Thursday, November 19, 2026

ಪ್ರಾಯೋಗಿಕ ಆವೃತ್ತಿ

ಬಸರಾಳಿನಲ್ಲಿ ಬಿಜೆಪಿ ಕಚೇರಿ ಉದ್ಘಾಟಿಸಿದ ಅಶೋಕ್ ಜಯರಾಂ

ಮಂಡ್ಯ ತಾಲೂಕಿನ ಬಸರಾಳು ಗ್ರಾಮದಲ್ಲಿ ಬಸರಾಳು ಹೋಬಳಿ ಘಟಕದ ಬಿಜೆಪಿ ಕಚೇರಿಯನ್ನು ಮುಖಂಡ ಅಶೋಕ್‌ಜಯರಾಂ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅಶೋಕ್ ಜಯರಾಂ, ಈ ದಿನ ಬಹುದಿನಗಳ ಕನಸಾಗಿದ್ದ ಬಸರಾಳು ಹೊಬಳಿ ವ್ಯಾಪ್ತಿಯಲ್ಲಿ ಬಿಜೆಪಿ ಕಚೇರಿ ತೆರೆಯಲಾಗಿದೆ. ಮಂಡ್ಯ ಕೇಂದ್ರದಿಂದ 25 ಕಿಲೋ ಮೀಟರ್ ದೂರದ ಈ ಭಾಗದಲ್ಲಿ ಬಿಜೆಪಿ ಕಾರ್ಯಕರ್ತರ ಬಹುದಿನಗಳ ಬೇಡಿಕೆಯನ್ನು ಈಡೇರಿಸಲಾಗಿದೆ. ಇನ್ನುಮುಂದೆ ಕಚೇರಿಯಲ್ಲಿ ಬಿಜೆಪಿ ಕಾರ್ಯಕ್ರಮಗಳ ಆಯೋಜನೆ, ಸಭೆಗಳು, ಸಾರ್ವಜನಿಕರ ಕುಂದು ಕೊರತೆ ಕೇಳಿ ಪರಿಹಾರ ನಡೆಸಲು ಅನುಕೂಲವಾಗಿದೆ ಎಂದು ನುಡಿದರು.

ಬಸರಾಳು ಯುಗಾದಿ ಉತ್ಸವದ ಸಂದರ್ಭದಲ್ಲೇ ಬಿಜೆಪಿ ಕಚೇರಿಯ ಉದ್ಘಾಟನೆಯಾಗುತ್ತಿರುವುದು ಸಂತಸವಾಗಿದೆ, ಬಿಜೆಪಿ ನಾಯಕರಾದ ಚಂದಗಾಲು ಶಿವಣ್ಣ ಅವರ ಅನುಪಸ್ಥಿತಿಯಲ್ಲಿ, ಅವರ ಮಾರ್ಗದರ್ಶನದಲ್ಲಿ ಕಾರ್ಯಕರ್ತರ ಸಮ್ಮುಖದಲ್ಲಿ ಕಚೇರಿ ತೆರೆಯಲಾಗಿದೆ. ಬಿಜೆಪಿ ಕಾರ್ಯಕರ್ತರ ಈ ಕಚೇರಿಯನ್ನು ಸದುಪಯೋಗ ಪಡಿಸಿಕೊಂಡು ಪಕ್ಷ ಸಂಘಟನೆಗೆ ಆದ್ಯತೆ ನೀಡಬೇಕೆಂದು ಕೋರಿದರು.

ಕಾರ್ಯಕ್ರಮದಲ್ಲಿ ಮಾಜಿ ಶಾಸಕಿ ಪ್ರಭಾವತಿ ಜಯರಾಂ, ಬಿಜೆಪಿ ಗ್ರಾಮಾಂತರ ಅಧ್ಯಕ್ಷೆ ಸುಜಾತಾ ರಮೇಶ್, ಬಸರಾಳು ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಶಿವು, ಬಿಜೆಪಿ ಗ್ರಾಮಾಂತರ ಯುವ ಮೋರ್ಚಾ ಅಧ್ಯಕ್ಷ ಧನಂಜಯ್, ಪ್ರಧಾನ ಕಾರ್ಯದರ್ಶಿ ನಿರಂಜನ್, ಮಧುಸೂದನ್, ಮಹಿಳಾ ಮೋರ್ಚಾದ ಸದಸ್ಯರಾದ ಕಾವ್ಯ, ಸಾಕಮ್ಮ, ಪುಟ್‌ಬಾಲ್ ಮುಂಜು, ಕಾರಸವಾಡಿ ಮಹದೇವು, ರವಿ ಮತ್ತಿತರರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ