Thursday, November 19, 2026

ಪ್ರಾಯೋಗಿಕ ಆವೃತ್ತಿ

ಸಾರಿಗೆ ನೌಕರರು ಮತ್ತು ಕುಟುಂಬ ಸದಸ್ಯರಿಂದ ಅನಿದಿರ್ಷ್ಟಾವಧಿ ಧರಣಿ

2023-2024 ಸಾಲಿನ ರಾಜ್ಯ ಸರ್ಕಾರದ ಬಜೆಟ್ ನಲ್ಲಿ ಸರ್ಕಾರ ಸಾರಿಗೆ ನೌಕರರಿಗೆ ಕೊಟ್ಟ ಲಿಖಿತ ಭರವಸೆಯನ್ನು ಈಡೇರಿಸದೆ ಭಾರಿ ನಿರಾಸೆ ಉಂಟು ಮಾಡಿರುವುದರಿಂದ ಸಾರಿಗೆ ನೌಕರರು ಮತ್ತು ಕುಟುಂಬ ಸದಸ್ಯರು ದಿನಾಂಕ 01/03/2023 ರಿಂದ ಅನಿದಿರ್ಷ್ಟಾವಧಿ ಧರಣಿ ಸತ್ಯಾಗ್ರಹವನ್ನು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಕೂಟವು ಹಮ್ಮಿಕೊಂಡಿರುವುದಾಗಿ ತಾಳಶಾಸನ ಮೋಹನ್ ಇಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಡಿಸೆಂಬರ್ ತಿಂಗಳಲ್ಲಿ ಸಾರಿಗೆ ಮುಷ್ಕರದ ಸಮಯದಲ್ಲಿ ಅಂದಿನ ಸಾರಿಗೆ ಸಚಿವರಾದ ಮಾನ್ಯ ಶ್ರೀ ಲಕ್ಷ್ಮಣ್ ಸವದಿ ಜಿ ರವರು (ಅಂದಿನ ಗೃಹ ಮಂತ್ರಿಗಳಿಂದ ಹಾಗೂ ಹಾಲಿ ಮುಖ್ಯ ಮಂತ್ರಿಗಳಾದ  ಬಸವರಾಜ ಎಸ್. ಬೊಮ್ಮಾಯಿ  ಉಪಸ್ಥಿತಿಯಲ್ಲಿ ನಡೆದ ಸಂಧಾನ ಸಭೆಯಲ್ಲಿ ಸರ್ಕಾರ ಸಾರಿಗೆ ನೌಕರರಿಗೂ 6 ನೇ ವೇತನ ಆಯೋಗ’ ಮಾದರಿಯಲ್ಲಿ ವೇತನ ನೀಡುವುದಾಗಿ ಲಿಖಿತ ಭರವಸೆ ಕೊಟ್ಟು, ಮೂರು ತಿಂಗಳ ಒಳಗೆ ಈಡೇರಿಸುವ ಭರವಸೆ ನೀಡಿದರು.

ಅಂದಿನ ಮಾನ್ಯ ಸಾರಿಗೆ ಸಚಿವರು ಅನೇಕ ಬಾರಿ ಮಾಧ್ಯಮಗಳಲ್ಲಿ 6 ನೇ ವೇತನ ಆಯೋಗ ಸಾರಿಗೆ ನೌಕರರಿಗೆ ನೀಡಲು ಸರ್ಕಾರ ಸಿದ್ಧವಿದೆ ಎಂದು ಹೇಳಿಕೆ ನೀಡಿ ಕೊನಗೆ ತೆಗೆದುಕೊಂಡ ಕಾಲಾವಧಿಯಲ್ಲಿ ಈಡೇರಿಸದ ಕಾರಣ ಏಪ್ರಿಲ್ ತಿಂಗಳಲ್ಲಿ ಮುಷ್ಕರ ಮಾಡಿದ ಸಂದರ್ಭದಲ್ಲಿ ಸಾವಿರಾರು ನೌಕರರನ್ನು ವಜಾ, ವರ್ಗಾವಣೆ ಮತ್ತು ಅಮಾನತ್ತು ಮಾಡಿ, ನೌಕರರು ಮತ್ತು ಕುಟುಂಬ ಸದಸ್ಯರ ಮೇಲೆ ಸುಳ್ಳು ಪೋಲಿಸ್ ಕೇಸುಗಳನ್ನು ಹಾಕಲಾಯಿತು ಎಂದರು.

ಮುಂದಿನ ದಿನಗಳಲ್ಲಿ ಮುಖ್ಯ ಮಂತ್ರಿ ಬಸವರಾಜ ಎಸ್.ಬೊಮ್ಮಾಯಿ ಹಾಗೂ ಮಾನ್ಯ ಶ್ರೀರಾಮುಲು ರವರು ಸಾರಿಗೆ ಸಚಿವರಾದ ಮೇಲೆ ಕೊಟ್ಟ ಲಿಖಿತ ಭರವಸೆಯನ್ನು ಈಡೇರಿಸುವಂತೆ ಮತ್ತು ಸಮಸ್ಯೆಗಳ ಶಾಶ್ವತ ಪರಿಹಾರಕ್ಕಾಗಿ ಆನೇಕ ಬಾರಿ ಮನವಿ ಮಾಡಿಕೊಂಡು ಅನೇಕ ಶಾಂತಿಯುತ ಹೋರಾಟಗಳನ್ನು ಮಾಡಿದರು. ಆದರೆ ಕೊಟ್ಟ ಲಿಖಿತ ಭರವಸೆಯನ್ನು ಈಡೇರಿಸಿರುವುದಿಲ್ಲ ಮತ್ತು ಸಮಸ್ಯೆಗಳನ್ನು ಸಂಪೂರ್ಣ ನಿವಾರಣೆ ಮಾಡಿರುವುದಿಲ್ಲ. ಕಳೆದ ಕೆಲವು ತಿಂಗಳ ಹಿಂದೆ ಸಾರಿಗೆ ಸಚಿವರು ಬಹಿರಂಗ ಸಭೆಗಳಲ್ಲಿ ಮತ್ತು ಮಾಧ್ಯಮಗಳ ಮುಂದೆ ಸಾರಿಗೆ ನೌಕರರನ್ನು 7 ನೇ ವೇತನ ಆಯೋಗದಿಂದ ಕೈ ಬಿಟ್ಟಿದ್ದು, ಸಾರಿಗೆ ನೌಕರರನ್ನು 7 ನೇ ವೇತನ ಆಯೋಗದಲ್ಲಿ ಸೇರ್ಪಡೆ ಮಾಡುವುದು, ನನ್ನ ಕಮಿಟೆಂಟ್ (ಜವಾಬ್ದಾರಿ) ಎಂದು ಸಾರಿಗೆ ಸಚಿವರು ಹೇಳಿದ್ದರು. ಆದರೆ ಈ ಸರ್ಕಾರದ ಕೊನೆಯ ಬಜೆಟ್ ನಲ್ಲಿ ಸರ್ಕಾರ ಸಾರಿಗೆ ನೌಕರರಿಗೆ ನೀಡಿದ ಲಿಖಿತ ಭರವಸೆಯನ್ನು ಈಡೇರಿಸುತ್ತದೆ ಎಂದು ಜಾತಕ ಪಕ್ಷಿಯಂತೆ ಕಾಯುತ್ತಿದ ಸಾರಿಗೆ ಸಂಸ್ಥೆಯ 1.07 ಲಕ್ಷ ಸಾರಿಗೆ ನೌಕರರು ಮತ್ತು ಕುಟುಂಬ ಸದಸ್ಯರಿಗೆ ಭಾರಿ ನಿರಾಸೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಆದರಿಂದ ಸರ್ಕಾರ ಸಾರಿಗೆ ನೌಕರರ ಮೇಲೆ ತೋರುತ್ತಿರುವ ನಿರ್ಲಕ್ಷತನವನ್ನು ಖಂಡಿಸಿ ಹಾಗೂ ಈ ಕೂಡಲೇ ಈ ಕೆಳಕಂಡ ನಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಸಾರಿಗೆ ನಿಗಮಗಳ ನೌಕರರ ಸಮಾನ ಮನಸ್ಕರ ವೇದಿಕೆ ವತಿಯಿಂದ ಸಾರಿಗೆ ನೌಕರರು ಮತ್ತು ಕುಟುಂಬ ಸದಸ್ಯರು ದಿನಾಂಕ: 01/03/2023 ರಿಂದ ಅನಿಧಿಷ್ಟಾನದ ಧರಣಿ ಸತ್ಯಾಗ್ರಹವನ್ನು ಹಲವು ಬೇಡಿಕೆಗಳನ್ನಿಟ್ಟು ಹಮ್ಮಿಕೊಳ್ಳಾಗಿದೆ ಎಂದರು.

ಪತ್ರಿಕಾ ಗೋಷ್ಠಿಯಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಸರ್ಕಾರ ಸಾರಿಗೆ ನೌಕರ ಸಂಘದ ಮುಖಂಡರಾದ  ವಿಶ್ವನಾಥ್, ರವಿ, ಉಮಾಶಂಕರ್ ಉಪಸ್ಥಿತರಿದ್ದರು. 

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಕೂಟದ ಬೇಡಿಕೆಗಳು:

1) ಮುಷ್ಕರದ ಸಮಯದಲ್ಲಿ ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳಲ್ಲಿ ನೌಕರರಿಗೆ ಆಗಿರುವ ಎಲ್ಲ ಸಮಸ್ಯೆಗಳನ್ನು ನಿವಾರಣೆ ಮಾಡಿ ದಿನಾಂಕ: 06/04/2021 -ರ ಯಥಾಸ್ಥಿತಿ ಕಾಪಾಡುವುದು.

2) ಸರ್ಕಾರ ನೀಡಿರುವ ಲಿಖಿತ ಭರವಸೆಯಂತೆ ಸಾರಿಗೆ ನೌಕರರಿಗೂ ವೇತನ ಆಯೋಗದ ಮಾದರಿಯಲ್ಲಿ, ಸರ್ಕಾರಿ ನೌಕರರ ಸರಿ ಸಮಾನ ವೇತನ ನೀಡುವುದು.

3) ಕಾರ್ಮಿಕ ಸಂಘಟನೆಗಳ ಚುನಾವಣೆ ನಡೆಸುವುದು.

4) ಸಾರಿಗೆ ಸಂಖ್ಯೆಯನ್ನು ಖಾಸಗೀಕರಣ ಮಾಡುವ ಯೋಜನೆಯನ್ನು ಕೂಡಲೇ ಕೈಬಿಡುವುದು

 

 

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ