Monday, November 23, 2026

ಪ್ರಾಯೋಗಿಕ ಆವೃತ್ತಿ

ರಾಷ್ಟ್ರಪತಿ ದ್ರೌಪದಿ ಮುರ್ಮುರಿಂದ ಪದ್ಮ ಪ್ರಶಸ್ತಿ ಪ್ರದಾನ : ಪದ್ಮ ವಿಭೂಷಣ ಸ್ವೀಕರಿಸಿದ ಎಸ್.​ಎಂ. ಕೃಷ್ಣ

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಸಕ್ತ ಸಾಲಿನ ಪದ್ಮ ಪ್ರಶಸ್ತಿಗಳನ್ನು (Padma Awards 2023) ಬುಧವಾರ ಪ್ರದಾನ ಮಾಡಿದರು. ಕರ್ನಾಟಕದಿಂದ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವರಾಗಿದ್ದ    ಎಸ್​.ಎಂ. ಕೃಷ್ಣರವರು ಪದ್ಮ ವಿಭೂಷಣ ಸ್ವೀಕರಿಸಿದರು.

2023ನೇ ಸಾಲಿನಲ್ಲಿ ಪದ್ಮ ಪ್ರಶಸ್ತಿಗೆ ಭಾಜನರಾದ 106 ಮಂದಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಶಸ್ತಿ ಪ್ರಧಾನ ಮಾಡಿದ್ದು, ಈ ಬಾರಿ ಕರ್ನಾಟಕದ 8 ಸಾಧಕರಿಗೆ ಪದ್ಮ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ, ಸುಧಾ ಮೂರ್ತಿ ಹಾಗೂ ಸಾಹಿತಿ ಎಸ್‌.ಎಲ್‌.ಭೈರಪ್ಪ ಸೇರಿದಂತೆ ಒಟ್ಟು 106 ಮಂದಿಗೆ ಪ್ರಶಸ್ತಿ ಪ್ರಧಾನ ಮಾಡಿ ಗೌರವಿಸಲಾಗಿದೆ.

ಇದನ್ನೂ ಓದಿ : ಮೌಲ್ಯಯುತ ರಾಜಕೀಯದ ಮೂಲಕ ಯುವಜನಾಂಗಕ್ಕೆ ಎಸ್.ಎಂ.ಕೃಷ್ಣ ಮೇಲ್ಪಂಕ್ತಿ

ಕರ್ನಾಟಕದಿಂದ ವಿಜ್ಞಾನಿ ಖಾದರ್‌ವಲ್ಲಿ ದುಡೇಕುಲ, ಉಮ್ಮತ್ತಾಟ್‌ ನೃತ್ಯ ಕಲಾವಿದೆ ರಾಣಿ ಮಾಚಯ್ಯ, ತಮಟೆ ವಾದಕ ಮುನಿವೆಂಕಟಪ್ಪ, ರಶೀದ್‌ ಅಹಮದ್‌ ಖಾದ್ರಿ, ಎಸ್‌.ಸುಬ್ಬರಾಮನ್‌ ಅವರಿಗೂ ಪ್ರಶಸ್ತಿ ಪ್ರಧಾನ ಮಾಡಲಾಗಿದೆ. ಇವರಲ್ಲದೇ ಖ್ಯಾತ ಗಾಯಕಿ ವಾಣಿ ಜಯರಾಂ ಹಾಗೂ ಆಸ್ಕರ್‌ ಪ್ರಶಸ್ತಿ ಗೆದ್ದ ಸಂಗೀತ ನಿರ್ದೇಶಕ ಎಂ.ಎಂ.ಕೀರವಾಣಿ ಅವರು ಸಹ ಪ್ರಶಸ್ತಿ ಸ್ವೀಕರಿಸಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ