕುಮಾರಸ್ವಾಮಿ ಅವರು ರಾಜ್ಯದ ಮುಖ್ಯಮಂತ್ರಿ ಆಗಲಿದ್ದಾರೆ ಎಂದರು.

ಜೆಡಿಎಸ್ ಪಕ್ಷವು ಬಿಜೆಪಿ ಪಕ್ಷದ ಬಿ ಟೀಮ್ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಲೋಕಸಭಾ ಉಪ ಚುನಾವಣೆ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಪಕ್ಷದ ವರಿಷ್ಠರ ಆದೇಶವನ್ನು ಧಿಕ್ಕರಿಸಿ ಯಾರ ಪರ ಚುನಾವಣೆ ನಡೆಸಿದರೆಂದು ಜನರಿಗೆ ಗೊತ್ತಿದೆ ಎಂದು ತಿರುಗೇಟು ನೀಡಿದರು. ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳು ಒಂದೇ ನಾಣ್ಯದ ಎರಡು ಮುಖಗಳೆಂದು ಬಣ್ಣಿಸಿದ ಅವರು ಚುನಾವಣೆ ಸಂದರ್ಭದಲ್ಲಿ ಜನರ ದಿಕ್ಕು ತಪ್ಪಿಸುವ ಸದುದ್ದೇಶದಿಂದ ಇಂತಹ ಸುಳ್ಳುಗಳನ್ನು ಹೇಳುವ ಮೂಲಕ ಜನರನ್ನು ಮರೆಮಾಚಿಸುತ್ತಿದ್ದಾರೆ ಎಂದು ಆರೋಪಿಸಿದರು.

ನಿರಾಸದಾಯಕ ಬಜೆಟ್

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಡಿಸಿರುವ ಬಜೆಟ್ ನಿರಾಶದಾಯಕವಾಗಿದ್ದು ಮೈಸೂರು ಪ್ರಾಂತ್ಯ ಸೇರಿದಂತೆ ಮಂಡ್ಯ ಜಿಲ್ಲೆಗೆ ಯಾವುದೇ ಅನುದಾನ ಬಿಡುಗಡೆಗೊಳಿಸದೆ ನಿರ್ಲಕ್ಷ್ಯ ಧೋರಣೆ ಅನುಸರಿಸಿದ್ದಾರೆಂದು ದೂರಿದರು.

ಬಿಜೆಪಿ ಸರ್ಕಾರ ಮಂಡಿಸಿರುವ ಬಜೆಟ್ ಕೇವಲ ಕಾಲಹರಣ ಬಜೆಟ್ ಆಗಿದ್ದು, ಚುನಾವಣೆಯನ್ನು ಅಸ್ತ್ರವನ್ನಗಿಟ್ಟುಕೊಂಡು ಮಂಡಿಸಿರುವ ಬಜೆಟ್ ನಲ್ಲಿ ಯಾವುದೇ ಯೋಜನೆಗಳು ಅನುಷ್ಠಾನವಾಗುವುದಿಲ್ಲ ವೆಂದ ಅವರು ಜೂನ್ ಜುಲೈನಲ್ಲಿ ಹೊಸ ಸರ್ಕಾರ ಅಧಿಕಾರಕ್ಕೆ ಬಂದು ಮಂಡಿಸುವ ಬಜೆಟ್ ಗೆ ಹೆಚ್ಚಿನ ಪ್ರಾತಿನಿಧ್ಯವಿರುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಘಟಕದ ಉಪಾಧ್ಯಕ್ಷ ಪ್ರದೀಪ್, ಸ್ಥಳೀಯ ಮುಖಂಡರಾದ ಹೊಸಗಾವಿ ಚೆನ್ನಪ್ಪ, ಸಂತೋಷ್ ಕುಮಾರ್, ಅಶೋಕ್, ಸಿ ವಿ ರಾಜು ,ಕುಮಾರ್ ಬೆಟ್ಟಯ್ಯ, ಎಂ ಡಿ ಜಬಿವುಲ್ಲಾ ಸೇರಿದಂತೆ ಹಲವು ಮುಖಂಡರು ಹಾಜರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ