Thursday, November 19, 2026

ಪ್ರಾಯೋಗಿಕ ಆವೃತ್ತಿ

ಮರ ಬಿದ್ದು ಸ್ಕೂಟರ್ ಸವಾರ ಗಂಭೀರ ಗಾಯ

ಶ್ರೀರಂಗಪಟ್ಟಣದ ಸಮೀಪ ಪಾಲಹಳ್ಳಿ ಬಳಿ ರಸ್ತೆಯಲ್ಲಿ ಚಲಿಸುತ್ತಿದ್ದ ಸ್ಕೂಟರ್ ಸವಾರನ ಮೇಲೆ ಒಣ ಮರ ಒಂದು ಬಿದ್ದು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ಭಾನುವಾರ ಮಧ್ಯಾಹ್ನ ತಾಲೂಕಿನ ಕೆ ಶೆಟ್ಟಹಳ್ಳಿ ಗ್ರಾಮದ ಸೋಮಶೇಖರ್ ಶ್ರೀರಂಗಪಟ್ಟಣದಿಂದ ಮೈಸೂರು ಕಡೆಗೆ ತಮ್ಮ ಕಾರ್ಯ ನಿಮಿತ್ತ ತೆರಳುತ್ತಿದ್ದಾಗ ರಸ್ತೆ ಬದಿ ಒಣ ಮರ ಒಂದು ಏಕಾಏಕಿ ಬೈಕ್ ಸವಾರನ ಮೇಲೆ ಬಿದ್ದಿದೆ.

ತೀವ್ರವಾಗಿ ಗಾಯಗೊಂಡು ರಸ್ತೆಯಲ್ಲಿ ನರಳುತ್ತಿದ್ದ ಗಾಯಾಳುವನ್ನು ಸ್ಥಳೀಯ ಜನರು ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಘಟನೆಯಿಂದ ಪಾಲಹಳ್ಳಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು, ರಸ್ತೆಯುದ್ದಕ್ಕೂ ಹಲವಾರು ಒಣಗಿದ ಮರಗಳು ಇಂತಹ ಅವಘಡಗಳಿಗೆ ಕಾದು ನಿಂತಿದ್ದರೂ ಸಹ ಅರಣ್ಯ ಇಲಾಖೆ ಯಾವುದೇ ರೀತಿಯ ಕ್ರಮವನ್ನು ತೆಗೆದುಕೊಂಡು ಒಣಮರಗಳನ್ನು ತೆರವು ಮಾಡುವ ಕಾರ್ಯವನ್ನು ಕೈಗೊಂಡಿಲ್ಲದಿರುವುದು ನಿಜಕ್ಕೂ ವಿಷಾದ ಎಂದು ತಿಳಿಸಿದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ