Thursday, September 19, 2024

ಪ್ರಾಯೋಗಿಕ ಆವೃತ್ತಿ

ಉರಿಗೌಡ-ದೊಡ್ಡನಂಜೇಗೌಡ ಹೆಸರು ಸೃಷ್ಟಿಸಿ ಬಿಜೆಪಿಯಿಂದ ನೀಚ ರಾಜಕಾರಣ : ಜೆಡಿಎಸ್

ಟಿಪ್ಪು ಸುಲ್ತಾನ್ ಅವರನ್ನು ಕೊಂದದ್ದು ಉರೀಗೌಡ ಮತ್ತು ದೊಡ್ಡ ನಂಜೇಗೌಡ ಎನ್ನುವ ಮೂಲಕ ಬಿಜೆಪಿ ನೀಚ ರಾಜಕಾರಣಕ್ಕೆ ಕೈ ಹಾಕಿದೆ.ಇದಕ್ಕಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಕಾರ್ಯಕ್ರಮವನ್ನು ಬಳಸಿಕೊಂಡಿದೆ ಎಂದು ಬಿಜೆಪಿ ವಿರುದ್ಧ ಜೆಡಿಎಸ್ ಟ್ವಿಟ್ಟರ್ ನಲ್ಲಿ ವಾಗ್ದಾಳಿ ನಡೆಸಿದೆ.

ಕಪೋಲಕಲ್ಪಿತ ಪಾತ್ರಗಳನ್ನು ಸೃಷ್ಟಿಸಿ,ಕೋಮು ದ್ವೇಷ ಹರಡಿ, ಜನರ ತಲೆಯಲ್ಲಿ ವಿಷ ಬೀಜ ಬಿತ್ತಿ ಹೆಮ್ಮರವಾಗಿ ಬೆಳೆಯಲು ತನು-ಮನ-ಧನವನ್ನೆಲ್ಲ ಅರ್ಪಿಸುವ ಪಕ್ಷ ಬಿಜೆಪಿ.ಟಿಪ್ಪು ಸುಲ್ತಾನನನ್ನು ಕೊಂದವರು ಎನ್ನಲಾಗುವ ಕಾಲ್ಪನಿಕ ಪಾತ್ರಗಳಾದ ಉರಿಗೌಡ, ನಂಜೇಗೌಡ ಎಂಬ ಹೆಸರುಗಳನ್ನು ಪ್ರಧಾನಿ ರೋಡ್ ಶೋ ನಡೆಸಿದ ಮಹಾದ್ವಾರಕ್ಕೆ ಇಟ್ಟಿದ್ದು ಏಕೆ?

“>

ಮೇಲಾಗಿ ಮಹಾದ್ವಾರಕ್ಕೆ ಇದ್ದ ಒಕ್ಕಲಿಗರ ಪರಮಪೂಜ್ಯ ಗುರು ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಗಳ ಹೆಸರನ್ನು ಮುಚ್ಚಿ, ಅವರ ಜಾಗದಲ್ಲಿ ಈ ಕಾಲ್ಪನಿಕ ಪಾತ್ರಗಳ ಹೆಸರನ್ನು ಹಾಕಿದ್ದ ಉದ್ದೇಶವೇನು? ಇಂತಹ ಚಿಲ್ಲರೆ, ದ್ವೇಷ ತುಂಬಿದ ನಡೆಯಿಂದ ಒಕ್ಕಲಿಗರ ಮನ ಗೆಲ್ಲಬಹುದು ಎಂಬ ಭ್ರಮೆಯಲ್ಲಿದ್ದರೆ ಅದು‌ ಶತಮೂರ್ಖತನ.

ಹೆಸರು ಬದಲಿಸಿದ ನಂತರ ಸಾರ್ವಜನಿಕರು, ಸ್ಥಳೀಯರು, ಹಾಗೂ ಪ್ರಗತಿಪರ ಸಂಘನೆಗಳಿಂದ ವಿರೋಧ ವ್ಯಕ್ತವಾಗಿದ್ದೆ ತಡ, ಜಿಲ್ಲಾಡಳಿತವು ಈ ಹೆಸರನ್ನು ತೆರವುಗೊಳಿಸಿದೆ. ಇಂತಹ ನಿರ್ಲಜ್ಜಗೇಡಿ ನಡೆಯು ಬಿಜೆಪಿ ಸರ್ಕಾರದ ನೀಚ ರಾಜಕಾರಣಕ್ಕೆ ಹಿಡಿದ ಕನ್ನಡಿ. ಸುಳ್ಳುಗಳಿಗೆ ಆಯಸ್ಸು ಬಹಳ ಕಮ್ಮಿ.

ಮಾಂಸ ತಿಂದು ದೇವಸ್ಥಾನಕ್ಕೆ ತೆರಳಿದ ಸಿ.ಟಿ.ರವಿಯವರೇ, ಉರಿಗೌಡ, ನಂಜೇಗೌಡನ ಹೆಸರಲ್ಲಿ ಶಾಶ್ವತ ದ್ವಾರ ನಿರ್ಮಿಸುತ್ತೀರಾ? ನಾಚಿಕೆಯಾಗಬೇಕು ನಿಮಗೆ. ಕೊಳಕು ಮಟ್ಟದ ರಾಜಕಾರಣವನ್ನೇ ಉಸಿರಾಗಿಸಿಕೊಂಡಿರುವ ನಿಮಗೆ ಪ್ರಧಾನಿಯವರ ಗುಲಾಮಗಿರಿ ಮಾಡುವ ಅನಿವಾರ್ಯತೆ ಇದೆ. ಒಕ್ಕಲಿಗರು ಸ್ವಾಭಿಮಾನಕ್ಕೆ ಹೆಸರಾದವರು.

ಇಡೀ ಒಕ್ಕಲಿಗ ಸಮುದಾಯವನ್ನ ಅಪಹಾಸ್ಯಕ್ಕೆ ಗುರಿ ಮಾಡುವ ಮೂಲಕ ಏನನ್ನು ಸಾಧಿಸಲು ಬಿಜೆಪಿ ಪಕ್ಷ ಹೊರಟಿದೆ ಎಂಬುದು ಸ್ಪಷ್ಟ. ಅವರ ಈ ಧ್ರುವೀಕರಣದ ರಾಜಕೀಯಕ್ಕೆ ಪ್ರಧಾನಿ ನರೇಂದ್ರ ಮೋದಿಯವರನ್ನು ಬಳಸಿದರೆ ಅದಕ್ಕೆ ಹೆಚ್ಚು ಪ್ರಚಾರ ಸಿಗುತ್ತದೆ ಎಂಬ ಕಲ್ಪನೆ ಅವರಿಗಿದೆ. ಅದರ ಭಾಗವಾಗಿಯೇ ಈ ಪ್ರಯೋಗ
ಅಥವಾ ಈ ಕುತಂತ್ರಿ ರಾಜಕಾರಣ ನಡೆಸಲು ಪ್ರಧಾನಿ ನಿರ್ದೇಶನ ನೀಡಿದರೆ? ಆರ್ ಎಸ್ ಎಸ್ ಪ್ರಣೀತ ಸಿದ್ಧಾಂತದ ಆಧಾರದಲ್ಲಿ ದ್ವೇಷವನ್ನು ಹರಡಲು ಒಕ್ಕಲಿಗ ಸಮುದಾಯವನ್ನು ಕೊಲೆಗಡುಕರು ಎಂದು ಚಿತ್ರಿಸಿ ಅವಮಾನ ಮಾಡಲು ಹೊರಟಿದ್ದೀರಿ.

ತಾಳ್ಮೆ, ಸ್ವಾಭಿಮಾನ, ಸ್ವಂತಿಕೆ, ಸೇವೆ, ಸೌಹಾರ್ದತೆ ಮತ್ತು ಸಮನ್ವಯ ತತ್ವಗಳನ್ನು ಅಳವಡಿಸಿಕೊಂಡು ಬೆಳೆದಿದ್ದು ಈ ನಾಡಿನ ಒಕ್ಕಲಿಗ ಸಮುದಾಯದ ಹೆಗ್ಗಳಿಕೆ. ದ್ವೇಷ ಮತ್ತು ಹಸಿಸುಳ್ಳುಗಳನ್ನು ಅವರೆಂದು ಪೋಷಿಸಿ, ಬೆಳೆಸಿದವರಲ್ಲ. ಒಂದಿಡಿ ಸಮುದಾಯವನ್ನು ಇಷ್ಟು ನಿಕೃಷ್ಟವಾದ ರಾಜಕಾರಣಕ್ಕೆ ಇಳಿಸಿ, ಬಳಸಬಹುದು ಎಂಬ ಚಿಂತನೆಯೇ ಹೊಲಸು.

ಇಂತಹ ಚಿಲ್ಲರೆ ರಾಜಕಾರಣವು ಈ ಸಲದ ಚುನಾವಣೆಯಲ್ಲಿ ಯಾವ ಫಲವನ್ನೂ ನೀಡುವುದಿಲ್ಲ. ನಾಡಿನ ಒಕ್ಕಲಿಗ ಸಮುದಾಯ ಬಹಳ ಪ್ರಬುದ್ಧವಾಗಿ ಈ ಮಹಾ ಸುಳ್ಳಿನ ರಾಜಕಾರಣವನ್ನು ಎದುರಿಸಲಿದೆ. ಚುನಾವಣೆಯಲ್ಲಿ ರಾಜ್ಯ ಬಿಜೆಪಿಗೆ ಕಪಾಳಮೋಕ್ಷ ಕಟ್ಟಿಟ್ಟಬುತ್ತಿ. ಸತ್ಯ, ಸಹಬಾಳ್ವೆ ಮತ್ತು ವಿಶ್ವ ಮಾನವ ತತ್ವವಷ್ಟೇ ಗೆಲ್ಲಲಿದೆ ಎಂದು ಟ್ವೀಟ್ ಮಾಡಿದೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!