Sunday, November 22, 2026

ಪ್ರಾಯೋಗಿಕ ಆವೃತ್ತಿ

ರಿಸರ್ವ್ ಬ್ಯಾಂಕಿನಲ್ಲಿರುವುದಕ್ಕಿಂತ ಹೆಚ್ಚು ಹಣ ಬಿಜೆಪಿಗರ ಮನೆಯಲ್ಲಿದೆ : ಕಾಂಗ್ರೆಸ್ ಟ್ಟೀಟ್

40 ಲಕ್ಷ ರೂ. ಲಂಚ ಪಡೆಯುವ ವೇಳೆ ಲೋಕಾಯುಕ್ತ ಬಲೆಗೆ ಬಿಜೆಪಿ ಶಾಸಕ ಮಾಡಾಳ್ ವಿರುಪಾಕ್ಷಪ್ಪ ಪುತ್ರ ಪ್ರಶಾಂತ್ ರೆಡ್‍ಹ್ಯಾಂಡ್‍ ಆಗಿ ಸಿಕ್ಕಿಬಿದ್ದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಸರಣಿ ಟ್ವೀಟ್ ಮಾಡಿದ್ದು, ರಿಸರ್ವ್ ಬ್ಯಾಂಕಿನಲ್ಲಿರುವುದಕ್ಕಿಂತ ಹೆಚ್ಚು ಹಣ ಬಿಜೆಪಿಗರ ಮನೆಯಲ್ಲಿದೆ! ಎಂದು ಗಂಭೀರ ಆರೋಪ ಮಾಡಿದೆ.

“>

ಒಬ್ಬ ಶಾಸಕರದ್ದೇ ಈ ಪರಿ ಲೂಟಿ ಇರುವಾಗ ಮಂತ್ರಿಗಳ ಲೂಟಿ ಇನ್ನೆಷ್ಟು? ಇಂದು ಅಮಿತ್ ಶಾ ಬರುತ್ತಿರುವುದಕ್ಕೂ, ಈ ನಿಧಿ ಸಂಗ್ರಹಕ್ಕೂ ಸಂಬಂಧವಿದೆಯೇ? ಅಮಿತ್ ಶಾ ಬರುತ್ತಿರುವುದೇ ಇಲ್ಲಿನ ‘ಸಂಪತ್ತು’ ಕೊಂಡೊಯ್ಯುವುದಕ್ಕಾ ? ಕಮಿಷನ್ ಲೂಟಿಗೆ ದಾಖಲೆ ಕೇಳುವ ಸಿಎಂ ಬೊಮ್ಮಾಯಿ ಅವರೇ, ದಾಖಲೆಗಳು ಕಂತೆ ಕಂತೆಯಾಗಿ ಸಿಕ್ಕಿವೆ ನೋಡಿ. ಈಗ ಕಮಿಷನ್ ಆರೋಪ ಒಪ್ಪುವಿರಾ? ಚುನಾವಣೆ ಖರ್ಚಿಗಾಗಿ ಬಿಜೆಪಿಯ ಚುನಾವಣೆಯ ಕಲೆಕ್ಷನ್  ಬಿರುಸಿನಿಂದ ಸಾಗಿದೆ, ಅಧಿಕಾರಾವಧಿ ಮುಗಿಯುತ್ತಿದೆ, ಮತ್ತೆಂದೂ ಅಧಿಕಾರಕ್ಕೆ ಬರುವುದಿಲ್ಲ ಎಂದು ಬಕಾಸುರನಂತೆ ದೋಚಿ ಬಾಚುತ್ತಿದೆ ಎಂದು ಕಾಂಗ್ರೆಸ್ ಕಿಡಿಕಾರಿದೆ.

ಶಾಸಕರ ಮನೆಯಲ್ಲಿ ಸಿಕ್ಕ ಹಣದ ರಹಸ್ಯವೇನು ? ಈ ಹಣ #PayCM ಗೆ ತಲುಪಿಸುವುದಕ್ಕಾ ಅಥವಾ #PayPM ಗೆ ತಲುಪಿಸುವುದಕ್ಕಾ? ಪದೇ ಪದೇ ಕರ್ನಾಟಕಕ್ಕೆ ಬರುತ್ತಿರುವ ಮೊ-ಶಾ ಜೋಡಿಗೆ ಕರ್ನಾಟಕ ಎಟಿಎಂ ಆಗಿದೆಯೇ? ಸಂಪತ್ತಿನ ಕ್ರೋಡೀಕರಣಕ್ಕಾಗಿಯೇ 40% ಕಮಿಷನ್ ಬಗ್ಗೆ ಮೋದಿ, ಶಾ ಮಾತಾಡುತ್ತಿಲ್ಲವೇ?  “ನಾ ಖಾವುಂಗಾ, ನಾ ಖಾನೆದುಂಗಾ” ಎನ್ನುವ ನರೇಂದ್ರ ಮೋದಿ ಅವರೇ, ಇಲ್ಲಿರುವುದು ಡಬಲ್ ಇಂಜಿನ್ ಸರ್ಕಾರವಲ್ಲ, ಡಬಲ್ ಲೂಟಿಯ ಸರ್ಕಾರ. ನಿಮ್ಮವರ ಲೂಟಿ ಸಾಧನೆಯನ್ನು ಕಣ್ತುಂಬಿಕೊಳ್ಳಲೆಂದೇ ಕರ್ನಾಟಕಕ್ಕೆ ತಿಂಗಳಿಗೆ ಮೂರು ಬಾರಿ ಬರುತ್ತಿರುವಿರಾ? “ಶಬಾಷ್” ಎಂದು ಬಿಜೆಪಿ ಭ್ರಷ್ಟರ ಬೆನ್ನು ತಟ್ಟಿ ಹೋಗುವಿರಾ? ಎಂದು ಕಾಲೆಳೆದಿದೆ.

ಕಮಿಷನ್ ಲೂಟಿಯ ಹಣ ಇಡಲು ಮನೆಗಳು ಸಾಲದೆ ಬಿಜೆಪಿಗರು ದೊಡ್ಡ ದೊಡ್ಡ ಗೋಡೌನ್‌ಗಳನ್ನೇ ಕಟ್ಟಿಸಿರುವಂತಿದೆ! ಒಬ್ಬೊಬ್ಬರಲ್ಲೂ ಲಾರಿಯಲ್ಲಿ ಲೋಡ್ ಮಾಡುವಷ್ಟು ಭ್ರಷ್ಟ ಹಣ ತುಂಬಿ ತುಳುಕುತ್ತಿದೆ. ಹೀಗಿದ್ದರೂ ಬಿಜೆಪಿಗರತ್ತ ಸುಳಿಯದ ಐಟಿ, ಇಡಿ, ಸಿಬಿಐಗಳು ಬಾಳೆಹಣ್ಣಿನ ಸಿಪ್ಪೆ ತೆಗೆಯುತ್ತಿವೆಯೇ ಅಮಿತ್ ಶಾ ಅವರೇ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ