Sunday, November 22, 2026

ಪ್ರಾಯೋಗಿಕ ಆವೃತ್ತಿ

ನಾಳೆಯಿಂದ ರಾಜ್ಯ ಮಟ್ಟದ ಗ್ರಾಮೀಣ ಕೀಡಾಕೂಟ : ಜಿಲ್ಲಾಧಿಕಾರಿ 

ಮಂಡ್ಯ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಯೋಗದೊಂದಿಗೆ 2023ರ ರಾಜ್ಯ ಮಟ್ಟದ ಗ್ರಾಮೀಣ ಕ್ರೀಡಾ ಕೂಟವನ್ನು ಮಾರ್ಚ್ 16, 17, ಹಾಗೂ 18 ರಂದು ಕೆ.ಆರ್ ಪೇಟೆಯ ತಾಲ್ಲೂಕು ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಹೆಚ್ ಎನ್ ಗೋಪಾಲಕೃಷ್ಣ ತಿಳಿಸಿದರು.

ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು,
ಸುಮಾರು 14.50 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿರುವ ಒಳಾಂಗಣ ಕ್ರೀಡಾಂಗಣ, ಈಜುಕೊಳ ಹಾಗೂ ಖೋ-ಖೋ ಸ್ಪರ್ಧೆಯನ್ನು ಉನ್ನತ ಶಿಕ್ಷಣ, ಐ.ಟಿ ಮತ್ತು ಬಿ.ಟಿ ಹಾಗೂ ವಿಜ್ಞಾನ-ತಂತ್ರಜ್ಞಾನ, ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಹಾಗೂ ಜೀವನೋಪಾಯ ಸಚಿವ ಡಾ.ಸಿ.ಎನ್ ಅಶ್ವಥ್ ನಾರಾಯಣಗೌಡ ಉದ್ಘಾಟಿಸಲಿದ್ದಾರೆ ಎಂದರು.

ಆದಿ ಚುಂಚನಗಿರಿ ಮಹಾಸಂಸ್ಥಾನದ ಡಾ.ನಿರ್ಮಲಾನಂದನಾಥ ಸ್ವಾಮೀಜಿ ದಿವ್ಯಸಾನಿಧ್ಯ ವಹಿಸಲಿದ್ದು, ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರಾದ ಡಾ.ಕೆ.ಸಿ ನಾರಾಯಣಗೌಡ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ತಿಳಿಸಿದರು.

ಮೂರು ದಿನಗಳ ಕಾಲ ನಡೆಯುವ ರಾಜ್ಯ ಮಟ್ಟದ ಖೋ-ಖೋ ಸ್ಪರ್ಧೆಯ ಗ್ರಾಮೀಣ ಕ್ರೀಡಾಕೂಟಕ್ಕೆ ರಾಜ್ಯದ ವಿವಿಧ ಜಿಲ್ಲೆಗಳಿಂದ 720 ಕ್ಕೂ ಹೆಚ್ಚು ಪುರುಷ ಮತ್ತು ಮಹಿಳಾ ಕ್ರೀಡಾಪಟುಗಳು ಆಗಮಿಸುತ್ತಿದ್ದು, ತಂಡದ ಎಲ್ಲಾ ಕ್ರೀಡಾಪಟುಗಳಿಗೆ, ವ್ಯವಸ್ಥಾಪಕರಿಗೆ ವಸತಿ ಹಾಗೂ ಊಟೋಪಚಾರದ ವ್ಯವಸ್ಥೆಯನ್ನು ಮಾಡಿಕೊಳ್ಳಲಾಗಿದೆ. ಪಂದ್ಯಗಳು ಮಾರ್ಚ್ 16 ರಂದು ಸಂಜೆ 4 ರಿಂದ 9 ರವರೆಗೆ ಮಾರ್ಚ್ 17 ರಂದು ಬೆಳಿಗ್ಗೆ 6 ರಿಂದ 9 ರವರೆಗೆ ಹಾಗೂ  ಮಾರ್ಚ್ 18 ರಂದು ಬೆಳಿಗ್ಗೆ 6 ರಿಂದ 9 ರವರೆಗೆ ನಡೆಯಲಿದೆ ಎಂದರು.

ಕ್ರೀಡಾಕೂಟದಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದ ತಂಡಗಳಿಗೆ ತಲಾ ₹10,000 ರಂತೆ 12 ಕ್ರೀಡಾಪಟುಗಳಿಗೆ ಒಟ್ಟು ₹1,20,000, ದ್ವೀತಿಯ ಸ್ಥಾನ ಪಡೆದ ತಂಡಕ್ಕೆ ತಲಾ ₹7,000ದಂತೆ ಒಟ್ಟು ₹ 84,000 ಹಾಗೂ ತೃತೀಯ ಸ್ಥಾನ ಪಡೆದ ತಂಡಕ್ಕೆ ತಲಾ ₹ 5,000 ರಂತೆ ಒಟ್ಟು ₹ 60,000 ಗಳ ನಗದು ಬಹುಮಾನ ನೀಡಲಾಗುವುದು, ಜೊತೆಗೆ ತಂಡಗಳಿಗೆ ಟ್ರೋಫಿ, ಮೆಡಲ್, ಪ್ರಶಸ್ತಿ ಪತ್ರಗಳನ್ನು ನೀಡಿ ಗೌರವಿಸಲಾಗುವುದು ಎಂದರು.

ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಓಂಪ್ರಕಾಶ್, ವಾರ್ತಾಧಿಕಾರಿ ಎಸ್.ಹೆಚ್ ನಿರ್ಮಲ ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ