Friday, November 20, 2026

ಪ್ರಾಯೋಗಿಕ ಆವೃತ್ತಿ

ಮಳವಳ್ಳಿ| ನಾಳೆ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿ ಅನಾವರಣ

ಮಳವಳ್ಳಿ ಪಟ್ಟಣದ ಪ್ರವಾಸಿ ಮಂದಿರದ ಮುಂಭಾಗ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 10 ಅಡಿ ಎತ್ತರದ ಕಂಚಿನ ಪುತ್ಥಳಿಯನ್ನು ಮಾ. 24ರಂದು ಅನಾವರಣಗೊಳಿಸಲಾಗುವುದು ಎಂದು ಎಂದು ಶಾಸಕ ಡಾ.ಕೆ.ಅನ್ನದಾನಿ ತಿಳಿಸಿದರು.

ಕಾರ್ಯಕ್ರಮದ ಪೂರ್ವಸಿದ್ದತೆಗಳನ್ನು ಪರಿಶೀಲಿಸಿ ನಂತರ ಮಳವಳ್ಳಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಾತನಾಡಿದ ಅವರು, ಶುಕ್ರವಾರ ಮಧ್ಯಾಹ್ನ 2ಗಂಟೆಗೆ ನಡೆಯುವ ಲೋಕಾರ್ಪಣೆ ಹಾಗೂ ವೇದಿಕೆ ಕಾರ್ಯಕ್ರಮದ ಸಾನಿದ್ಯವನ್ನು ಮೈಸೂರಿನ ಉರಿಲಿಂಗ ಪೆದ್ದಿಮಠದ ಜ್ಞಾನಪ್ರಕಾಶ್ ಸ್ವಾಮೀಜಿ ಹಾಗೂ ಚಾಮರಾಜನಗರದ ನಳಂದ ವಿಶ್ವವಿದ್ಯಾಲಯ ಬೋದಿದತ್ತ ಬಂತೆಜೀ ವಹಿಸಲಿದ್ದು, ವೇದಿಕೆ ಕಾರ್ಯಕ್ರಮವನ್ನು ಜೆಡಿಎಸ್ ಯುವ ಘಟಕದ ರಾಜ್ಯ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಉದ್ಘಾಟಿಸಲಿದ್ದಾರೆ. 10 ಅಡಿ ಎತ್ತರದ ಡಾ.ಬಿ.ಆರ್.ಅಂಬೇಡ್ಕರ್ ಅವರ ಕಂಚಿನ ಪುತ್ಥಳಿಯನ್ನು ನಾನೇ ಲೋಕಾರ್ಪಣೆಗೊಳಿಸುವೆ ಎಂದು ಮಾಹಿತಿ ನೀಡಿದರು.

ಮುಖ್ಯಅತಿಥಿಗಳಾಗಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಮೊಮ್ಮಗ ಪ್ರಕಾಶ್ ಅಂಬೇಡ್ಕರ್, ವಿಧಾನ ಪರಿಷತ್ ಸದಸ್ಯ ಮರಿತಿಬ್ಬೇಗೌಡ, ಶಾಸಕರಾದ ಸಿ.ಎಸ್.ಪುಟ್ಟರಾಜು, ಡಿ.ಸಿ.ತಮ್ಮಣ್ಣ, ಎನ್.ಮಹೇಶ್, ಅಶ್ವಿನ್ ಕುಮಾರ್, ಬೆಂಗಳೂರಿನ ಡಾ.ಬಿ.ಆರ್.ಅಂಬೇಡ್ಕರ್ ಮೆಡಿಕಲ್ ಕಾಲೇಜಿನ ಅಧ್ಯಕ್ಷ ರಾಧಕೃಷ್ಣ, ಮಾಜಿ ಶಾಸಕ ತಿಮ್ಮರಾಯಪ್ಪ, ಪುರಸಭೆ ಅಧ್ಯಕ್ಷೆ ರಾಧಾ ನಾಗರಾಜು, ಉಪಾಧ್ಯಕ್ಷ ಎಂ.ಟಿ.ಪ್ರಶಾಂತ್, ಸದಸ್ಯ ಸಿದ್ದರಾಜು, ಸದಸ್ಯರು ಹಾಗೂ ನಾಮನಿರ್ದೇಶನ ಸದಸ್ಯರು ಪಾಲ್ಗೊಳ್ಳುವವರು ಎಂದು ತಿಳಿಸಿದರು.

ಪಟ್ಟಣದ ಸಾರಿಗೆ ಬಸ್ ನಿಲ್ದಾಣದಿಂದ ಹತ್ತಾರು ಜಾನಪದ ಕಲಾತಂಡಗಳೊಂದಿಗೆ ಮುಖ್ಯಅತಿಥಿಗಳನ್ನು ಮೆರವಣಿಗೆ ಮೂಲಕ ಕಾರ್ಯಕ್ರಮದ ಸ್ಥಳಕ್ಕೆ ಕರೆದುಕೊಂಡು ಬರಲಾಗುವುದು. ಪುತ್ಥಳಿ ಲೋಕಾರ್ಪಣೆ ನಂತರ ಸಮೀಪದ ಜೂನಿಯರ್ ಕಾಲೇಜು ಮೈದಾನದಲ್ಲಿ ಬೃಹತ್ ಸಾರ್ವಜನಿಕ ಸಭೆ ನಡೆಯಲಿದೆ. ಹೀಗಾಗಿ ಜಿಲ್ಲೆಯ ಡಾ.ಬಿ.ಆರ್.ಅಂಬೇಡ್ಕರ್ ಅಭಿಮಾನಿಗಳು, ವಿವಿಧ ಸಂಘಟನೆಗಳು ಸದಸ್ಯರು, ಮುಖಂಡರು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಬೇಕು ಎಂದು ಮನವಿ ಮಾಡಿದರು.
ಪುರಸಭೆ ಸದಸ್ಯ ಟಿ.ನಂದಕುಮಾರ್, ಮುಖಂಡರಾದ ಪ್ರಭು, ಕಾಂತರಾಜು, ಶ್ರೀಧರ್ ಇದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ