ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಮಂಡ್ಯ ಜಿಲ್ಲೆಯ ಗೆಜ್ಜಲಗೆರೆ ಕಾಲೋನಿ ಬಳಿ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಉದ್ಘಾಟನೆ ಕಾರ್ಯಕ್ರಮಕ್ಕೆ ನಾಳೆ (ಮಾ. 12) ರಂದು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ವಾಹನ ಸಂಚಾರ ಮಾರ್ಗದಲ್ಲಿ ಬದಲಾವಣೆ ಮಾಡಲಾಗಿದೆ.
ಮಾರ್ಚ್ 12 ರ ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೆ ಎಲ್ಲಾ ರೀತಿಯ ವಾಹನಗಳನ್ನು ಈ ಕೆಳಕಂಡಂತೆ ನಿರ್ಬಂಧಿಸಿ ಮಾರ್ಗ ಬದಲಾವಣೆ ಮಾಡಿ ಜಿಲ್ಲಾಧಿಕಾರಿ ಡಾ.ಹೆಚ್. ಎನ್. ಗೋಪಾಲಕೃಷ್ಣ ಅವರು ಆದೇಶ ಹೊರಡಿಸಿದ್ದಾರೆ.
ಮೈಸೂರು ನಗರದಿಂದ ಬೆಂಗಳೂರಿಗೆ ಮಂಡ್ಯ-ಮದ್ದೂರು ಮಾರ್ಗವಾಗಿ ಸಂಚರಿಸಲಿರುವ ಎಲ್ಲಾ ರೀತಿಯ ವಾಹನಗಳು ಮೈಸೂರು-ಶ್ರೀರಂಗಪಟ್ಟಣ-ಪಾಂಡವಪುರ-ನಾಗಮಂಗಲ-ಬೆಳ್ಳೂರು ಕ್ರಾಸ್-ಕುಣಿಗಲ್-ನೆಲಮಂಗಲ-ಬೆಂಗಳೂರು ಮಾರ್ಗವಾಗಿ ಸಂಚರಿಸುವುದು.
ಬೆಂಗಳೂರಿನಿಂದ-ಮೈಸೂರಿಗೆ ಮದ್ದೂರು-ಮಂಡ್ಯ ಮಾರ್ಗವಾಗಿ ಸಂಚರಿಸಲಿರುವ ಎಲ್ಲಾ ರೀತಿಯ ವಾಹನಗಳನ್ನು ಬೆಂಗಳೂರು-ನೆಲಮಂಗಲ-ಕುಣಿಗಲ್-ಬೆಳ್ಳೂರುಕ್ರಾಸ್-ನಾಗಮಂಗಲ-ಪಾಂಡವಪುರ-ಶ್ರೀರಂಗಪಟ್ಟಣ-ಮೈಸೂರು ಮಾರ್ಗವಾಗಿ ಸಂಚರಿಸುವುದು.
ಮೈಸೂರು ನಗರದಿಂದ ಬೆಂಗಳೂರಿಗೆ ಮಂಡ್ಯ ಮಾರ್ಗವಾಗಿ ಸಂಚರಿಸಲಿರುವ ಎಲ್ಲಾ ರೀತಿಯ ವಾಹನಗಳು ಮೈಸೂರು – ಬನ್ನೂರು – ಕಿರುಗಾವಲು – ಮಳವಳ್ಳಿ – ಹಲಗೂರು – ಕನಕಪುರ – ಬೆಂಗಳೂರು ಮಾರ್ಗವಾಗಿ ಸಂಚರಿಸುವುದು.
ಬೆಂಗಳೂರಿನಿಂದ ಮೈಸೂರಿಗೆ ಮಂಡ್ಯ ಮಾರ್ಗವಾಗಿ ಸಂಚರಿಸಲಿರುವ ಎಲ್ಲಾ ರೀತಿಯ ವಾಹನಗಳನ್ನು ಬೆಂಗಳೂರು – ಚನ್ನಪಟ್ಟಣ – ಹಲಗೂರು – ಮಳವಳ್ಳಿ – ಕಿರುಗಾವಲು – ಬನ್ನೂರು -ಮೈಸೂರು ಮಾರ್ಗವಾಗಿ ಸಂಚರಿಸುವುದು.
ಮೈಸೂರು ನಗರದಿಂದ ತುಮಕೂರಿಗೆ ಮಂಡ್ಯ ಮಾರ್ಗವಾಗಿ ಸಂಚರಿಸಲಿರುವ ಎಲ್ಲಾ ರೀತಿಯ ವಾಹನಗಳನ್ನು ಮೈಸೂರು – ಶ್ರೀರಂಗಪಟ್ಟಣ – ಪಾಂಡವಪುರ – ನಾಗಮಂಗಲ – ಬೆಳ್ಳೂರುಕ್ರಾಸ್ – ತುಮಕೂರು ಮಾರ್ಗವಾಗಿ ಸಂಚರಿಸುವುದು.
ತುಮಕೂರಿನಿಂದ-ಮೈಸೂರು ನಗರಕ್ಕೆ ಮಂಡ್ಯ ಮಾರ್ಗವಾಗಿ ಸಂಚರಿಸಲಿರುವ ಎಲ್ಲಾ ರೀತಿಯ ವಾಹನಗಳನ್ನು ತುಮಕೂರು-ಬೆಳ್ಳೂರು ಕ್ರಾಸ್-ನಾಗಮಂಗಲ-ಪಾAಡವಪುರ-ಶ್ರೀರಂಗಪಟ್ಟಣ-ಮೈಸೂರು ಮಾರ್ಗವಾಗಿ ಸಂಚರಿಸುವುದು.
ಬೆಂಗಳೂರಿನಿಂದ ಮದ್ದೂರು ಮಾರ್ಗವಾಗಿ ಕೊಳ್ಳೇಗಾಲ – ಮಹದೇಶ್ವರ ಬೆಟ್ಟಕ್ಕೆ ತೆರಳುವ ಎಲ್ಲಾ ರೀತಿಯ ವಾಹನಗಳನ್ನು ಬೆಂಗಳೂರು – ಚನ್ನಪಟ್ಟಣ – ಹಲಗೂರು – ಮಳವಳ್ಳಿ – ಕೊಳ್ಳೇಗಾಲ -ಮಹದೇಶ್ವರಬೆಟ್ಟ ಮಾರ್ಗವಾಗಿ ಸಂಚರಿಸುವುದು.
ಮಹದೇಶ್ವರಬೆಟ್ಟದಿಂದ-ಬೆಂಗಳೂರಿಗೆ ಮದ್ದೂರು ಮಾರ್ಗವಾಗಿ ಕೊಳ್ಳೇಗಾಲ-ಮಳವಳ್ಳಿ-ಹಲಗೂರು-ಚನ್ನಪಟ್ಟಣ-ಬೆಂಗಳೂರು ಮಾರ್ಗವಾಗಿ ಸಂಚರಿಸುವುದು.
ಈ ಆದೇಶವನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಲು ಸೂಚಿಸಿದೆ. ತಪ್ಪಿದಲ್ಲಿ ಅಂತಹ ವ್ಯಕ್ತಿಗಳ ವಿರುದ್ಧ ಕಾನೂನು ರೀತ್ಯಾ ಕ್ರಮವಹಿಸಲಾಗುವುದು ಎಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.
ವಾಹನ ಸಂಚಾರಕ್ಕೆ ನಿರ್ಬಂಧ
ಮಾರ್ಚ್ 12 ರ ಬೆಳಿಗ್ಗೆ 7 ಗಂಟೆಯಿಂದ ಬೆಂಗಳೂರು – ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಯಾವುದೇ ವಾಹನ ಸಂಚಾರಕ್ಕೆ ಅವಕಾಶವಿರುವುದಿಲ್ಲ.
ಅಗತ್ಯ ಸೇವೆ ಮತ್ತು ಹಾಲಿನ ವಾಹನಗಳಿಗೆ ಮಾತ್ರ ಬೆಳಿಗ್ಗೆ 9 ಗಂಟೆಯವರೆಗೆ ಸರ್ವೀಸ್ ರಸ್ತೆಯಲ್ಲಿ ತೆರಳಲು ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ.
ಮದ್ದೂರು ತಾಲ್ಲೂಕಿನ ಗೆಜ್ಜಲಗೆರೆ ಕಾಲೋನಿಯ ಬಳಿ ನಡೆಯುವ ಮಾನ್ಯ ಪ್ರಧಾನ ಮಂತ್ರಿಗಳ ಕಾರ್ಯಕ್ರಮದಲ್ಲಿ ಭಾಗವಹಿಸಲು ಬರುವ ವಾಹನಗಳಿಗೆ ಈ ಕೆಳಕಂಡಂತೆ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ.
ಮಳವಳ್ಳಿ ಕಡೆಯಿಂದ ಬರುವ ವಾಹನಗಳು ಕೆ.ಎಂ.ದೊಡ್ಡಿ-ಹುಣ್ಣನದೊಡ್ಡಿ, ಬೋರಾಪರ ಗೇಟ್ ಮಾರ್ಗವಾಗಿ ಮದ್ದೂರಿಗೆ 04 ಕಿಲೋ ಮೀಟರ್ ಹಿಂದಕ್ಕೆ ಎಡಗಡೆ ಕುದುರುಗುಂಡಿ ಕಾಲೋನಿಗೆ ಹೋಗುವ ಮಾರ್ಗದಲ್ಲಿ ಹೋಗಿ ಪಾರ್ಕಿಂಗ್ ಸ್ಥಳಕ್ಕೆ ತೆರಳುವುದು.
ಮದ್ದೂರು ಮತ್ತು ಸುತ್ತಮುತ್ತಲ ಕಡೆಯಿಂದ ತೆರಳುವ ವಾಹನಗಳು, ಮದ್ದೂರು- ಐ.ಬಿ.ವೃತ್ತ- ಮಳವಳ್ಳಿ
ರಸ್ತೆಯಿಂದ ಸುಮಾರು 04 ಕಿ.ಮೀ ಮುಂದಕ್ಕೆ ಹೋಗಿ ಬಲಗಡೆಗೆ ಕುದುರುಗುಂಡಿ ಕಾಲೋನಿಗೆ ಹೋಗುವ ಮಾರ್ಗದಲ್ಲಿ ಹೋಗಿ ಪಾರ್ಕಿಂಗ್ ಸ್ಥಳಕ್ಕೆ ತೆರಳುವುದು.
ಗೆಜ್ಜಲಗೆರೆ ಸುತ್ತಮುತ್ತಲ ಗ್ರಾಮಗಳಿಂದ ತೆರಳುವವರು ಗೆಜ್ಜಲಗೆರೆ ಅಂಡರ್ ಪಾಸ್ ನಿಂದ ಕುದುರುಗುಂಡಿ ಗ್ರಾಮ, ಸಾದೋಳಲು ಕುದುರುಗುಂಡಿ ಕಾಲೋನಿ ಮಾರ್ಗವಾಗಿ ಪಾರ್ಕಿಂಗ್ ಜಾಗಕ್ಕೆ ತೆರಳುವುದು
ಮಂಡ್ಯ ಕಡೆಯಿಂದ ಬರುವ ವಾಹನಗಳು ಹನಕೆರೆ ಸರ್ವೀಸ್ ರೋಡ್ನಿಂದ ಗೆಜ್ಜಲಗೆರೆ ಗ್ರಾಮದ ಬಳಿಬಂದು ಗೆಜ್ಜಲಗೆರೆ ಅಂಡರ್ ಪಾಸ್ ನಿಂದ ಕುದುರುಗುಂಡಿ ಗ್ರಾಮ, ಸಾದೋಳಲು ಕುದುರುಗುಂಡಿ ಕಾಲೋನಿ ಮಾರ್ಗವಾಗಿ ಪಾರ್ಕಿಂಗ್ ಜಾಗಕ್ಕೆ ಸಾರ್ವಜನಿಕ ಮರು ತೆರಳಬೇಕೆಂದು ಜಿಲ್ಲಾ ಪೊಲೀಸ್ ಅಧೀಕ್ಷಕರು ಮನವಿ ಮಾಡಿದ್ದಾರೆ.




