ನಾಗಮಂಗಲದಲ್ಲಿ ಮನ್ಮುಲ್ ಮಾಜಿ ಅಧ್ಯಕ್ಷ ಜವರೇಗೌಡ ಹಾಗೂ ಒಕ್ಕಲಿಗರ ಸಂಘದ ಮಾಜಿ ಅಧ್ಯಕ್ಷ ಬೆಟ್ಟೇಗೌಡ ಅವರು ಕಾಂಗ್ರೆಸ್ ತತ್ವ ಸಿದ್ಧಾಂತಗಳನ್ನು ನಂಬಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಸಮ್ಮುಖದಲ್ಲಿ ಸೋಮವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.
ಈ ಸಂದರ್ಭದಲ್ಲಿ ನಾಗಮಂಗಲ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಎನ್.ಚಲುವರಾಯಸ್ವಾಮಿ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಿ.ಡಿ.ಗಂಗಾಧರ್ ಮತ್ತಿತರರು ಉಪಸ್ಥಿತರಿದ್ದರು.




