Tuesday, November 24, 2026

ಪ್ರಾಯೋಗಿಕ ಆವೃತ್ತಿ

ಪುರಸಭೆ ಮಾಜಿ ಉಪಾಧ್ಯಕ್ಷ ಶಿವಕುಮಾರ್ ಬಿಜೆಪಿಗೆ

ಮಳವಳ್ಳಿ ಪುರಸಭೆ ಮಾಜಿ ಉಪಾಧ್ಯಕ್ಷ ಶಿವಕುಮಾರ್ ಅವರು
ತಾಲ್ಲೂಕು ಮಂಡಲ ಅಧ್ಯಕ್ಷ ಕೃಷ್ಣ ಅವರ ನೇತೃತ್ವದಲ್ಲಿ ಸೇರ್ಪಡೆ ಗೊಂಡರು.

ಮಂಡಲ ಅಧ್ಯಕ್ಷ ಕೃಷ್ಣ ಮಾತನಾಡಿ, ಪ್ರಧಾನಿ ನರೇಂದ್ರಮೋದಿ ಅವರ ಉತ್ತಮ ಆಡಳಿತ ಮತ್ತು ಬಿಜೆಪಿ ಸಿದ್ದಾಂತವನ್ನು ಮೆಚ್ಚಿ ಶಿವಕುಮಾರ್ ಅವರು ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ಸಾಮಾನ್ಯ ಕಾರ್ಯಕರ್ತರಾಗಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ,ಶಿವಕುಮಾರ್
ಅವರು ಬಿಜೆಪಿಗೆ ಸೇರ್ಪಡೆಗೊಂಡಿರುವುದು ಪಕ್ಷಕ್ಕೆ ಆನೆ ಬಲ ಬಂದಂತಾಗಿದೆ ಎಂದರು.

ಪುರಸಭೆ ಮಾಜಿ ಉಪಾಧ್ಯಕ್ಷ ಶಿವಕುಮಾರ್ ಮಾತನಾಡಿ, ಪ್ರಧಾನಿ
ನರೇಂದ್ರಮೋದಿ ಅವರ ಉತ್ತಮ ಆಡಳಿತ ಮಾದರಿಯಾಗಿದೆ.ಬಿಜೆಪಿ ಪಕ್ಷದಲ್ಲಿ ಸಾಮಾನ್ಯ ಕಾರ್ಯಕರ್ತನೂ ಯಾವುದೇ ಅಧಿಕಾರವನ್ನು ಪಡೆಯಬಹುದು ಎನ್ನುವುದು ಈಗಾಗಲೇ ಸಾಬೀತಾಗಿರುವುದರಿಂದ ಪಕ್ಷದ ಸಿದ್ದಂತವನ್ನು ಮೆಚ್ಚಿ ಬಿಜೆಪಿಗೆ ಸೇರ್ಪಡೆಗೊಳ್ಳುತ್ತಿದ್ದೇನೆ. ಸಾಮಾನ್ಯ ಕಾರ್ಯಕರ್ತನಾಗಿ ಪಕ್ಷ ಸಂಘಟನೆಗೆ ಮುಂದಾಗುವುದಾಗಿ ಹೇಳಿದರು.

ಇದೇ ಸಂದರ್ಭದಲ್ಲಿ ಬಿಜೆಪಿ ಮುಖಂಡ ಸತೀಶ್, ಕೆ.ಸಿ. ನಾಗೇಗೌಡ, ದೇವರಾಜು, ರಾಜೀವ್ ಸೇರಿದಂತೆ ಇತರರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ