Friday, November 20, 2026

ಪ್ರಾಯೋಗಿಕ ಆವೃತ್ತಿ

ಜನಸಾಮಾನ್ಯರ ಬದುಕು ಹಸನುಗೊಳಿಸಲು ಪಂಚರತ್ನ ಯೋಜನೆ : ಡಿ.ಸಿ ತಮ್ಮಣ್ಣ

ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಪಂಚರತ್ನ ಯೋಜನೆಯನ್ನು ಪಕ್ಷದ ಪ್ರಣಾಳಿಕೆಯಲ್ಲಿ ಸೇರಿಸಿರುವುದು ಜನಸಾಮಾನ್ಯರ ಬದುಕನ್ನು ಉಳಿಸಿ ಬೆಳೆಸಲು ಎಂದು ಶಾಸಕ ಡಿ.ಸಿ.ತಮ್ಮಣ್ಣ ತಿಳಿಸಿದರು.

ಮದ್ದೂರು ತಾಲ್ಲೂಕು ಶೆಟ್ಟಹಳ್ಳಿ ಗ್ರಾಮದ ಮಂಚಮ್ಮ ದೇವರ ಹಬ್ಬದ ಪ್ರಯುಕ್ತ ಗ್ರಾಮಸ್ಥರಿಂದ ಅಭಿನಂದನೆ ಸ್ವೀಕರಿಸಿ ಅವರು ಮಾತನಾಡಿದರು.

ರೈತರ ಬದುಕು ಅಸನಾಗಬೇಕಾದರೆ ಜೆಡಿಎಸ್ ಪಕ್ಷವನ್ನು ಬೆಂಬಲಿಸಬೇಕು. ಹೆಚ್.ಡಿ.ಕುಮಾರಸ್ವಾಮಿ ಅವರು ತಮ್ಮ ಮುಖ್ಯಮಂತ್ರಿ ಅವಧಿಯಲ್ಲಿ ರೈತರ ಸಾಲವನ್ನು ಮನ್ನಾ ಮಾಡಿದ್ದಾರೆ. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಹಾಗೂ ಕುಮಾರಸ್ವಾಮಿ ಅವರು ಮಂಡ್ಯಜಿಲ್ಲೆಯನ್ನು ಎಂದಿಗೂ ಕಡೆಗಣಿಸಿಲ್ಲ. ಅಧಿಕಾರಕ್ಕೆ ಬಂದಾಗಲೆಲ್ಲಾ ಜಿಲ್ಲೆಯ ಅಭಿವೃದ್ದಿಗಾಗಿ ನೂರಾರು ಕೋಟಿ ಅನುದಾನ ನೀಡುತ್ತಾ ಬಂದಿದ್ದಾರೆ. ಇದರಿಂದ ಜಿಲ್ಲೆ ಅಭಿವೃದ್ದಿ ಹೊಂದುವುದರಲ್ಲಿ ಜೆಡಿಎಸ್ ಕೊಡುಗೆ ಅನನ್ಯವಾಗಿದೆ. ಇದನ್ನು ಮತದಾರರು ಅರ್ಥೈಸಿಕೊಳ್ಳಬೇಕೆಂದು ತಿಳಿಸಿದರು.

ಇದೇ ವೇಳೆ ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಚಿಕ್ಕತಿಮ್ಮೇಗೌಡ, ಕಾರ್ಯಾಧ್ಯಕ್ಷ ಮಾದನಾಯಕನಹಳ್ಳಿ ರಾಜಣ್ಣ, ಗ್ರಾ.ಪಂ ಅಧ್ಯಕ್ಷ ಶಿವಲಿಂಗಯ್ಯ, ಸದಸ್ಯರಾದ ಎಸ್.ಬಿ.ತಮ್ಮೇಗೌಡ, ಪೂರ್ಣಿಮಾ, ಕೇಬಲ್ ಕೃಷ್ಣೇಗೌಡ, ಮಾಜಿ ಸದಸ್ಯ ಶಿವರಾಜು, ಶ್ರೀನಿವಾಸಚಾರಿ, ನೇತಾಜಿ ಸಂಘದ ಸದಸ್ಯ ಸುರೇಶ್, ದಾಸ್ ಪ್ರಕಾಶ್, ಚಿರು, ನಿಂಗರಾಜು, ಕಪನಿ ತಮ್ಮಯ್ಯ, ಕಾಲೋನಿ ಪುಟ್ಟಯ್ಯ, ವಿಶ್ವ ಸೇರಿದಂತೆ ಹಲವರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ