Thursday, November 19, 2026

ಪ್ರಾಯೋಗಿಕ ಆವೃತ್ತಿ

10 ವರ್ಷಗಳಲ್ಲಿ ದೇಶದಲ್ಲಿ ಸಾಕಷ್ಟು ಸುಧಾರಣೆ : ಅಶೋಕ್‌ಜಯರಾಂ

ಪ್ರಧಾನಮಂತ್ರಿ ನರೇಂದ್ರಮೋದಿ ಅವಧಿಯ ಕಳೆದ 10 ವರ್ಷಗಳಿಂದ ಭಾರತದೇಶವು ಸಾಕಷ್ಟು ಸುಧಾರಣೆಗಳನ್ನು ಕಾಣುತ್ತಿದೆ ಎಂದು ಮಂಡ್ಯ ವಿಧಾನಸಭಾ ಕ್ಷೇತ್ರದ ಬಿಜೆಪಿ ಯುವ ಮುಖಂಡ ಅಶೋಕ್‌ ಜಯರಾಂ ಹೇಳಿದರು.

ಮಂಡ್ಯ ನಗರದ ಕಲ್ಲಹಳ್ಳಿಯ ರಂಗಮಂದಿರದ ಆವರಣದಲ್ಲಿ ಭಾರತೀಯ ಜನತಾ ಪಕ್ಷದ ನಗರ ಮಂಡಲ ಆಯೋಜಿಸಿದ್ದ 1ನೇ ಮತ್ತು 2ನೇ ಮಹಾಶಕ್ತಿ ಕೇಂದ್ರದ ಬೂತ್ ಸಮಿತಿ ಸದಸ್ಯರ ಹಾಗೂ ಪಕ್ಷದ ಕಾರ್ಯಕರ್ತರ ಸಭೆಯನ್ನು ಗಣ್ಯರೊಂದಿಗೆ ಉದ್ಘಾಟಿಸಿ ಅವರು ಮಾತನಾಡಿದರು.

ಜನರ ಆರೋಗ್ಯ ಹಿತಕ್ಕಾಗಿ ಆಯುಷ್ಮಾನ್ ಆರೋಗ್ಯ ಯೋಜನೆ, ಹೊಗೆರಹಿತ ಮನೆಗಾಗಿ ಉಜ್ವಲ ಯೋಜನೆಯಡಿ ಗ್ಯಾಸ್ ಸಿಲಿಂಡರ್ ವಿತರಣೆ, ಶ್ವಚ್ಛಭಾರತ, ಸ್ವಾಭಿಮಾನ ರಕ್ಷಣೆಗಾಗಿ ಶೌಚಾಲಯ ನೀಡಿರುವುದು, ರೈತರ ಆರ್ಥಿಕ ಚೇತರಿಕೆಗಾಗಿ ಕಿಸಾನ್ ಸಮ್ಮಾನ್ ಯೋಜನೆ, ನೇರವಾಗಿ ಖಾತೆಗಳಿಗೆ ಹಣ ಸಂದಾಯವಾಗುತ್ತಿರುವುದನ್ನು ಬಳಸುತ್ತಿದ್ದಿರಿ ಎಂದು ನುಡಿದರು.

ಎಸ್.ಡಿ. ಜಯರಾಮ್ ಸಮಗ್ರ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಮುಖ್ಯಸ್ಥ ಡಾ.ಪರಮೇಶ್ ಮಾತನಾಡಿ, ಮಂಡ್ಯ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಗೆಲುವನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ, ಈ ಬಾರಿ ಮಂಡ್ಯ ಕ್ಷೇತ್ರದಲ್ಲಿ ಕಮಲವನ್ನು ಅರಳಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮೈಸೂರು ವಿವಿ ಸಿಂಡಿಕೇಟ್ ಮಾಜಿ ಸದಸ್ಯಡಾ.ಈ.ಸಿ.ನಿಂಗರಾಜ್‌ಗೌಡ ಮಾತನಾಡಿದರು. ಇದೇ ಸಂದರ್ಭದಲ್ಲಿ ಗಾಯಕರಾದ ಡಾ.ಮಾದೇಶ್ ಮತ್ತು ಯರಹಳ್ಳಿ ಪುಟ್ಟಸ್ವಾಮಿ ಇವರ ತಂಡದಿಂದ ಗಾಯನ ಕಾರ್ಯಕ್ರಮವು ಮನಮೋಹಕವಾಗಿ ನಡೆಯಿತು.

ಕಾರ್ಯಕ್ರಮದಲ್ಲಿ ಬಿಜೆಪಿ ನಗರ ಮೋರ್ಚಾ ಅಧ್ಯಕ್ಷ ವಿವೇಕ್, ಮಾಜಿ ಅಧ್ಯಕ್ಷ ಎಚ್ ಆರ್ ಅರವಿಂದ್, ಬಜರಂಗ ಸೇನೆಯ ರಾಜ್ಯಾಧ್ಯಕ್ಷ ಮಂಜುನಾಥ, ಬಿಜೆಪಿ ಒಬಿಸಿ ಮೋರ್ಚಾ ಅಧ್ಯಕ್ಷ ರಮೇಶ್, ಎಸ್.ಡಿ. ಜಯರಾಮ್ ಸಮಗ್ರ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಸಂಚಾಲಕ ಕಾರಸವಾಡಿ ಮಹದೇವ್, ಫುಟ್ಬಾಲ್ ಮಂಜು, ನವನೀತ, ನಗರಸಭಾ ಮಾಜಿ ಸದಸ್ಯ ಕಲ್ಲಹಳ್ಳಿ ನಾಗೇಂದ್ರ, ನಾಮಿನಿ ಸದಸ್ಯರಾದ ಪ್ರಸನ್ನ, ಚಂದ್ರ ಹಾಜರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ