Tuesday, November 24, 2026

ಪ್ರಾಯೋಗಿಕ ಆವೃತ್ತಿ

ನಾಳೆ ಬಸರಾಳು ಯುಗಾದಿ ಉತ್ಸವ – ಸಂಗೀತ ರಸ ಸಂಜೆ ಕಾರ್ಯಕ್ರಮ

ಎಸ್.ಡಿ. ಜಯರಾಮ್‌ ಸಮಗ್ರ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ವತಿಯಿಂದ ಮಾ.25ರಂದು ಸಂಜೆ 4 ಗಂಟೆಗೆ ಮಂಡ್ಯ ತಾಲ್ಲೂಕಿನ ಬಸರಾಳು ಗ್ರಾಮದ ಕಾಲಭೈರವೇಶ್ವರ ದೇವಸ್ಥಾನದ ಆವರಣದಲ್ಲಿ ಬಸರಾಳು ಯುಗಾದಿ ಉತ್ಸವ – ಸಂಗೀತ ರಸ ಸಂಜೆ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಬಿಜೆಪಿ ಮುಖಂಡ ಅಶೋಕ್ ಜಯರಾಂ ತಿಳಿಸಿದರು.

ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಅವರು, ಜಿಲ್ಲೆಯ ಜನಪರ ರಾಜಕಾರಣಿ ಎಸ್.ಡಿ. ಜಯರಾಮ್ – ಪದ್ಮಭೂಷಣ ಪ್ರಶಸ್ತಿ ಪುರಸ್ಕೃತೆ ವಾಣಿ ಜಯರಾಮ್‌ ರವರ ನನಪಿನಲ್ಲಿ ‘ಬಸರಾಳು ಯುಗಾದಿ ಉತ್ಸವ ಸಂಗೀತ ರಸ ಸಂಜೆ ಕಾರ್ಯಕ್ರಮ’ ಹಾಗೂ ಅಭಿನಂದನಾ ಸಮಾರಂಭವನ್ನು ಆಯೋಜಿಸಲಾಗಿದೆ ಎಂದು ಹೇಳಿದರು.

ಈ ಕಾರ್ಯಕ್ರಮದಲ್ಲಿ ಸಂಗೀತ ನಿರ್ದೇಶಕ ಗುರುರಾಜ್, ಸ ರಿ ಗ ಮ ಪ ಕಾರ್ಯಕ್ರಮದ ಪ್ರತಿಭಾವಂತ ಗಾಯಕರಾದ ವೆಂಕಟೇಶ್, ಸುಬ್ರಮಣ್ಯ, ಶಶಿಕಲಾ, ಅಂಕಿತ ಕುಂಡು ಮತ್ತು ಮಂಡ್ಯದ ಜೂನಿಯರ್ ಜೇಸುದಾಸ್ ಡಾ.ಮಾದೇಶ್ ಗಾಯನ ಮಾಡುವರು. ದಿವ್ಯಾ ಆಲೂರು ನಿರೂಪಣೆ ಮಾಡುವರು ಎಂದರು.

ಇದೇ ಸಂದರ್ಭದಲ್ಲಿ ಬಸರಾಳು ಹೋಬಳಿಯ 8 ಗ್ರಾ.ಪಂ.ಗಳ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಎಲ್ಲಾ ಸದಸ್ಯರನ್ನು ಸನ್ಮಾನಿಸಲಾಗುವುದು. ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಪ್ರತಿಭಾವಂತ ಸಾಧಕರನ್ನ ಅಭಿನಂದಿಸಲಾಗುವುದು ಎಂದರು.

ಗೋಷ್ಠಿಯಲ್ಲಿ ಡಾ.ಮಾದೇಶ್, ಕಾರಸವಾಡಿ ಮಹದೇವ, ಪ್ರತಿಭಾಂಜಲಿ ಡೇವಿಡ್ ಮತ್ತಿತರರು ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ