Thursday, November 19, 2026

ಪ್ರಾಯೋಗಿಕ ಆವೃತ್ತಿ

ಜೆಡಿಎಸ್ ಪ್ರತಿಭಟನೆ ವೇಳೆ ಕೆಎಸ್‌ಆರ್‌ಟಿಸಿ ಬಸ್ ಚಾಲಕನ ಮೇಲೆ ಹಲ್ಲೆ

ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ಮಾಡುತ್ತಿದ್ದ ವೇಳೆ ಕೆಎಸ್‌ಆರ್‌ಟಿಸಿ ನೌಕರನ ಮೇಲೆ ಹಲ್ಲೆ ನಡೆದಿರುಗ ಘಟನೆ ಮಳವಳ್ಳಿ ಪಟ್ಟಣದ ಅನಂತ್‌ರಾಂ ವೃತ್ತದಲ್ಲಿ ಶನಿವಾರ ನಡೆದಿದೆ.

ಜೆಡಿಎಸ್ ಪಕ್ಷದ ಬಗ್ಗೆ ಮಾಜಿ ಸಚಿವರಾದ ಪಿ.ಎಂ ನರೇಂದ್ರಸ್ವಾಮಿ ಅವರು ‘ಪುಟ್ಗೊಸಿ’ ಎಂಬ ಪದ ಬಳಕೆಯನ್ನು ಮಾಡಿದ್ದಾರೆಂದು ಆರೋಪಿಸಿ ತಾಲ್ಲೂಕು ಪಂಚಾಯಿತಿಯಿಂದ ನೂರಾರು ಜೆಡಿಎಸ್ ಕಾರ್ಯಕರ್ತರು ಮೈಸೂರು ಮಳವಳ್ಳಿ ರಸ್ತೆಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ ಪಟ್ಟಣದ ಅನಂತ್‌ರಾಂ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ಮಾಡುತ್ತಿದ್ದ ವೇಳೆ ಸಾರಿಗೆ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬ ಪ್ರತಿಭಟನಾಕಾರರನ್ನು ಬೈದ ಎಂಬ ಕಾರಣಕ್ಕೆ ಜೆಡಿಎಸ್ ಕಾರ್ಯಕರ್ತರು ಬಸ್‌ ಅನ್ನು ಬಡಿಯಲು ಮುಂದಾಗುತ್ತಿದ್ದಂತೆ ಬಸ್‌ಗೆ ಏಕೆ ಬಡಿಯುತ್ತೀರಿ ಎಂದು ಚಾಲಕ ಬಸ್ ಇಳಿದು ಪ್ರಶ್ನಿಸಿದರು.

ಈ ಸಂದರ್ಭದಲ್ಲಿ ಹಲವು ಜೆಡಿಎಸ್ ಕಾರ್ಯಕರ್ತರು ಚಾಲಕನ ಮೇಲೆ ಏಕಾ ಏಕಿ ಹಲ್ಲೆ ನಡೆಸಿದ್ದಾರೆ. ಸ್ಥಳದಲ್ಲಿಯೇ ಇದ್ದ ಪೊಲೀಸರು ಪರಿಸ್ಥಿತಿಯನ್ನು ಶಾಂತಗೊಳಿಸಿ ಬಸ್‌ಚಾಲಕನ್ನು ಬಸ್ ಹತ್ತಿಸಿ ಕಳುಹಿಸಿಕೊಟ್ಟಿದ್ದಾರೆ. ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ಯಾವುದೇ ದೂರು ದಾಖಲಾಗಿಲ್ಲ ಎನ್ನುವುದು ತಿಳಿದು ಬಂದಿದೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ