Thursday, September 19, 2024

ಪ್ರಾಯೋಗಿಕ ಆವೃತ್ತಿ

ಆಕಸ್ಮಿಕ ಬೆಂಕಿ: 10 ಲಕ್ಷ ರೂ.ನಷ್ಟ

ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಮನೆಯ ವಸ್ತುಗಳೆಲ್ಲ ಸುಟ್ಟು ಕರಕಲಾಗಿದ್ದು, ಸುಮಾರು 10 ಲಕ್ಷ ರೂ.ಗಳಷ್ಟು ನಷ್ಟ ಸಂಭವಿಸಿರುವ ಘಟನೆ ಮಂಡ್ಯದ ಗಾಂಧಿನಗರದ 9 ನೇ ಕ್ರಾಸ್  ನಲ್ಲಿ ಇಂದು ಮಧ್ಯಾಹ್ನ 2 ಗಂಟೆ ಸಮಯದಲ್ಲಿ ನಡೆದಿದೆ.

ಗಾಂಧಿನಗರದ ನಿವಾಸಿ ನಿವೃತ್ತ ಕಂದಾಯ ಅಧಿಕಾರಿ ರಾಮಕೃಷ್ಣ ಹಾಗೂ ನಗರಸಭೆ ಮಾಜಿ ಸದಸ್ಯ ಹಾಗೂ ವಕೀಲ ಮಹೇಶ್‌ಕೃಷ್ಣ ಅವರಿಗೆ ಸೇರಿದ ಮನೆಯಲ್ಲಿ ಸೋಮವಾರ ಮಧ್ಯಾಹ್ನ ಯಾರೂ ಇಲ್ಲದ ಸಮಯದಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ.

ಬೆಂಕಿಯ ಕೆನ್ನಾಲಿಗೆಗೆ ಮನೆಯಲ್ಲಿದ್ದ ಬಟ್ಟೆಗಳು, ಫ್ರಿಡ್ಜ್, ಟಿವಿ, ದಿನಸಿ ವಸ್ತುಗಳು ಸೇರಿದಂತೆ ಮನೆಯಲ್ಲಿದ್ದ ವಸ್ತುಗಳು ಸಂಪೂರ್ಣವಾಗಿ ಸುಟ್ಟು ಹೋಗಿವೆ.
ಮನೆಯಿಂದ ಬರುತ್ತಿದ್ದ ಹೊಗೆ ಹಾಗೂ ಬೆಂಕಿಯ ಜ್ವಾಲೆಯನ್ನು ಕಂಡ ಅಕ್ಕಪಕ್ಕದ ಮನೆಯವರು ಕೂಡಲೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ.

ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿಯನ್ನು ಆರಿಸುವ ಮೂಲಕ ಹೆಚ್ಚಿನ ಅನಾಹುತವನ್ನು ತಪ್ಪಿಸಿದ್ದಾರೆ. ವಿದ್ಯುತ್ ಶಾರ್ಟ್ ಸಕ್ಯೂಟ್ ಅಥವಾ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಮಬೆಯಲ್ಲಿದ್ದ ಎಲ್ಲಾ ವಸ್ತುಗಳು ಸುಟ್ಟು ಹೋಗಿ ಸುಮಾರು 10 ಲಕ್ಷ ರೂ. ನಷ್ಟವಾಗಿದೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಂಡು ಪರಿಹಾರ ನೀಡಬೇಕು ಎಂದು ನಗರಸಭೆ ಮಾಜಿ ಸದಸ್ಯ ಮಹೇಶ್‌ಕೃಷ್ಣ ಮನವಿ ಮಾಡಿದ್ದಾರೆ.

ನಗರಸಭೆ ಮಾಜಿ ಸದಸ್ಯ ಮಹೇಶ್‌ಕೃಷ್ಣ ಅವರು ನಗರದ ಪಶ್ಚಿಮ ಪೊಲೀಸ್ ಠಾಣೆಗೆ ನೀಡಿದ ದೂರಿನ ಮೇರೆಗೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!