Friday, September 20, 2024

ಪ್ರಾಯೋಗಿಕ ಆವೃತ್ತಿ

ಜನಪರ ಯೋಜನೆಗಳಿಗೆ ಕಾಂಗ್ರೆಸ್ ಗ್ಯಾರಂಟಿ : ಪಿ.ಎಂ ನರೇಂದ್ರಸ್ವಾಮಿ

ಬೆಲೆ ಏರಿಕೆಯ ಸಂಕಷ್ಟದಲ್ಲಿರುವ ಜನರಿಗೆ ನೆರವಾಗುವ ಉದ್ದೇಶದಿಂದ ಕಾಂಗ್ರೆಸ್ ಪಕ್ಷ ಐತಿಹಾಸಿಕ ಮೂರು ಗ್ಯಾರಂಟಿ ಯೋಜನೆಗಳನ್ನು ಘೋಷಿಸಿದ್ದು, ಪ್ರತಿಯೊಬ್ಬರು ಕಾಂಗ್ರೆಸ್‌ವನ್ನು ಬೆಂಬಲಿಸಿದರೇ ಕಾಂಗ್ರೆಸ್ ಪಕ್ಷ ಮತದಾರರನ್ನು ಪೋಷಿಸುತ್ತದೆ ಎಂದು ಕೆಪಿಸಿಸಿ ಉಪಾಧ್ಯಕ್ಷ ಪಿ.ಎಂ ನರೇಂದ್ರಸ್ವಾಮಿ ತಿಳಿಸಿದರು.

ಮಳವಳ್ಳಿ ಪಟ್ಟಣದ ಆಂಜನೇಯ ದೇವಸ್ಥಾನ ಆವರಣದಲ್ಲಿ ಮಹಿಳೆಯರಿಗೆ ಗ್ಯಾರಂಟಿ ಕಾರ್ಡ್ಗಳನ್ನು ವಿತರಿಸಿದ ಸಂದರ್ಭದಲ್ಲಿ ಮಾತನಾಡಿದ ಅವರು, ಸಂಕಷ್ಟದಲ್ಲಿರುವ ಜನರ ಕೈ ಹಿಡಿಯುವ ಉದ್ದೇಶದಿಂದ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದಲ್ಲಿ ಗೃಹಜ್ಯೋತಿ ಯೋಜನೆ ಮೂಲಕ 200 ಯುನಿಟ್ ಉಚಿತ ವಿದ್ಯುತ್, ಗೃಹಲಕ್ಷ್ಮಿ ಯೋಜನೆ ಮೂಲಕ ಪ್ರತಿ ಕುಟುಂಬದ ಯಜಮಾನಿಗೆ ಮಾಸಿಕ 2000 ರೂ ಹಾಗೂ ಬಿಪಿಎಲ್ ಕಾರ್ಡ್ ಹೊಂದಿರುವ ಪ್ರತಿ ಕುಟುಂಬದ ಸದಸ್ಯರಿಗೆ ತಲಾ 10 ಕೆಜಿ ಅಕ್ಕಿಯನ್ನು ನೀಡಲು ತೀರ್ಮಾನಿಸಿದೆ ಎಂದು ಹೇಳಿದರು.

ಕಾಂಗ್ರೆಸ್ ಮುಖಂಡರು ಪ್ರತಿ ಮನೆಗಳಿಗೂ ಗ್ಯಾರಂಟಿ ಕಾರ್ಡ್ ವಿತರಣೆ ಮಾಡಲಿದ್ದಾರೆ ಜೊತೆಗೆ ಈ ಸಮಯದಲ್ಲಿ ಮನೆ ಮನೆಗೆ ಹೋಗಿ ಕಾರ್ಡ್ ನೀಡುವ ನೋಂದಣಿದಾರರ ಹೆಸರು, ದೂರವಾಣಿ ಸಂಖ್ಯೆ ಪಡೆಯಲಾಗುವುದು. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣವೇ ಗ್ಯಾರಂಟಿ ಕಾರ್ಡ್ ಪಡೆದಿರುವ ಕುಟುಂಬಕ್ಕೆ ದೂರವಾಣಿ ಮೂಲಕ ಸಂಪರ್ಕಮಾಡಿ, ಖಾತೆಗೆ ಹಣ ಬರುವ ಮಾಹಿತಿ ನೀಡುತ್ತಾರೆ, ವಿದ್ಯುತ್ ಮೀಟರ್ ನಂಬರ್ ನೊಂದಾಣಿ ಮಾಡಿಸಿದ ಕೂಡಲೇ 200 ಯುನಿಟ್ ಉಚಿತ ವಿದ್ಯುತ್ ನೀಡಲಾಗುತ್ತದೆ, ಸರ್ಕಾರದ ವತಿಯಿಂದ ತಲಾ 10 ಕೆಜಿ ಅಕ್ಕಿ ನೀಡುವ ಬಗ್ಗೆ ಘೋಷಣೆ ಮಾಡಲಾಗುತ್ತಿದೆ, ಎಲ್ಲಾ ಸೌಲಭ್ಯಗಳನ್ನು ಪಡೆಯಲು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕೆಂದು ಕರೆ ನೀಡಿದರು.

ಬಿಜೆಪಿ ಸರ್ಕಾರದಲ್ಲಿ ಒಂದು ಕಡೆ ಭ್ರಷ್ಟಾಚಾರದಲ್ಲಿ ಮುಳುಗಿದರೇ ಮತ್ತೊಂದು ಕಡೆಗಳಲ್ಲಿ ಸುಳ್ಳಿನ ಸರಮಾಲೆಯನ್ನು ಸುರಿಸುತ್ತಿದ್ದಾರೆ, ದೇಶವನ್ನು ಮಾರುವವರಿಂದ ರಕ್ಷಿಸಲು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ ಶಕ್ತಿ ತುಂಬಬೇಕೆಂದು ಕೋರಿದರು.

ಇದೇ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದೇವರಾಜು, ಕೆಪಿಸಿಸಿ ಸದಸ್ಯ ಪುಟ್ಟಸ್ವಾಮಿ, ಬಸಪ್ಪ, ಚೌಡಯ್ಯ, ಸೇರಿದಂತೆ ಇತರರು ಇದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!