Monday, November 23, 2026

ಪ್ರಾಯೋಗಿಕ ಆವೃತ್ತಿ

ಗ್ಯಾಸ್ ಬೆಲೆ ಏರಿಕೆ : ಬಿಜೆಪಿ ಸರ್ಕಾರದ ವಿರುದ್ಧ ‘ಕೈ’ ಪ್ರತಿಭಟನೆ

ಮತ್ತೇ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮಾಡಿರುವ ಬಿಜೆಪಿ ಸರ್ಕಾರದ ವಿರುದ್ಧ ಮಂಡ್ಯ ನಗರ ಬ್ಲಾಕ್ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳು, ಕಾಂಗ್ರೆಸ್ಸಿನ ಮುಖಂಡರು ಹಾಗೂ ಕಾರ್ಯಕರ್ತರು ಮಂಡ್ಯ ನಗರದ ಸರ್ ಎಂ ವಿ ಪ್ರತಿಮೆ ಎದುರು ಗುರುವಾರ ಪ್ರತಿಭಟನೆ ನಡೆಸಿದರು.

ವಾಣಿಜ್ಯ ಮತ್ತು ಗೃಹಬಳಕೆಯ ಗ್ಯಾಸ್ ಸಿಲಿಂಡರ್ ಗಳ ಬೆಲೆಯನ್ನು ಧೀಡಿರನೇ ಏರಿಕೆ ಮಾಡುವ ಮೂಲಕ ಬಿಜೆಪಿ ಸರ್ಕಾರದ ಜನ ವಿರೋಧಿ ನೀತಿಯನ್ನು  ಅನುಸರಿಸುತ್ಖಂತಿದೆ ಎಂದು ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ  ಅಕ್ರೋಶ ಹೊರಹಾಕಿದರು.

ಈ ಸಂದರ್ಭದಲ್ಲಿ ನಗರಸಭಾ ಸದಸ್ಯ ಶ್ರೀಧರ್ ಮಾತನಾಡಿ, ಭಾರತ ದೇಶದಲ್ಲಿ ಬಡವರು ಮತ್ತು ಸಾಮಾನ್ಯ ವರ್ಗದ ಜನರು ಸರ್ಕಾರದ ಅವೈಜ್ಞಾನಿಕ ಆರ್ಥಿಕ ನೀತಿಯಿಂದಾಗಿ ಸಂಕಷ್ಟಕ್ಕೆ ಈಡಾಗಿದ್ದಾರೆ. ವರ್ಷಕ್ಕೆ ಎರಡು ಮೂರು ಬಾರಿ ಗ್ಯಾಸ್ ಸಿಲಿಂಡರ್ಗಳ ಬೆಲೆ ಏರಿಕೆ ಮಾಡುತ್ತಿರುವುದು, ಬಡವರ ಮೇಲೆ ಬರೆ ಎಳೆದಂತೆ ಮಾಡಿದೆ. ಇಂತಹ ಬೆಲೆ ಏರಿಕೆ ಮಾಡುವ ಬಿಜೆಪಿ ಸರ್ಕಾರವನ್ನು ಮುಂದಿನ ಚುನಾವಣೆಯಲ್ಲಿ ಕಿತ್ತೊಗೆಯಬೇಕೆಂದು ಹೇಳಿದರು.

ಜಿಲ್ಲಾ ಕಾಂಗ್ರೆಸ್ ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಡಾ. ಎಚ್ ಕೃಷ್ಣ ಮಾತನಾಡಿ, ಕಾಂಗ್ರೆಸ್ ಸರ್ಕಾರದ ಆಡಳಿತ ಅವಧಿಯಲ್ಲಿ ಗ್ಯಾಸ್ ಬೆಲೆ 600, 800 ರೂ. ಇತ್ತು, ಈಗ ಬಿಜೆಪಿ ಸರ್ಕಾರವು ಅದನ್ನು ಸಾವಿರದ ಗಡಿಯನನ್ನು ದಾಟಿಸಿದೆ, ಇಂತಹ ಬಿಜೆಪಿ ಸರ್ಕಾರವನ್ನು ಕಿತ್ತೊಗೆಯಬೇಕೆಂದು ತಿಳಿಸಿದರು.

ಮುಂದಿನ ವಿಧಾನಸಭೆ ಚುನಾವಣೆಯ ಸಮೀಪಿಸುತ್ತಿದ್ದು ಕಾಂಗ್ರೆಸ್ ನ ಗ್ಯಾರಂಟಿ ಕಾರ್ಡ್ ಅಭಿಯಾನವು ಜನಸಾಮಾನ್ಯರ ನೆರವಿಗೆ ಬರಲಿದೆ, ಆದ್ದರಿಂದ ಮತದಾರರು ಎಚ್ಚರಿಕೆಯಿಂದ ಕಾಂಗ್ರೆಸ್ ಗೆಲುವಿಗೆ ಮುಂದಾಗಬೇಕೆಂದು ಮನವಿ ಮಾಡಿದರು.

ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮುಖಂಡರಾದ ಎಂ ಎಸ್ ಆತ್ಮಾನಂದ, ಕೀಲಾರ ರಾಧಾಕೃಷ್ಣ, ಸಿದ್ದರಾಮೇಗೌಡ, ಹೊಸಹಳ್ಳಿ ಶಿವಲಿಂಗೇಗೌಡ, ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಚ್ ಕೆ ರುದ್ರಪ್ಪ, ಜಿಲ್ಲಾ ಮಹಿಳಾ ಕಾಂಗ್ರೆಸ್ ನ ಅಧ್ಯಕ್ಷ ಅಂಜನಾ, ವೀಣಾ, ಜಯಲಕ್ಷ್ಮಿ, ಪಲ್ಲವಿ,  ಜಬಿಉಲ್ಲಾ, ಮುಜಾಹಿದ್, ಪದ್ಮಮ್ಮ, ಕನ್ನಲಿ ಚನ್ನಪ್ಪ, ಸಿಎಂ ದ್ಯಾವಪ್ಪ, ಗುರುರಾಜ್,  ಸಾತನೂರು ಕೃಷ್ಣ, ಮಮತಾ ಮತ್ತಿತರರು ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ