Tuesday, November 24, 2026

ಪ್ರಾಯೋಗಿಕ ಆವೃತ್ತಿ

ಗ್ಯಾಸ್ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

ಗೃಹ ಬಳಕೆ ಗ್ಯಾಸ್ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಮಹಿಳಾ ಕಾರ್ಯಕರ್ತರು ಮಂಡ್ಯ ನಗರದ ಡಿಸಿ ಕಚೇರಿ ಎದುರು ಹೆದ್ದಾರಿಯಲ್ಲಿ ಪ್ರತಿಭಟನೆ ನಡೆಸಿ ಬಿಜೆಪಿ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.

ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅಂಜನಾ ಮತ್ತು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಡಾ.ಹೆಚ್.ಕೃಷ್ಣ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ ನಡೆಸಿ ಬಿಜೆಪಿ ಸರ್ಕಾರದ ವಿರುದ್ದ ಧಿಕ್ಕಾರ ಕೂಗುವ ಮೂಲಕ ಕಿಡಿಕಾರಿದರು.

ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮತಿ ಅಧ್ಯಕ್ಷ ಡಾ.ಹೆಚ್.ಕೃಷ್ಣ ಮಾತನಾಡಿ, ಗೃಹ ಬಳಕೆ ಗ್ಯಾಸ್ ಸಿಲಿಂಡರ್, ಪೆಟ್ರೋಲ್, ಡಿಸೇಲ್ ಬೆಲೆ ಸೇರಿದಂತೆ ದಿನನಿತ್ಯ ಬಳಸುವ ಅಗತ್ಯ ಪದಾರ್ಥಗಳ ಬೆಲೆ ಏರಿಕೆ ಮಾಡಿದ್ದೇ ಬಿಜೆಪಿ ಸರ್ಕಾರದ ಸಾಧನೆಯಾಗಿದೆ. 40 ಪರ್ಸೆಂಟ್ ಕಮಿಷನ್ ಸರ್ಕಾರ ಎಂದೇ ಜನರು ಛೀಮಾರಿ ಹಾಕುತ್ತಿದ್ದಾರೆ ಎಂದು ಕಿಡಿಕಾರಿದರು.

ಮುಂಬರುವ 2023ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಸರ್ಕಾರದ ರಚನೆಗೆ ಅನುಮಾಡಿಕೊಟ್ಟರೆ 500 ರೂ.ಗೆ ಗ್ಯಾಸ್ ಸಿಲಿಂಡರ್ ಲಭ್ಯವಾಗಲಿದೆ. ಗೃಹಿಣಿಯರಿಗೆ 2000 ರೂ. ಪ್ರೋತ್ಸಾಹ ಧನ ದೊರೆಯಲಿದೆ ಎಂದರು.

ಲೋಕಾಯುಕ್ತ ದಾಳಿಯಲ್ಲಿ ಪ್ರಶಾಂತ್ ಮಾಡಾಳ್ ಲಂಚ ಸ್ವೀಕರಿಸುತ್ತಿರುವುದು ಸಾಕ್ಷಿ ಸಮೇತ ಸಾಬೀತಾಗಿದೆ. ಅಲ್ಲದೇ ಅವರ ಮನೆ ಮೇಲೆ ದಾಳಿ ನಡೆಸಿದಾಗಲೂ ಸುಮಾರು 8 ಕೋಟಿ 12 ಲಕ್ಷರೂ. ಅನಧಿಕೃತ ಹಣ ಮತ್ತು 4 ಕೆಜಿ ಚಿನ್ನ ಪತ್ತೆಯಾಗಿದೆ. ಇಷ್ಟಾದರೂ ಬೊಮ್ಮಾಯಿ ಸರ್ಕಾರ ಶಾಸಕ ಮಾಡಾಳ್ ವಿರೂಪಾಕ್ಷ ಅವರನ್ನು ರಕ್ಷಿಸುವ ಪ್ರಯತ್ನ ಮಾಡುತ್ತಿದ್ದು, ಈ ಕೂಡಲೇ ಶಾಸಕರನ್ನು ಸಹ ಬಂಧನ ಮಾಡಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಶಕುಂತಲಾ, ವಿಜಯಲಕ್ಷ್ಮಿ, ಹೀನಾಕೌಸರ್, ಪದ್ಮಾ, ಮಮತಾ ಮತ್ತಿತರರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ