ಯು
ಮಂಡ್ಯ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಯೋಗದಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀ ಡಾ.ಬಾಲಗಂಗಾಧರನಾಥ ಮಹಾಸ್ವಾಮೀಜಿ ಒಳಾಂಗಣ ಕ್ರೀಡಾಂಗಣದ ಉದ್ಘಾಟನೆ ಹಾಗೂ 2022-23ನೇ ಸಾಲಿನ ರಾಜ್ಯ ಮಟ್ಟದ ಖೋ-ಖೋ ಸ್ಪರ್ಧೆಯ ಗ್ರಾಮೀಣ ಕ್ರೀಡಾಕೂಟದ ಉದ್ಘಾಟನಾ ಸಮಾರಂಭವನ್ನು ಉದ್ದೇಶಿಸಿ ಅವರು ಮಾತನಾಡಿದರು.
ಕ್ರೀಡೆ ಅಂದರೆ ವೃತ್ತಿಪರ ಕ್ರೀಡೆಯಾಗಬೇಕಿಲ್ಲ. ನಾವು ದಿನನಿತ್ಯ ಆಡುವ ಆಟಗಳು ಕೂಡ ಕ್ರೀಡೆಗಳೇ ಹಾಗಾಗಿ ಎಲ್ಲರೂ ಕ್ರೀಡೆಯಲ್ಲಿ ಪಾಲ್ಗೊಂಡು ದೈಹಿಕವಾಗಿ ಆರೋಗ್ಯವಾಗಿರಿ. ಸಮಾಜದಲ್ಲಿ ಮಕ್ಕಳು ದುಶ್ಚಟಗಳಿಗೆ ಬಲಿಯಾಗದೇ ಉತ್ತಮ ನಾಗರೀಕರಾಗಿ ರೂಪುಗೊಳ್ಳಲು ಕ್ರೀಡೆ ಹಾಗೂ ಇನ್ನಿತರೆ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಬೇಕು. ಇದಕ್ಕೆ ಬೇಕಿರುವ ಮೂಲಭೂತ ವ್ಯವಸ್ಥೆ ಕ್ರೀಡಾಂಗಣ ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ನಿರ್ಮಾಣಬೇಕು ಎಂದರು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಚಿವ ಡಾ.ಕೆ.ಸಿ ನಾರಾಯಣಗೌಡ ಮಾತನಾಡಿ, ನೂತನವಾಗಿ ನಿರ್ಮಿಸಿರುವ ಒಳಾಂಗಣ ಕ್ರೀಡಾಂಗಣ ಕರ್ನಾಟಕಕ್ಕೆ ಮಾದರಿಯಾಗಲಿ ಎಂದರು.
ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಮಹಾ ಸಂಸ್ಥಾನದ ಡಾ.ನಿರ್ಮಲಾನಂದನಾಥ ಸ್ವಾಮೀಜಿ, ಪುರುಷೋತ್ತಮನಂದ ಸ್ವಾಮೀಜಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಮುಡಾ ಅಧ್ಯಕ್ಷ ಕೆ.ಶ್ರೀನಿವಾಸ, ಕೆ.ಆರ್ ಪೇಟೆ ಪುರಸಭಾ ಅಧ್ಯಕ್ಷೆ ಮಹದೇವಿ ನಂಜುಂಡ, ಜಿಲ್ಲಾಧಿಕಾರಿ ಡಾ.ಹೆಚ್ ಎನ್ ಗೋಪಾಲಕೃಷ್ಣ ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಾಂತ ಎಲ್ ಹುಲ್ಮನಿ, ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್ ಸೇರಿದಂತೆ ಇನ್ನಿತರರು ಹಾಜರಿದ್ದರು




